ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಸಿಟಿವಿಯಲ್ಲಿ ಪರಮೇಶ್ವರ್ ಆಪ್ತ ರಮೇಶ್ ಸಾವಿನ ಮುಂಚಿನ ಕ್ಷಣಗಳು ದಾಖಲು

|
Google Oneindia Kannada News

ಬೆಂಗಳೂರು, ಅಕ್ಟೋಬರ್ 12: ಪರಮೇಶ್ವರ್ ಆಪ್ತ ರಮೇಶ್ ಆತ್ಮಹತ್ಯೆ ಸಂಚಲನ ಸೃಷ್ಟಿಸಿದ್ದು, ಸಾವಿನ ಸುತ್ತಾ ಅನುಮಾನದ ಹುತ್ತ ಹುಟ್ಟಿಕೊಳ್ಳುತ್ತಿದೆ.

ರಮೇಶ್ ಅವರು ಸಾಯುವ ನಿರ್ಣಯ ತಳೆಯುವ ಸ್ವಲ್ಪ ಸಮಯದ ಮುಂಚೆಯ ಸಿಸಿಟಿವಿ ದೃಶ್ಯಾವಳಿಗಳು ಮಾಧ್ಯಮಗಳಿಗೆ ಲಭ್ಯವಾಗಿದ್ದು ಸಾಮಾಜಿಕ ಜಾಲತಾಣದಲ್ಲಿಯೂ ಹರಿದಾಡುತ್ತಿವೆ.

ಇಂದು ಬೆಳಿಗ್ಗೆ 9 ಗಂಟೆಗೆ ವೇಳೆಗೆ ಉಲ್ಲಾಳದ ತಮ್ಮ ಮನೆಯಿಂದ ರಮೇಶ್ ಚೌಕಳಿ ಶರ್ಟ್‌ ಧರಿಸಿ ಹೊರ ಹೋಗುತ್ತಿರುವ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

CCTV Footage Shows IT Officers Visit Rameshs House

ಬೆಳಿಗ್ಗೆ ಸದಾಶಿವನಗರದ ಪರಮೇಶ್ವರ್ ಮನೆಯಿಂದ ಹೊರಬಂದ ರಮೇಶ್ ನೇರವಾಗಿ ತಮ್ಮ ಮನೆಗೆ ಬಂದು ಉಪಾಹಾರ ಸೇವಿಸಿ ಮನೆಯವರಿಗೆ ಟಾ-ಟಾ ಮಾಡುತ್ತಾ ಹೊರಗೆ ಹೋಗುತ್ತಿರುವ ದೃಶ್ಯ ಮನೆಯ ಬಳಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಐಟಿ ದಾಳಿಗೆ ಹೆದರಿ ಆತ್ಮಹತ್ಯೆ: ರಮೇಶ್ ಡೆತ್‌ನೋಟ್‌ನಲ್ಲಿ ಏನಿದೆ?ಐಟಿ ದಾಳಿಗೆ ಹೆದರಿ ಆತ್ಮಹತ್ಯೆ: ರಮೇಶ್ ಡೆತ್‌ನೋಟ್‌ನಲ್ಲಿ ಏನಿದೆ?

ರಮೇಶ್ ಹೋದ ಕೆಲವೇ ನಿಮಿಷದಲ್ಲಿ ಇನ್ನೋವಾ ಕಾರೊಂದರಲ್ಲಿ ರಮೇಶ್ ಅವರ ಮನೆಗೆ ಕೆಲವು ಐಟಿ ಅಧಿಕಾರಿಗಳು ಬರುವುದು ಸಹ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಧಿಕಾರಿಗಳು ಮನೆಯ ಒಳಕ್ಕೆ ಹೋಗುವುದು ಸಹ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಐಟಿ ದಾಳಿ ಬೆನ್ನಲ್ಲೇ ಪರಮೇಶ್ವರ್ ಆಪ್ತ ಸಹಾಯಕ ಆತ್ಮಹತ್ಯೆಐಟಿ ದಾಳಿ ಬೆನ್ನಲ್ಲೇ ಪರಮೇಶ್ವರ್ ಆಪ್ತ ಸಹಾಯಕ ಆತ್ಮಹತ್ಯೆ

ಅಧಿಕಾರಿಗಳು ತಮ್ಮ ಮನೆಗೆ ಬಂದ ಸುದ್ದಿ ತಿಳಿದ ನಂತರವೇ ರಮೇಶ್ ಸಾಯುವ ನಿರ್ಧಾರ ಮಾಡಿದರೆ ಎಂಬ ಅನುಮಾನ ಈಗ ಕಾಡುತ್ತಿದೆ.

ಐಟಿ ಅಧಿಕಾರಿಗಳು ಮನೆಗೆ ಬಂದ ವಿಷಯ ತಿಳಿದ ನಂತರವೇ ರಮೇಶ್ ಸಾಯುವ ನಿರ್ಧಾರ ಮಾಡಿದ್ದಾರೆ ಎನ್ನಲಾಗುತ್ತಿದ್ದು, ತಮ್ಮ ಗೆಳೆಯರಿಗೆ ಮಾಹಿತಿ ನೀಡಿ, ಪೊಲೀಸರಿಗೂ ಮಾಹಿತಿ ನೀಡಿ ನೇಣು ಹಾಕಿಕೊಂಡಿದ್ದಾರೆ.

'ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರಮೇಶ್ ಐಟಿ ಅಧಿಕಾರಿಗಳ ಬಳಿಯೇ ಹೇಳಿದ್ದರು''ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರಮೇಶ್ ಐಟಿ ಅಧಿಕಾರಿಗಳ ಬಳಿಯೇ ಹೇಳಿದ್ದರು'

ತಮ್ಮ ಡೆತ್‌ ನೋಟ್‌ನಲ್ಲಿ ಐಟಿ ಅಧಿಕಾರಿಗಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ಐಟಿ ಅಧಿಕಾರಿಗಳು ನಮ್ಮ ಮನೆಯ ಮೇಲೆ ದಾಳಿ ಮಾಡಿದ್ದರಿಂದ ದಿಗ್ಬ್ರಾಂತನಾಗಿದ್ದೇನೆ ಎಂದು ಸಹ ಬರೆದುಕೊಂಡಿದ್ದಾರೆ.

English summary
CCTV footage obtained from Ramesh's house. In that clearly shows that IT officers visit Ramesh's house.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X