ಬೆಂಗಳೂರು ಗಲಭೆ; ಎಸ್‌ಡಿಪಿಐ ಕಚೇರಿ ಮೇಲೆ ಸಿಸಿಬಿ ದಾಳಿ
ಬೆಂಗಳೂರು, ಆಗಸ್ಟ್ 16 : ಬೆಂಗಳೂರು ನಗರದಲ್ಲಿ ಮಂಗಳವಾರ ರಾತ್ರಿ ನಡೆ ಗಲಭೆಗೆ ಸಂಬಂಧಿಸಿದಂತೆ ಎಸ್‌ಡಿಪಿಐ ಕಚೇರಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 206ಕ್ಕೂ ಹೆಚ್ಚು ಆರೋಪಿಗಳನ್ನು ಇದುವರೆಗೂ ಬಂಧಿಸಲಾಗಿದೆ.
Recommended Video
ಶನಿವಾರ ತಡರಾತ್ರಿ ಬೆಂಗಳೂರಿನ ಹೆಗಡೆ ನಗರದಲ್ಲಿರುವ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕಚೇರಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಕಚೇರಿಯಲ್ಲಿದ್ದ 8 ಮಂದಿಯನ್ನು ಬಂಧಿಸಿದ್ದಾರೆ.
ಸಿಸಿಬಿ ಪೊಲೀಸರ ದಾಳಿ ವೇಳೆ ರಾಡ್, ದೊಣ್ಣೆ ಸೇರಿದಂತೆ ಮಾರಕಾಸ್ತ್ರಗಳು ಕಚೇರಿಯಲ್ಲಿ ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಕಾವಲ್ ಭೈರಸಂದ್ರ, ಡಿ. ಜೆ. ಹಳ್ಳಿ, ಕೆ. ಜೆ. ಹಳ್ಳಿಯಲ್ಲಿ ನಡೆದ ಗಲಭೆ ಹಿಂದೆ ಎಸ್‌ಡಿಪಿಐ ಕೈವಾಡ ಇರುವ ಕುರಿತು ಚರ್ಚೆ ನಡೆಯುತ್ತಿದೆ.

ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರಳಿಯ ನವೀನ್ ಒಂದು ಸಮುದಾಯದ ವಿರುದ್ಧ ಫೇಸ್ ಬುಕ್ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಆರಂಭವಾದ ಗಲಭೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಗಲಭೆಯಲ್ಲಿ ಮೂವರು ಮೃತಪಟ್ಟಿದ್ದರು.
ಬಿಜೆಪಿ ನಾಯಕರು ಗಲಭೆ ಹಿಂದೆ ಎಸ್‌ಡಿಪಿಐ ಕೈವಾಡವಿದೆ ಎಂದು ಆರೋಪಿಸುತ್ತಿದ್ದಾರೆ. ಕರ್ನಾಟಕದಲ್ಲಿ ಎಸ್‌ಡಿಪಿಐ ಸಂಘಟನೆ ನಿಷೇಧಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ.
ಡಿಜೆ ಹಳ್ಳಿ - ಕೆಜಿ ಹಳ್ಳಿ ಗಲಭೆಯಲ್ಲಿ SDPI ನೇರ ಪಾತ್ರವಿದೆ. ಹಿಂದೆ ನಡೆದ ಹಲವಾರು ಹಿಂದೂ ಕಾರ್ಯಕರ್ತರ ಹತ್ಯೆ ಹಾಗೂ ಹಲವಾರು ದೇಶದ್ರೋಹಿ ಚಟುವಟಿಕೆಗಳಲ್ಲಿ SDPI ಪಾತ್ರಗಳಿವೆ.
— R. Ashoka (ಆರ್. ಅಶೋಕ) (@RAshokaBJP) August 14, 2020
ಈ ನಿಟ್ಟಿನಲ್ಲಿ SDPI ಸಂಘಟನೆಗಳನ್ನು ನಿಷೇಧಿಸುವಂತೆ ಮಾನ್ಯ ಗೃಹಮಂತ್ರಿ ಶ್ರೀ @BSBommaiರವರಲ್ಲಿ ಮನವಿಮಾಡುತ್ತೇನೆ.












Click it and Unblock the Notifications