ಅಂದರ್ ಬಾಹರ್ ಜೂಜು ಅಡ್ಡೆ ಮೇಲೆ ಸಿಸಿಬಿ ದಾಳಿ:32 ಮಂದಿ ಬಂಧನ
ಬೆಂಗಳೂರು, ಡಿಸೆಂಬರ್ 25: ಅಂದರ್ ಬಾಹರ್ ಅಡ್ಡೆಯ ಮೇಲೆ ಸಿಸಿಬಿ ಪೊಲೀಸರು ಮಂಗಳವಾರ ಕಾರ್ಯಾಚರಣೆ ನಡೆಸಿದ್ದು, 32 ಮಂದಿಯನ್ನು ಬಂಧಿಸಿದ್ದಾರೆ.
ಬೆಂಗಳೂರು ನಗರ ಸದ್ದುಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ್ದು, ಆರೋಪಿಗಳಿಂದ 3,64,೦೦೦ ಸಾವಿರ ನಗದನ್ನು ವಶಪಡಿಸಿಕೊಳ್ಳಲಾಗಿದೆ. 52 ಇಸ್ಪೀಟ್ ಕಾರ್ಡ್‌ಗಳು, ಒಂದು ಕಾರ್ಪೆಟ್ ವಶಪಡಿಸಿಕೊಳ್ಳಲಾಗಿದೆ.
ಮಂಜುನಾಥ್, ನಂದೀಶ್, ಫಯಾಜ್, ಪ್ರದೀಪ್, ಲಿಯಾಖತ್, ಆರಿಫ್, ಸೆಂಥಿಲ್, ನವೀನ್, ಸುನಿಲ್, ಮುನಿರೆಡ್ಡಿ ಸೇರಿ 32 ಮಂದಿಯನ್ನು ಬಂಧಿಸಲಾಗಿದೆ.

ಅಪರಾಧ ವಿಭಾಗದ ಅಪರ ಪೊಲೀಸ್ ಆಯುಕ್ತರಾದ ಅಲೋಕ್ ಕುಮಾರ್, ಉಪ ಪೊಲೀಸ್ ಆಯುಕ್ತ ಗಿರೀಶ್ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಿದ್ದು, ಸಹಾಯಕ ಪೊಲೀಸ್ ಆಯುಕ್ತ ಬಿಎಸ್ ಮೋಹನ್ ಕುಮಾರ್, ನಿರಂಜನ್ ಕುಮಾರ್ ತಂಡ ಯಶಸ್ವಿಯಾಗಿದ್ದಾರೆ.












Click it and Unblock the Notifications