ಬೆಂಗಳೂರಲ್ಲಿ ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ

ಬೆಂಗಳೂರು, ಜನವರಿ 6: ಬೆಂಗಳೂರಲ್ಲಿ ಸ್ಪಾ ಹೆಸರಿನಲ್ಲಿ ನಡೆಸುತ್ತಿದ್ದ ವೇಶ್ಯಾವಾಟಿಕೆ ದಂಧೆ ಬಯಲಿಗೆ ಬಂದಿದ್ದು, ಆರು ಯುವತಿಯರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.

ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ಬಂಧಿಸಿ ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಸ್ಪಾ ಹೆಸರಿನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುವ ಪ್ರಕರಣ ಬೆಂಗಳೂರಿನಲ್ಲಿ ನಡೆಯುತ್ತಲೇ ಇರುತ್ತದೆ. ಆದರೆ ಅದನ್ನು ಪತ್ತೆ ಹಚ್ಚಿ ಆ ರೀತಿಯ ಚಟುವಟಿಕೆಗಳಿಗೆ ಪೊಲೀಸರು ಕಡಿವಾಣ ಹಾಕುತ್ತಿದ್ದಾರೆ.

ಕೋರಮಂಗಲ ಬಳಿಯ ಈಜಿಪುರದಲ್ಲಿ ಈ ಘಟನೆ ನಡೆದಿದೆ. ಈ ಭಾಗದಲ್ಲಿ ಬಾಡಿ ಟು ಬಾಡಿ ಮಸಾಜ್ ಹೆಸರಿನಲ್ಲಿ ಸ್ಪಾ ಒಂದನ್ನು ನಡೆಸಲಾಗುತ್ತಿತ್ತು. ಆದರೆ, ಇಲ್ಲಿಗೆ ಬರುವ ಗ್ರಾಹಕರಿಗೆ ಸಿಗುವ ಸೇವೆಗಳೇ ಬೇರೆ ಆಗಿದ್ದವು. ಹೆಸರಿಗೆ ಇದು ಸ್ಪಾ ಆದರೂ ಇಲ್ಲಿ ನಡೆಯುತ್ತಿದ್ದುದು ಮಾತ್ರ ವೇಶ್ಯಾವಾಟಿಕೆ.

CCB Police Bust Prostitution Rocket In The Name Of Spa In Bengaluru

ಸೂಕ್ತ ಮಾಹಿತಿಯೊಂದಿಗೆ ಸಿಸಿಬಿ ಪೊಲೀಸರು ಸ್ಪಾ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ರೆಡ್​ ಹ್ಯಾಂಡ್​ ಆಗಿ ಸಿಕ್ಕಿ ಬಿದ್ದಿದ್ದಾರೆ. ವಿವೇಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+