ಬೆಂಗಳೂರಿನ ಆಸ್ತಿದಾರರಿಗೆ ಪೊಲೀಸ್ ಶಾಕ್: ಈ ತಪ್ಪು ಮಾಡಿದರೆ ಹುಷಾರ್!
ಬೆಂಗಳೂರಿನಲ್ಲಿ ಕೆಲವು ಆಸ್ತಿದಾರರು ನಿಯಮ ಉಲ್ಲಂಘನೆ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರಿನಲ್ಲಿ ಮನೆ ಬಾಡಿಗೆ ನೀಡುವ ಮುನ್ನ ಎಚ್ಚರಿಕೆ ವಹಿಸಿ ಎಂದು ಬೆಂಗಳೂರು ಪೊಲೀಸರು ಬೆಂಗಳೂರಿನ ಆಸ್ತಿದಾರರಿಗೆ ಎಚ್ಚರಿಕೆ ನೀಡಿದ್ದಾರೆ. ಬಾಡಿಗೆ ನೀಡುವಾಗ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಇದೀಗ 5 ಜನ ಆಸ್ತಿದಾರರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಮೂಲಕ ಆಸ್ತಿದಾರರಿಗೆ ಖಡಕ್ ಎಚ್ಚರಿಕೆಯನ್ನು ಸಹ ನೀಡಲಾಗಿದೆ. ಇದೇನು ಎನ್ನುವ ವಿವರ ಇಲ್ಲಿದೆ.
ಬೆಂಗಳೂರಿಗೆ ಜನ ದೇಶ ವಿದೇಶದಿಂದ ಬಂದು ನೆಲಸುತ್ತಾರೆ. ಐಟಿ - ಸಿಲಿಕಾನ್ ಸಿಟಿ ಎನ್ನುವ ಖ್ಯಾತಿಯನ್ನು ಗಳಿಸಿರುವ ಬೆಂಗಳೂರಿನಲ್ಲಿ ದಕ್ಷಿಣ ಭಾರತ ಹಾಗೂ ಉತ್ತರ ಭಾರತೀಯರು ಮಾತ್ರವಲ್ಲ ವಿದೇಶಿ ಪ್ರಜೆಗಳು ಸಹ ನೆಲೆಸಿದ್ದಾರೆ. ಇದೀಗ ಈ ವಿಷಯದಲ್ಲಿನ ತಪ್ಪು ಬೆಂಗಳೂರಿನ ಆಸ್ತಿದಾರರಿಗೆ ಮುಳುವಾಗಿದೆ. ಬೆಂಗಳೂರಿನಲ್ಲಿ ಕೆಲವು ಆಸ್ತಿದಾರರು ಹೆಚ್ಚಿನ ಬಾಡಿಗೆಯನ್ನು ಸಂಗ್ರಹಿಸುವ ಉದ್ದೇಶದಿಂದ ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆ ನೀಡುವುದು ಇದೆ. ಆದರೆ, ಈ ರೀತಿ ಬಾಡಿಗೆ ಕೊಡುವಾಗ ಸ್ವಲ್ಪ ಎಚ್ಚರ ತಪ್ಪಿದರೂ ಸಂಕಷ್ಟ ಗ್ಯಾರಂಟಿ ಎಂದು ಹೇಳಲಾಗುತ್ತಿದೆ. ಇಷ್ಟಕ್ಕೂ ಏನದು ಅಂತ ನೋಡೋಣ.

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳಿಗೆ ಮನೆಗಳನ್ನು ಬಾಡಿಗೆಗೆ ನೀಡುವಾಗ ನಿಯಮಗಳನ್ನು ಉಲ್ಲಂಘನೆ ಮಾಡಿದ ಆರೋಪದ ಮೇಲೆ ಐವರ ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿಸಿಬಿ ವಿಶೇಷ ಕಾರ್ಯಾಚರಣೆ ಸಮಯದಲ್ಲಿ ಸಿಸಿಬಿ ಅಧಿಕಾರಿಗಳು 10 ವಿದೇಶಿ ಪ್ರಜೆಗಳಿಗೆ ಅಕ್ರಮವಾಗಿ / ನಿಯಮ ಉಲ್ಲಂಘನೆ ಮಾಡಿ ಮನೆಗಳನ್ನು ಬಾಡಿಗೆಗೆ ನೀಡಿದ ಆರೋಪದ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ.
ಏನಿದು ಪ್ರಕರಣ: ಆಸ್ತಿದಾರರಿಗೆ ಯಾಕೆ ಸಂಕಷ್ಟ!
ಬೆಂಗಳೂರಿನಲ್ಲಿ ನಿಯಮ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಆಸ್ತಿದಾರರ ಮೇಲೆ ಕ್ರಮವಾಗಿದೆ. ಈ ಸಂಬಂಧ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (Foreigners Regional Registration Office)ಯ ಮುಂದೆ ಹಾಜರುಪಡಿಸಲಾಗಿದ್ದು. ಇದಾದ ನಂತರ ಅವರನ್ನು ಬಂಧನ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. Foreigners Regional Registration Officeಗೆ ಯಾವುದೇ ಮಾಹಿತಿಯನ್ನು ನೀಡದೆ ವಿದೇಶಿ ಪ್ರಜೆಗಳಿಗೆ ಮನೆಗಳನ್ನು ಬಾಡಿಗೆ ನೀಡಿದ ಆರೋಪದ ಮೇಲೆ ಮನೆ ಮಾಲೀಕರಿಗೆ ಇದೀಗ ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಬಾಣಸವಾಡಿ, ಪರಪ್ಪನ ಅಗ್ರಹಾರ, ಸೋಲದೇವನಹಳ್ಳಿ, ರಾಮಮೂರ್ತಿನಗರ ಹಾಗೂ ವರ್ತೂರಿನಲ್ಲಿ ಮನೆ ಬಾಡಿಗೆ ಕೊಟ್ಟಿದ್ದ ಆಸ್ತಿದಾರರಿಗೆ ಈಗ ಸಂಕಷ್ಟ ಶುರುವಾಗಿದೆ.
ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆ ಕೊಡುವ ಮುನ್ನ ಎಚ್ಚರ: ಬೆಂಗಳೂರಿನಲ್ಲಿ ಯಾರಿಗೇ ಮನೆಯನ್ನು ಬಾಡಿಗೆ ನೀಡುವುದಾದರೂ ಅವರ ಬಳಿ ಸೂಕ್ತ ಹಾಗೂ ಪ್ರಮುಖ ದಾಖಲೆಗಳನ್ನು ಪಡೆದುಕೊಳ್ಳಬೇಕು. ಇನ್ನು ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆ ನೀಡುವ ಸಂದರ್ಭದಲ್ಲಿ Foreigners Regional Registration Office ಕಡ್ಡಾಯವಾಗಿ ತಿಳಿಸಬೇಕು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ ಅವರು ಎಚ್ಚರಿಕೆ ಕೊಟ್ಟಿದ್ದಾರೆ.
ಆಸ್ತಿದಾರರು ಮನೆಗಳನ್ನು ಬಾಡಿಗೆ ನೀಡುವ ಸಂದರ್ಭದಲ್ಲಿ FRROಗೆ ತಿಳಿಸಬೇಕು. ಅಲ್ಲದೇ FRRO ಪೋರ್ಟಲ್‌ನಲ್ಲಿ ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆ ನೀಡಿದ 24 ಗಂಟೆಯ ಅವಧಿಯ ಒಳಗಾಗಿ ವಿವರ ಸಲ್ಲಿಸಬೇಕು. ಆನ್‌ಲೈನ್‌ನಲ್ಲಿ (FRRO ಪೋರ್ಟಲ್) ಫಾರ್ಮ್ ಸಿಯಲ್ಲಿ ವಿವರಗಳನ್ನು ಸಲ್ಲಿಕೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.












Click it and Unblock the Notifications