ಬೆಂಗಳೂರು: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ದಂಧೆ, ಐವರ ಬಂಧನ
ಬೆಂಗಳೂರು, ನವೆಂಬರ್ 30 : ಲಾಡ್ಜ್ ವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಗುರುವಾರ ಬೆಂಗಳೂರು ಸಿಸಿಬಿ ಪೊಲೀಸರು ದಾಳಿ ಮಾಡಿ ಐವರನ್ನು ಬಂಧಿಸಿದ್ದಾರೆ.
ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ವ್ಯಾಪ್ತಿಯ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಮೇರೆಗೆ ದಾಳಿ ಮಾಡಿದ್ದಾರೆ. ದಾಳಿ ವೇಳೆ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಐವರನ್ನು ಬಂಧಿಸಿ, ಮೂವರು ಯುವತಿಯರನ್ನು ರಕ್ಷಿಸಲಾಗಿದೆ.

ಮಂಡ್ಯ, ಬೆಂಗಳೂರು, ತುಮಕೂರುದಿಂದ ಬಂದಿದ್ದ ಹಲವರನ್ನು ಬಂಧಿಸಿ ನಗದು, ಮೊಬೈಲ್ ಜಪ್ತಿ ಮಾಡಲಾಗಿದೆ. ಹೊರ ರಾಜ್ಯದಿಂದ ಯುವತಿಯರನ್ನು ಕರೆಸಿ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು.












Click it and Unblock the Notifications