SSLC:ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆಗೆ ಆದೇಶ
ಬೆಂಗಳೂರು, ಜನವರಿ 30 : ರಾಜ್ಯದಲ್ಲಿ ಮಾರ್ಚ್23 ರಿಂದ ಏಪ್ರಿಲ್ 6 ರವರೆಗೆ ನಡೆಯಲಿರುವ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಗೆ ಎಲ್ಲಾ ಪರೀಕ್ಷಾ ಕೇಂದ್ರಗಳಿಗೂ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲು ಸರ್ಕಾರ ತೀರ್ಮಾನಿಸಿದೆ.
ಈ ಬಾರಿ ಒಟ್ಟು 2187 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದ್ದು, ಸುಮಾರು 8.54 ಲಕ್ಷ ಮಕ್ಕಳು ಪರೀಕ್ಷೆ ಬರೆಯುತ್ತಿದ್ದಾರೆ.ವಿಶೇಷವೆಂದರೆ ಈ ಬಾರಿ ಸರ್ಕಾರಿ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮರಾಗಳನ್ನು ಕಡ್ಡಾಯವಾಗಿ ಅಳವಡಿಸಲು ನಿರ್ಧರಿಸಿದೆ.
ಪ್ರಾಥಮಿಕ ಮತ್ತು ಪ್ರೌಢಶಾಲಾ ಸಚಿವ ತನ್ವೀರ್ ಸೇಠ್ ಅವರು ಎಸ್ ಎಸ್ ಎಲ್ ಸಿ ಪರೀಕ್ಷೆ ಸಿದ್ಧತೆ ಸಂಬಂಧಿಸಿದಂತೆ ಎಲ್ಲ ಆಜಿಲ್ಲಾಧಿಕಾರಿಗಳು, ಎಸ್ಪಿಗಳು, ಜಿ.ಪಂ. ಸಿಇಓಗಳು ಹಾಗೂ ಡಿಡಿಪಿಐಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು.

1,130 ಪರೀಕ್ಷಾ ಕೇಂದ್ರಗಳಿಗೆ ಸಿಸಿಟಿವಿ ಅಳವಡಿಸಬೇಕಿದೆ
2,817 ಪರೀಕ್ಷಾ ಕೇಂದ್ರಗಳ ಪೈಕಿ1,130 ಸರ್ಕಾರಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸುವುದು ಬಾಕಿ ಇದೆ. ಇದಕ್ಕಾಗಿ ನಿಧಿಯನ್ನು ಬಳಕೆ ಮಾಡಿಕೊಳ್ಳಬೇಕು. ಏನಾದರೂ ಸಮಸ್ಯೆ ಇದ್ದಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಥವಾ ಆಯುಕ್ತರ ಗಮನಕ್ಕೆ ತರಬೇಕು ಎಂದು ಸೂಚಿಸಿದ್ದಾರೆ.

8.54 ವಿದ್ಯಾರ್ಥಿಗಲು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ
ಈ ಬಾರಿ ಒಟ್ಟು 2, 817 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದ್ದು, ಸುಮಾರು 8.54 ಲಕ್ಷ ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. ಈ ಬಾರಿ ಎಲ್ಲಾ ಸರ್ಕಾರಿ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸುವಂತೆ ಸರ್ಕಾರ ಸೂಚನೆ ನೀಡಿದೆ.

ಕರ್ನಾಟಕ ಸೆಕ್ಯೂರ್ ಎಕ್ಸಾಮಿನೇಷನ್ ಸಿಸ್ಟಂ
ಪ್ರಶ್ನೆ ಪತ್ರಿಕೆಗಳನ್ನು ದಾಸ್ತಾನಿಡುವ ಕರ್ನಾಟಕ ಸೆಕ್ಯೂರ್ ಎಕ್ಸಾಮಿನೇಷನ್ ಸಿಸ್ಟಂ ಅನ್ವಯ ಸಿಸಿಟಿವಿ ಕ್ಯಾಮರಾ ಅಳವಡಿಸಿದ ದಿನದ 24 ಗಂಟೆಯೂ ನಿಗಾ ವಹಿಸುವುದು. ಪ್ರಶ್ನೆ ಪತ್ರಿಕೆ ಕೊಂಡೊಯ್ಯುವ ವಾಹನಗಳಿಗೆ ಭದ್ರೆ ಒದಗಿಸಲಾಗುತ್ತದೆ.

ಜೆರಾಕ್ಸ್ ಮಳಿಗೆಗಳಿಗೆ ಬಾಗಿಲು
ಪರೀಕ್ಷಾ ಕೇಂದ್ರಗಳ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸುವುದರ ಜತೆಗೆ, ಜೆರಾಕ್ಸ್ ಮಳಿಗೆಗಳನ್ನು ಮುಚ್ಚಿಸುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಇಲಾಖೆಯ ಪ್ರಧಾನ ಕಾರ್ಯದರ್ಸಿ ಶಾಲಿನಿ ರಜನೀಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ಪಿ.ಸಿ. ಜಾಫರ್ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಿರ್ದೇಶಕಿ ವಿ. ಸುಮಂಗಲಾ ಪಾಲ್ಗೊಂಡಿದ್ದರು.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
CBSE 10 Results 2025: ಸಿಬಿಎಸ್ಇ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಟಾಪರ್ಸ್ ಪಟ್ಟಿ ಇಲ್ಲಿದೆ -
CBSE 10ನೇ ತರಗತಿ ಫಲಿತಾಂಶ 2026: ಇಂದು ಸಂಜೆ 7 ಗಂಟೆ ಸುಮಾರಿಗೆ ಬೋರ್ಡ್ನಿಂದ ಅಧಿಕೃತ ಪತ್ರಿಕಾ ಪ್ರಕಟಣೆ -
CBSE 10th result 2026: ಸಿಬಿಎಸ್ಸಿ ಫಲಿತಾಂಶ: ಡಿಜಿಲಾಕರ್ ಅಥವಾ ಉಮಾಂಗ್ ಆಪ್, ಫಲಿತಾಂಶ ನೋಡಲು ಯಾವುದು ಬೆಸ್ಟ್ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ











Click it and Unblock the Notifications