ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಫೋನ್ ಕದ್ದಾಲಿಕೆ ಪ್ರಕರಣ: ಸಿಬಿಐನಿಂದ ಎಫ್‌ಐಆರ್ ದಾಖಲು

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 1: ಕಾಂಗ್ರೆಸ್ -ಜೆಡಿಎಸ್ ಸಮ್ಮಿಶ್ರ ಸರ್ಕಾರದ ವೇಳೆ ನಡೆದ ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್‌ಐಆರ್ ದಾಖಲಿಸಿದೆ.

ಈ ಸಂಬಂಧ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿದ್ದರು. ಎಚ್‌ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಆಡಳಿತ ಪಕ್ಷದ ಸಚಿವರು, ಶಾಸಕರು, ಪಕ್ಷಗಳ ಕೆಲ ಮುಖಂಡರು, ರಾಜಕೀಯ ನಾಯಕರು ಆಪ್ತ ಸಹಾಯಕರು, ಸಲಹೆಗಾರರ ಫೋನ್ ಕದ್ದಾಲಿಕೆ ಮಾಡಲಾಗಿತ್ತು.

ಫೋನ್ ಕದ್ದಾಲಿಕೆ ಆರೋಪ: ಕುಮಾರಸ್ವಾಮಿ ಸ್ಪಷ್ಟನೆಫೋನ್ ಕದ್ದಾಲಿಕೆ ಆರೋಪ: ಕುಮಾರಸ್ವಾಮಿ ಸ್ಪಷ್ಟನೆ

ಫೋನ್‌ ಕದ್ದಾಲಿಕೆ ಮಾಡಿರುವ ಆರೋಪ ಹೊತ್ತಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ನಾನು ಯಾವುದೇ ತಪ್ಪು ಮಾಡಿಲ್ಲ. ಯಾವ ತನಿಖೆ ಬೇಕಾದರೂ ಮಾಡಲಿ ಎಂದು ಹೇಳಿದ್ದಾರೆ.

CBI Filed FIR Against Phone Tapping Case

ರಾಜ್ಯ ಸರ್ಕಾರದ ಮನವಿ ಮೇರೆಗೆ ಸಿಬಿಐ ಪ್ರಕರಣ ಕೈಗೆತ್ತಿಕೊಂಡಿದ್ದು, ಈಗ ಎಫ್‌ಐಆರ್‌ ದಾಖಲಿಸಿದೆ.ದೋಸ್ತಿ ಸರ್ಕಾರ ಉಳಿಸಿಕೊಳ್ಳಲು ತೀವ್ರ ಪ್ರಯತ್ನ ನಡೆಸಲಾಗಿತ್ತು. ಹೀಗಾಗಿ ಪ್ರಮುಖ ದೂರವಾಣಿ ಕದ್ದಾಲಿಕೆ ಮಾಡಲಾಗಿತ್ತು ಎಂದು ಆರೋಪಿಸಲಾಗಿದೆ.

ಎಫ್‌ಐ ಆರ್‌ ದಾಖಲಿಸಿರುವ ಸಿಬಿಐ ಅತಿ ಶೀಘ್ರದಲ್ಲೇ ತನಿಖೆ ಆರಂಭಿಸಲಿದೆ. ಪೊಲೀಸ್‌ ಇಲಾಖೆಯಲ್ಲಿ ಫೋನ್‌ ಕದ್ದಾಲಿಕೆ ನಡೆದಿದೆ ಎಂಬ ಮಾಹಿತಿಯ ಮೇರೆಗೆ ಪ್ರಕರಣದ ಜಾಡು ಹಿಡಿದಾಗ, ಇಡೀ ಜಾಲ ಬಯಲಿಗೆ ಬಂದಿತ್ತು.

English summary
CBI Filed FIR Against Phone Tapping Case, The Central Bureau of Investigation (CBI) has lodged an FIR in connection with illegal phone tapping of several politicians and officers of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X