ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಸಿಡಿ ಪ್ರಕರಣ: ಎಸ್‌ಐಟಿ ಮುಂದೆ ಹಾಜರಾದ ರಮೇಶ್ ಜಾರಕಿಹೊಳಿ

|
Google Oneindia Kannada News

ಬೆಂಗಳೂರು, ಮಾರ್ಚ್ 29: ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದಾರೆ.

Recommended Video

ಕೊನೆಗೂ SIT ಮುಂದೆ ಹಾಜರಾದ Ramesh Jarkiholi | Oneindia Kannada

ಆಡುಗೋಡಿ ಟೆಕ್ನಿಕಲ್ ಸೆಂಟರ್‌ನಲ್ಲಿ ವಿಚಾರಣೆ ಹಾಜರಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಲೇಡಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಇ-ಮೇಲ್ ಕಳುಹಿಸಿರುವ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ವಿಚಾರಣೆಗೆ ಹಾಜರಾಗಿದ್ದಾರೆ.

CD Case: Ramesh Jarkiholi Appears Before SIT For Interrogation

ಈ ಸಿಡಿ ಪ್ರಕರಣ ಇನ್ನೂ ಎಸ್‌ಐಟಿಗೆ ವರ್ಗಾವಣೆಯಾಗಿಲ್ಲ, ಕಬ್ಬನ್‌ಪಾರ್ಕ್ ಠಾಣೆಯಲ್ಲೇ ಪ್ರಕರಣವಿರುವ ಕಾರಣ, ಟೆಕ್ನಿಕಲ್ ವಿಂಗ್‌ನಲ್ಲಿ ಕಬ್ಬನ್ ಪಾರ್ಕ್ ಇನ್‌ಸ್ಪೆಕ್ಟರ್ ಮಾರುತಿ ಆಗಮಿಸಿದ್ದಾರೆ, ಅವರೇ ವಿಚಾರಣೆ ನಡೆಸಲಿದ್ದಾರೆ. ಕೇಂದ್ರ ವಲಯ ಡಿಸಿಪಿ ಅನುಚಿತ್ ನೇತೃತ್ವದಲ್ಲಿ ವಿಚಾರಣೆ ನಡೆಯಲಿದೆ.

ಯುವತಿ ದೂರು ಆಧರಿಸಿ ರಮೇಶ್ ಜಾರಕಿಹೊಳಿ ವಿಚಾರಣೆ ಮಾಡಲಾಗುತ್ತಿದೆ. ಇನ್ನೇನು ವಿಚಾರಣೆ ಆರಂಭವಾಗಲಿದೆ.

ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಲೇಡಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಇ-ಮೇಲ್ ಕಳುಹಿಸಿದ್ದಾರೆ.

ತಮ್ಮ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಯಲಿ, ನನ್ನ ತಂದೆ ತಾಯಿಗೆ ರಕ್ಷಣೆ ಕೊಡಿ ಎಂದು ಇ-ಮೇಲ್‌ನಲ್ಲಿ ಮನವಿ ಮಾಡಿದ್ದಾರೆ. ಇಂದು ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದೆ.

ರಮೇಶ್ ಜಾರಕಿಹೊಳಿ ಪ್ರಭಾವಿ ವ್ಯಕ್ತಿಯಾಗಿದ್ದಾರೆ, ನನ್ನ ಪೋಷಕರಿಗೆ ಸಾರ್ವಜನಿಕವಾಗಿ ಜೀವ ಬೆದರಿಕೆ ಹಾಕಿದ್ದಾರೆ. ಪ್ರಕರಣದಲ್ಲಿ ನನಗೆ ಮತ್ತು ನನ್ನ ಪೋಷಕರಿಗೆ ರಕ್ಷಣೆ ನೀಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇ-ಮೇಲ್ ಮೂಲಕ ನಿನ್ನೆಯೇ ಪತ್ರವನ್ನು ರವಾನೆ ಮಾಡಿರುವ ಕುರಿತು ಮಾಹಿತಿ ಲಭ್ಯವಾಗಿದೆ.

English summary
CD Row, Former Minister Ramesh Jarkiholi Appears Before SIT For Interrogation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X