ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡ್ರಗ್ ಪೆಡ್ಲರ್ ಸೆರೆ, 40 ಲಕ್ಷ ರೂ. ಮೌಲ್ಯದ ಎಂಡಿಎಂಎ ವಶ !

|
Google Oneindia Kannada News

ಬೆಂಗಳೂರು, ಮಾರ್ಚ್ 05: ವಿದ್ಯಾರ್ಥಿ ವೀಸಾ ಹೆಸರಿನಲ್ಲಿ ಬೆಂಗಳೂರಿಗೆ ಬಂದು ಪ್ರತಿಷ್ಠಿತರಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಯುಗೋಚಿಕೂ ವಿಕ್ಟರ್ ಬಂಧಿತ ಆರೋಪಿ. ಈತನಿಂದ ಬರೋಬ್ಬರಿ 40 ಲಕ್ಷ ರೂ. ಮೌಲ್ಯದ ಅರ್ಧ ಕೆ.ಜಿ. ಎಂಡಿಎಂಎ ಎರಡು ಮೊಬೈಲ್ ವಶಪಡಿಸಿಕೊಂಡಿದ್ದಾರೆ.

ವಿದ್ಯಾರ್ಥಿ ವೀಸಾ ಮೇಲೆ ಬಂದಿದ್ದ ವಿಕ್ಟರ್, ವೀಸಾ ಅವಧಿ ಮುಗಿದರೂ ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ. ಮುಂಬಯಿನಲ್ಲಿರುವ ಪರಿಚಿತ ಮೈಕೇಲ್ ಎಂಬಾತನಿಂದ ಮಾದಕ ವಸ್ತುಗಳನ್ನು ಬೆಂಗಳೂರಿಗೆ ತರಿಸಿಕೊಳ್ಳುತ್ತಿದ್ದ. ಇಲ್ಲಿ ಪ್ರತಿಷ್ಠಿತ ವ್ಯಕ್ತಿಗಳ ಸಂಪರ್ಕ ಬೆಳೆಸಿ ಅವರಿಗೆ ದುಬಾರಿ ಬೆಲೆಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ. ಕಳೆದ ಮೂರು ವರ್ಷಗಳಿಂದಲೂ ಇವನು ಡ್ರಗ್ ಡೀಲಿಂಗ್ ನಲ್ಲಿ ಶಾಮೀಲಾಗಿದ್ದ.

CCB police arrest drug peddler, seized 40 lakh worth MDMA

Recommended Video

ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡ್ಕೋಳ್ತಿದ್ದಾರಾ ನಮ್ಮ ಸಚಿವರು? | Oneindia Kannada

ಈತನ ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ ಈ ಜಾಲದಲ್ಲಿ ಸಿಲುಕಿರುವ ಇತರೆ ಪೆಡ್ಲರ್‌ಗಳಿಗಾಗಿ ಶೋಧ ನಡೆದಿದೆ. ಸಿಸಿಬಿ ಪೊಲೀಸ್ ಇನ್‌ಸ್ಪೆಕ್ಟರ್ ಲಕ್ಷ್ಮೀ ಕಾಂತಯ್ಯ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ವಿಕ್ಟರ್ ವಿಚಾರಣೆ ವೇಳೆ ಕೆಲವು ಪ್ರತಿಷ್ಠಿತ ವ್ಯಕ್ತಿಗಳು ಡ್ರಗ್ ಖರೀದಿ ಮಾಡಿರುವ ಮಾಹಿತಿ ಸಿಕ್ಕಿದ್ದು ಅವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ. ಬಂಧಿತ ವಿಕ್ಟರ್ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.

English summary
CCB police have arrested a Nigeria-based drug peddler who was selling MDMA drug know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X