ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು: ಗೂಂಡಾ ಕಾಯ್ದೆಯಡಿ ಮನೆಗಳ್ಳನ ಬಂಧನ

|
Google Oneindia Kannada News

ಬೆಂಗಳೂರು, ಜ. 20: ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ವಿವೇಕನಗರ ಪೊಲೀಸರು ಕುಖ್ಯಾತ ಮನೆಗಳನೊಬ್ಬನನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಅಪಾರ ಪ್ರಮಾಣದ ನಗದು ಮತ್ತು ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ವಿಶ್ವಾಸ್ (22) ಬಂಧಿತ ಆರೋಪಿ. ಈತ ತನ್ನ ಸಹಚರರರೊಂದಿಗೆ ಸೇರಿಕೊಂಡು ಹಲ್ಲೆ, ಕೊಲೆ ಯತ್ನ, ರಾಬರಿ, ಸರ ಅಪಹರಣ, ದರೋಡೆ, ಮನೆ ಕಳ್ಳತನ ಮುಂತಾದ ಹಲವು ಕೃತ್ಯಗಳಲ್ಲಿ ಭಾಗಿಯಾಗಿದ್ದ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದವು. ಪೊಲೀಸ್ ಆಯುಕ್ತ ಎಂಎನ್ ರೆಡ್ಡಿ ಅವರ ಆದೇಶದಂತೆ ಈತನನ್ನು ಬಂಧಿಸಿ 32 ಪ್ರಕರಣ ಪತ್ತೆಹಚ್ಚಲಾಗಿದೆ.[ಗೂಂಡಾ ಕಾಯ್ದೆ ಎಂದರೆನು?]

ccb

ಹಿಂದೆ ಒಮ್ಮೆ ಜೈಲು ವಾಸ ಅನುಭವಿಸಿದ್ದ ವಿಶ್ವಾಸ್ ಜಾಮೀನಿನ ಮೇಲೆ ಬಿಡುಗಡೆಯಾಗಿ ಮತ್ತೆ ತನ್ನ ಕೃತ್ಯ ಮುಂದುವರಿಸಿದ್ದ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬೆಂಗಳೂರು ನಗರದ ಕೇಂದ್ರ ವಿಭಾಗದ ಡಿಸಿಪಿ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆ ನಡೆದಿತ್ತು.

ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವ ಅಥವಾ ಇಂಥ ಕೃತ್ಯದಲ್ಲಿ ಭಾಗಿಯಾಗುವವರ ಬಗ್ಗೆ ನಾಗರಿಕರು ಮಾಹಿತಿ ನೀಡಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ

ಕೋರಮಂಗಲದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಮಂಗಳವಾರ ದಾಳಿ ಮಾಡಿದ ಪೊಲೀಸರು ಕಜಕಿಸ್ತಾನ ಮತ್ತು ಪಶ್ಚಿಮ ಬಂಗಾಳದ ಇಬ್ಬರು ಹುಡುಗಿಯರನ್ನು ರಕ್ಷಣೆ ಮಾಡಿದ್ದಾರೆ. ಇಬ್ಬರು ದಲ್ಲಾಳಿಗಳನ್ನು ಬಂಧಿಸಲಾಗಿದೆ. ಕೋರಮಂಗಲದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.

police

ಇನ್ನೊಂದು ಪ್ರಕರಣದಲ್ಲಿ ಕೋರಮಂಗಲದ ಮಸಾಜ್ ಪಾರ್ಲರ್ ವೊಂದರ ಮೇಲೆ ದಾಳಿ ಮಾಡಿ ಇಬ್ಬರು ಹುಡುಗಿಯರನ್ನು ರಕ್ಷಣೆ ಮಾಡಿದ್ದಾರೆ. ಇಲ್ಲಿಯೂ ಇಬ್ಬರು ದಲ್ಲಾಳಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

English summary
Bengaluru: Bengaluru central Viveknagar CCB police arrest a notorious thief under 'Goonda Act'. And recover plenty of money and jewellery's.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X