ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆರು ಪೆಡ್ಲರ್ಸ್ ಬಳಿ ಸಿಕ್ತು 1 ಕೋಟಿ ಮೌಲ್ಯದ ಡ್ರಗ್ಸ್

|
Google Oneindia Kannada News

ಬೆಂಗಳೂರು, ಜು. 27: ಗ್ರಾಹಕರ ಸೋಗಿನಲ್ಲಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಂದು ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಆರು ಡ್ರಗ್ ಪೆಡ್ಲರ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ರಾಮಮೂರ್ತಿನಗರದಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ಪ್ರಜೆ ಹಾಗೂ ಕೇರಳ ಮೂಲದ ನಾಲ್ವರನ್ನು ಬಂಧಿಸಿದ ಸಿಸಿಬಿ ಪೊಲೀಸರು 55 ಲಕ್ಷ ರೂ. ಮೌಲ್ಯದ ಎಕ್ಸಟೆಸಿ, ಎಂಡಿಎಂಎ ಪಿಲ್ , ಎಲ್ಎಲ್ ಸಿ ಪೇಪರ್ ವಶಪಡಿಸಿಕೊಂಡಿದ್ದಾರೆ.

CCB Police arrested 6 Drug Peddlers, seized 1 Crore value MDMA and LSD

ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್‌ನಿಂದ ಮಾದಕ ವಸ್ತು ತರಿಸಿದ್ದ ಕೇರಳ ಮೂಲದ ನಾಲ್ವರು ಡ್ರಗ್ ಡೀಲರ್‌ಗಳು ಬಂಧನಕ್ಕೆ ಒಳಗಾಗಿದ್ದಾರೆ. ಹೊರಮಾವು ಸಮೀಪದ ಬಂಜಾರ ಬಡಾವಣೆಯಲ್ಲಿ ತಂಗಿದ್ದ ಆರೋಪಿಗಳು ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಐಶರಾಮಿ ಕುಟುಂಬ ಹಿನ್ನೆಲೆಯುಳ್ಳವರನ್ನು ಸಂಪರ್ಕಿಸಿ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿದ್ದರು ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ. ಇವರ ವಿರುದ್ಧ ರಾಮಮೂರ್ತಿನಗರ ಠಾಣೆ ಪೊಲೀಸರು ಕೇಸು ದಾಖಲಿಸಿದ್ದಾರೆ.

CCB Police arrested 6 Drug Peddlers, seized 1 Crore value MDMA and LSD

Recommended Video

ಯಡಿಯೂರಪ್ಪನವರ ಪಾತ್ರವೇ ಇಲ್ಲ ಅಂದ್ಮೇಲೆ ಅವರ ಮಕ್ಕಳ ಪಾತ್ರ ಎಲ್ಲಿರುತ್ತೆ? | Oneindia Kannada

ಮತ್ತೊಂದು ಪ್ರಕರಣದಲ್ಲಿ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್‌ನನ್ನು ಬಂಧಿಸಿ ಸುಮಾರು 50 ಲಕ್ಷ ರೂ. ಮೌಲ್ಯದ ಕೊಕೇನ್, ಎಕ್ಸಟೆಸಿ ಪಿಲ್ಸ್, ಯಾಬಾ ಹಾಗೂ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ಬಾಗಲೂರಿನ ಮನೆಯೊಂದರಲ್ಲಿ ತಂಗಿದ್ದ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ಬಗ್ಗೆ ಮಾಹಿತಿ ಪಡೆದು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

English summary
The CCB police have arrested six drug peddlers in two separate cases and seized 1 Cr worth MDMA and LSD drug know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X