• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿಯ ಸಾವಿನ ರಾಜಕೀಯ ಸುತ್ತಲಿನ ಸಿದ್ದು ರಿಪೋರ್ಟ್‌!

|
Google Oneindia Kannada News

ಬೆಂಗಳೂರು, ಅಕ್ಟೋಬರ್ 04: ಮಾಜಿ ಸಿಎಂ ಸಿದ್ದರಾಮಯ್ಯ ಕಾಲದಲ್ಲಿ ನಡೆದ ಕೆಲವು ಘಟನೆಗಳನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಂಡಿತ್ತು. ಇದರಿಂದ ರಾಜಕೀಯ ಲಾಭವನ್ನು ಪಡೆದುಕೊಂಡಿತ್ತು. ಪರೇಶ್ ಮೇಸ್ತಾ ಸಾವು ಕೋಮಸಂಘರ್ಷದ ಬಲಿ ಎಂದೇ ಬಿಂಬಿಸಲಾಗಿತ್ತು. ಬಿಜೆಪಿ ಸಿದ್ದರಾಮಯ್ಯ ಸರ್ಕಾರದ ವಿರುದ್ದ ತಿರುಗಿಬಿದ್ದು ಸಿಬಿಐ ತನಿಖೆಗೆ ಆಗ್ರಹಿಸಿತ್ತು. ಪ್ರಕರಣ ಸಿಬಿಐ ತನಿಖೆಗೆ ವಹಿಸಿದ ನಂತರ ತನಿಖೆ ಪೂರ್ಣವಾಗಿದ್ದು ಪರೇಶ್ ಮೇಸ್ತಾ ಸಾವು ಆಕಸ್ಮಿಕ ಎಂದು ಬಿ ರಿಪೋರ್ಟ್‌ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

ಪರೇಶ್ ಮೇಸ್ತಾ ಸಾವಿನ ಬಗ್ಗೆ ಸಿಬಿಐ ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಕೆಯನ್ನು ಮಾಡಿರುವುದರಿಂದ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ಟ್ವಿಟ್ಟರ್‌ನಲ್ಲಿ ಕುಟುಕಿದ್ದಾರೆ. "ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ.@BJP4Karnataka ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ" ಎಂದು ಟ್ವೀಟ್ ಮಾಡಲಾಗಿದೆ.

ಹಿಂದೂ ಕಾರ್ಯಕರ್ತರ ಸಾವಿನ ಸರಣಿ 2015ರಿಂದ 2022ಹಿಂದೂ ಕಾರ್ಯಕರ್ತರ ಸಾವಿನ ಸರಣಿ 2015ರಿಂದ 2022

ಮಾಜಿ ಸಿಎಂ ಸಿದ್ದರಾಮಯ್ಯ ಅಧಿಕಾರ ಅವಧಿಯಲ್ಲಿ ಕೋಮು ಮತ್ತು ರಾಜಕೀಯ ಕಾರಣಕ್ಕೆ ಅತಿಹೆಚ್ಚು ಸದ್ದು ಮಾಡಿದ್ದು ಡಿಕೆ ರವಿ ಆತ್ಮಹತ್ಯೆ ಪ್ರಕರಣ, ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ, ತೀರ್ಥಹಳ್ಳಿ ನಂದಿತಾ ಸಾವಿನ ಪ್ರಕರಣ ಮತ್ತು ಪರೇಶ್ ಮೇಸ್ತಾ ಸಾವಿನ ಪ್ರಕರಣ ಸೇರಿದಂತೆ ಕೆಲವು ಹಿಂದು ಕಾರ್ಯಕರ್ತರ ಹತ್ಯೆ ಪ್ರಕರಣಗಳು ಹೆಚ್ಚು ಸದ್ದು ಮಾಡಿತ್ತು. ಇದರಲ್ಲಿ ಹಿಂದು ಕಾರ್ಯಕರ್ತರನ್ನು ಕೊಂದವರನ್ನು ಜೈಲಿಗಟ್ಟಲಾಗಿದೆ. ಆದರೆ ಅನುಮಾನಸ್ಪದ ಸಾವುಗಳು ಸಾಕಷ್ಟು ರಾಜಕೀಯಕ್ಕೆ ಕಾರಣವಾಗಿದ್ದವು.

 ಸಿಬಿಐನಿಂದ ನ್ಯಾಯಾಲಯಕ್ಕೆ ಬಿ ರಿಪೋರ್ಟ್‌

ಸಿಬಿಐನಿಂದ ನ್ಯಾಯಾಲಯಕ್ಕೆ ಬಿ ರಿಪೋರ್ಟ್‌

ಕಳೆದ ಐದು ವರ್ಷಗಳ ಹಿಂದೆ ಉತ್ತರ ಕನ್ನಡದ ಹೊನ್ನಾವರದಲ್ಲಿ ಪರೇಶ್ ಮೇಸ್ತಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ. ಈ ಪ್ರಕರಣ ಸಂಬಂಧ ಸಿಬಿಐ ಆಕಸ್ಮಿಕ ಸಾವು ಎಂದು ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಕೆ ಮಾಡಿದೆ. 2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಡಿ.8ರಂದು ಹೊನ್ನಾವರ ನಗರದ ಶನಿದೇವಾಸ್ಥಾನದ ಹಿಂಭಾಗದ ಶೆಟ್ಟಿ ಕೆರೆಯಲ್ಲಿ ಮೇಸ್ತಾ ಶವವಾಗಿ ಪತ್ತೆಯಾಗಿದ್ದ. ಯುವಕನನ್ನು ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು ಹಿಂದು ಸಂಘಟನೆಗಳು ಹಾಗೂ ಬಿಜೆಪಿಗರು ಆರೋಪಿಸಿದ್ದರು. ಮೇಸ್ತಾನನ್ನು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು, ಹಿಂದೂ ಕಾರ್ಯಕರ್ತ ಎಂದು ಬಿಂಬಿಸಿದ್ದರಿಂದ ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗಿತ್ತು. ಆಗ ಬಿಜೆಪಿ ಸಿಬಿಐ ತನಿಖೆಗೆ ಒತ್ತಾಯವನ್ನು ಮಾಡಿತ್ತು. ಸಿದ್ದು ಸರ್ಕಾರ ಸಿಬಿಐ ತನಿಖೆಗೆ ಆದೇಶವನ್ನು ಮಾಡಿತ್ತು. ಸಿಬಿಐ 4 ವರ್ಷಗಳ ತನಿಖೆಯನ್ನು ನಡೆಸಿದೆ. ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ, ಪರೇಶ್ ಮೇಸ್ತಾ ಹತ್ಯೆ ನಡೆದಿಲ್ಲ. ಇದೊಂದು ಆಕಸ್ಮಿಕ ಸಾವು ಎಂದು ಅಭಿಪ್ರಾಯ ವ್ಯಕ್ತಪಡಿಸಲಾಗಿದೆ. ಇಂದು ಸಿಬಿಐ ಸಲ್ಲಿಸಿರುವ ವರದಿ ಪರಿಶೀಲಿಸಿದ ಹೊನ್ನಾವರ ನ್ಯಾಯಾಲಯ, ನವೆಂಬರ್ 16ಕ್ಕೆ ತೀರ್ಪು ಮುಂದೂಡಿದೆ.

 ಸಿಬಿಐ ರಿಪೋರ್ಟ್‌ನಿಂದ ಬಿಜೆಪಿ ಮೇಲೆ ಮುಗಿಬಿದ್ದ ಸಿದ್ದು

ಸಿಬಿಐ ರಿಪೋರ್ಟ್‌ನಿಂದ ಬಿಜೆಪಿ ಮೇಲೆ ಮುಗಿಬಿದ್ದ ಸಿದ್ದು

ಪರೇಶ್ ಮೇಸ್ತಾ ಸಾಧಾರಣ ಮೀನುಗಾರ ಯುವಕನಾಗಿದ್ದ. ಆದರೆ ಆತನ ಸಾವಿನ ಬಗ್ಗೆ ಅನುಮಾನಗಳಿದ್ದವು. ರಾಜ್ಯ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದರು ಕರಾವಳಿ ಭಾಗದಲ್ಲಿ ಕೋಮ ಸಾಮರಸ್ಯ ಹದಗೆಡಲು ಕಾರಣವಾಗಿತ್ತು. ಇವೆಲ್ಲದರ ನಡುವೆ ಬಿಜೆಪಿ ಒತ್ತಾಯಕ್ಕೆ ಮಣಿದು ಸಿಬಿಐ ತನಿಖೆಗೆ ಸಿದ್ದು ಸರ್ಕಾರ ಆದೇಶ ನೀಡಿತ್ತು. ಬಿಜೆಪಿಯ ಆರೋಪಗಳಿಗೆ ವಿರುದ್ದವಾಗಿ ಸಿಬಿಐ ರಿಪೋರ್ಟ್‌ ಸಲ್ಲಿಕೆಯಾಗಿರುವುದರಿಂದ ಸಿದ್ದರಾಮಯ್ಯ ಬಿಜೆಪಿ ಮೇಲೆ ಮುಗಿಬಿದ್ದಿದ್ದಾರೆ. ಪರೇಶ್ ಮೇಸ್ತಾ ಸಾವು ರಾಜಕೀಯಕ್ಕೆ ಕಾರಣವಾಗಿದೆ. "ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ.@BJP4Karnataka ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

 ಡಿವೈಎಸ್ಪಿ ಗಣಪತಿ ಸಾವು ಸಹ ರಾಜಕೀಯ ತಿರುವು

ಡಿವೈಎಸ್ಪಿ ಗಣಪತಿ ಸಾವು ಸಹ ರಾಜಕೀಯ ತಿರುವು

ಸಿದ್ದರಾಮಯ್ಯ ಸರ್ಕಾರ ಅಧಿಕಾರದಲ್ಲಿದ್ದ ವೇಳೆಯಲ್ಲಿ ಅಂದರೆ 2015 ಮಾರ್ಚ್ 16ರಂದು ಡಿಕೆ ರವಿ ಕೋರಮಂಗಲದ ತಮ್ಮ ಫ್ಲಾಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಈ ವೇಳೆ ಐಎಎಸ್‌ ಅಧಿಕಾರಿಯಾಗಿದ್ದ ಡಿಕೆ ರವಿ ಸಾವಿನ ಬಗ್ಗೆ ಅನುಾನ ಉಂಟಾಗಿತ್ತು. ಡಿಕೆ ರವಿ ಸಾವಿನ ತನಿಖೆ ರಾಜಕೀಯ ತಿರುವನ್ನು ಪಡೆದುಕೊಂಡಾಗ ಸಿಬಿಐ ತನಿಖೆಗೆ ವಹಿಸಲಾಗಿತ್ತು. ಸಿಬಿಐ ಸಹ ತನಿಖೆಯನ್ನು ನಡೆಸಿ ಡಿಕೆ ರವಿ ಸಾವು ಕೊಲೆಯಲ್ಲ ಆತ್ಮ ಹತ್ಯೆ ಎಂಬ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿತ್ತು. ಇನ್ನು ಕೊಡಗಿನ ಮಡಿಕೇರಿಯ ಲಾಡ್ಜ್ ವೊಂದರಲ್ಲಿ ಮಂಗಳೂರಿನ ಡಿವೈಎಸ್ಪಿಯಾಗಿದ್ದ ಎಂ.ಕೆ ಗಣಪತಿ ಅವರು ಜುಲೈ 7, 2016ರಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಈ ಸಂದರ್ಭದಲ್ಲಿ ಅವರು ಮಂಗಳೂರಿನಲ್ಲಿ ಡಿವೈಎಸ್ಪಿಯಾಗಿದ್ದರು. ಸಾಯುವುದಕ್ಕೂ ಮೊದಲು ನೀಡಿದ್ದ ಸಂದರ್ಶನದಲ್ಲಿ ಗಣಪತಿ ತಮ್ಮ ಸಾವಿಗೆ ಕೆ.ಜೆ ಜಾರ್ಜ್, ಪೊಲೀಸ್ ಅಧಿಕಾರಿಗಳಾದ ಪ್ರಣವ್ ಮೊಹಾಂತಿ, ಎ.ಎಂ ಪ್ರಸಾದ್ ಕಾರಣ ಎಂದು ಹೇಳಿದ್ದ ವಿಡಿಯೋ ಹರಿದಾಡಿತ್ತು. ಈ ಸಾವಿಗೆ ಒತ್ತಡ ಪ್ರಚೋದನೆ ಕಾರಣ ಎನ್ನಲಾಗಿತ್ತು. ಆದರೆ ಗಣಪತಿ ಸಾವು ಆತ್ಮಹತ್ಯೆ ಎಂಬುದು ಖಚಿತವಾಗಿತ್ತು. ಈ ಎಲ್ಲಾ ಸಾವಿನಲ್ಲೂ ಬಿಜೆಪಿ ಲಾಭ ಮಾಡಿಕೊಂಡಿತು ಎಂಬುದು ಕಾಂಗ್ರೆಸ್‌ನ ಆರೋಪವಾಗಿದೆ.

 ನಂದಿತಾ ಸಾವು ಅನುಮಾನಕ್ಕೆ ಆಸ್ಪದವಾಗಿತ್ತು

ನಂದಿತಾ ಸಾವು ಅನುಮಾನಕ್ಕೆ ಆಸ್ಪದವಾಗಿತ್ತು

ತೀರ್ಥಹಳ್ಳಿಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ನಂದಿತಾ ಅ.2014ರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಳು. ನಂದಿತಾಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಅನುಮಾನ ವ್ಯಕ್ತಪಡಿಸಲಾಗಿತ್ತು. ಅಂದಿನ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರ ಪ್ರಕರಣವನ್ನು ಸಿಐಡಿ ಪೊಲೀಸರು ತನಿಖೆಗೆ ಆದೇಶಿಸಿತ್ತು. ಸಿಐಡಿ ತನಿಖೆಯ ಬಳಿಕ ಇದೊಂದು ಆತ್ಮಹತ್ಯೆ ಅನ್ನೋ ವರದಿ ಬಂದಿತ್ತು. ಈ ಸಾವಿನಲ್ಲೂ ಬಿಜೆಪಿ ರಾಜಕೀಯ ಲಾಭಕ್ಕೆ ಬಳಸಿಕೊಂಡಿದೆ ಎನ್ನಲಾಗುತ್ತದೆ.

ಸಿದ್ದರಾಮಯ್ಯ
Know all about
ಸಿದ್ದರಾಮಯ್ಯ
English summary
Paresh Mesta's death, DK Ravi and DySP MK Ganapathy's suicide of student Theerthahalli Nandita's death during the Siddaramaiah government was the inquiry report. Here's why Siddaramaiah is accusing the BJP of doing politics of death,Know More,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X