ಗಾಲಿ ರೆಡ್ಡಿಗೆ ಇನ್ನೊಂದು ಕೇಸಲ್ಲಿ ಜಾಮೀನು ಸಿಕ್ರೆ ಹಬ್ಬ!
ಬೆಂಗಳೂರು, ಡಿ.3: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಜಾಮೀನು ಪಡೆದು ವಾರ ಕಳೆಯುವುದರೊಳಗೆ ಮತ್ತೊಂದು ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದಾರೆ. ಒಟ್ಟು ಐದು ಅದಿರು ನಾಪತ್ತೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ರೆಡ್ಡಿ ಅವರಿಗೆ ಈಗ ನಾಲ್ಕು ಪ್ರಕರಣದಲ್ಲಿ ಬೇಲ್ ಸಿಕ್ಕಿದೆ. ಇನ್ನೊಂದು ಪ್ರಕರಣದಲ್ಲಿ ಜಾಮೀನು ಸಿಕ್ಕರೆ ಜೈಲಿನಿಂದ ಹೊರಬರುವ ಸಾಧ್ಯತೆಯಿದೆ.
ಬಳ್ಳಾರಿ ಸಂಸದ ಬಿ. ಶ್ರೀರಾಮುಲು ಅವರ ಸೋದರಳಿಯ ಕಂಪ್ಲಿ ಶಾಸಕ ಸುರೇಶ್ ಬಾಬು ಸೇರಿ ಒಟ್ಟು 14 ಜನರಿಗೆ ಇತೀಚೆಗೆ ಜಾಮೀನು ಸಿಕ್ಕಿತ್ತು. ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ಜನಾರ್ಧನ ರೆಡ್ಡಿ ಮತ್ತು ಅವರ ಆಪ್ತ ಆಲೀ ಖಾನ್ ಸೇರಿದಂತೆ ಒಟ್ಟು 10 ಜನರಿಗೆ ಜಾಮೀನು ಮಂಜೂರು ಮಾಡಿದೆ. ಇಬ್ಬರ ಶ್ಯೂರಿಟಿ, ಎರಡು ಲಕ್ಷ ನಗದು, ಪಾಸ್‌ಪೋರ್ಟ್ ವಶಕ್ಕೆ ನೀಡುವುದು ಹಾಗೂ ವಿಚಾರಣೆಗೆ ಹಾಜರಾಗುವುದು ಸೇರಿದಂತೆ ಮತ್ತಿತರ ಷರತ್ತುಗಳನ್ನು ವಿಧಿಸಿ ನ್ಯಾಯಾಲಯ ಜಾಮೀನು ನೀಡಿದೆ.

ಬೆಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿವೇಕ್ ಹೆಬ್ಬಾರ್ ಅವರಿಗೆ ಅಕ್ಟೋಬರ್ ತಿಂಗಳಿನಲ್ಲಿ ಸಿಬಿಐ ವಿಶೇಷ ನ್ಯಾಯಲಯ ಜಾಮೀನು ಮಂಜೂರು ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು. [ಎಎಂಸಿ: ರೆಡ್ಡಿಗೆ ಷರತ್ತುಬದ್ಧ ಜಾಮೀನು]
ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಜನಾರ್ದನ ರೆಡ್ಡಿ, ಶಾಸಕರಾದ ಸತೀಶ್ ಸೈಲ್, ನಾಗೇಂದ್ರ, ಸುರೇಶ್‌ಬಾಬು, ಆನಂದ್‌ಸಿಂಗ್ ಹಾಗೂ ಅರಣ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಸೇರಿದಂತೆ ಒಟ್ಟು 18 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿತ್ತು [ಜನಾರ್ದನ ರೆಡ್ಡಿ ಆರೋಪಿ ನಂ.1]
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೂಡ್ಲಿಗಿ ಶಾಸಕ ನಾಗೇಂದ್ರ, ಕಾರವಾರದ ಶಾಸಕ ಸತೀಶ್ ಸೈಲ್, ಅಂಕೋಲದ ಮಾಜಿ ಅರಣ್ಯಾಧಿಕಾರಿ ನರೇಂದ್ರ ಹಿತಲಮಕ್ಕಿ, ಮಾಜಿ ರೇಂಜ್ ಆಫೀಸರ್ ಜಿ.ಸಿ ನಾಯಕ್, ಬೇಲೇಕೇರಿ ಬಂದರು ಅಧಿಕಾರಿ ಕ್ಯಾಪ್ಟನ್ ಸಿ ಸ್ವಾಮಿ, ಪ್ರೊಪ್ರೆಟರ್ ಲಾಲ್ ಮಹಲ್ ಲಿ. ರಾಜಕುಮಾರ್ ಇವರೆಲ್ಲರ ಜತೆಗೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬಂಧನವಾಗಿದ್ದು ಎಲ್ಲರೂ ಜೈಲಿನಲ್ಲಿದ್ದಾರೆ. [ಸುರೇಶ್ ಬಾಬುಗೆ ಜಾಮೀನು ಮಂಜೂರು]












Click it and Unblock the Notifications