ಸಿಸಿಬಿ ಅಧಿಕಾರಿಗಳ ಕಾಲಮಿತಿ ರದ್ದುಗೊಳಿಸಿದ ಸರ್ಕಾರ

ಬೆಂಗಳೂರು, ನವೆಂಬರ್ 9: ಸಿಸಿಬಿ ಅಧಿಕಾರಿಗಳಿಗೆ ಇನ್ನುಮುಂದೆ ಯಾವುದೇ ಕಾಲಮಿತಿ ಇರುವುದಿಲ್ಲ, ಅಧಿಕಾರಿಗಳ ಐದು ವರ್ಷ ಕಾಲಮಿತಿಯನ್ನು ರದ್ದುಪಡಿಸಿ ಸರ್ಕಾರ ಆದೇಶ ಹೊರಡಿಸಿದೆ.

2015ರಲ್ಲಿ ಕಮಿಷನರೇಟ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ಸಂಚಾರ ಹಾಗೂ ಸಿಸಿಬಿ ವಿಭಾಗದಲ್ಲಿ ಐದು ವರ್ಷ ಸೇವೆ ಸಲ್ಲಿಸಿರುವ ಎಸಿಪಿ ಹಾಗೂ ಇನ್‌ಸ್ಪೆಕ್ಟರ್ ಗಳನ್ನು ನಗರದಿಂದ ಹೊರಗಡೆ ವರ್ಗಾವಣೆ ಮಾಡಲು ರಾಜ್ಯ ಸರ್ಕಾರ ನಿಯಮ ಜಾರಿಗೊಳಿಸಿತ್ತು.

ಆದರೆ ಸಿಸಿಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ತಮ್ಮ ವ್ಯಾಪ್ತಿಯಲ್ಲಿ ಅಪರಾಧಗಳ ಬಗ್ಗೆ ವೈಯಕ್ತಿಕ ಮಾಹಿತಿ ಮತ್ತು ವಿಶೇಷ ಅನುಭವ ಪಡೆದುಕೊಂಡಿರುತ್ತಾರೆ. ಇದು ಅಪರಾಧ ಪತ್ತೆ ಮತ್ತು ನಿಯಂತ್ರಣಕ್ಕೆ ನೆರವಾಗುತ್ತದೆ.

CCB cops exempted from mandatory transfer rule

ಹಾಗಾಗಿ ಅವರ ಸೇವೆಯನ್ನು ನಿರ್ದಿಸಷ್ಟ ಕಾಲಾವಧಿಗೆ ಸೀಮಿತಗೊಳಿಸಲು ಸಾಧ್ಯವಿಲ್ಲ ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಿಸಿಬಿಯಲ್ಲಿ ಕಾರ್ಯನಿರ್ವಹಿಸುವ ಎಸಿಪಿ ಮತ್ತು ಇನ್‌ಸ್ಪೆಕ್ಟರ್ ಗಳಿಗೆ ಐದು ವರ್ಷ ಅವಧಿ ನಿಯಮದಿಂದ ವಿನಾಯಿತಿ ನೀಡಲಾಗಿದ್ದು ಇನ್ನುಳಿದಂತೆ ಹಿಂದಿನ ವರ್ಗಾವಣೆ ನೀತಿಯಲ್ಲಿ ಯಥಾಸ್ಥಿತಿ ಮುಂದುವರೆಯಲಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಡಂ ವಿಜಯಕುಮಾರ್ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+