ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಪಚುನಾವಣೆ ಪ್ರಚಾರದಲ್ಲಿ ಭಾಗವಹಿಸಲು ಜಾರಕಿಹೊಳಿಗೆ ತಿಳಿಸುತ್ತೇನೆ; ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಮಾರ್ಚ್ 30: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣ ರಾಜ್ಯದಲ್ಲಿ ಮುಂಬರುವ ಉಪ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಮಂಗಳವಾರ ಈ ಕುರಿತು ಮಾತನಾಡಿರುವ ಅವರು, "ಈ ಹಗರಣ ಉಪಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ರಮೇಶ್ ಜಾರಕಿಹೊಳಿ ಅವರಿಗೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ತಿಳಿಸುತ್ತೇನೆ" ಎಂದು ಹೇಳಿದ್ದಾರೆ.

ಸದನದಲ್ಲಿ ಸಿಡಿ ಗದ್ದಲ; ಸಿಎಂ ಮನವಿಗೂ ಒಪ್ಪದ ಕಾಂಗ್ರೆಸ್ಸದನದಲ್ಲಿ ಸಿಡಿ ಗದ್ದಲ; ಸಿಎಂ ಮನವಿಗೂ ಒಪ್ಪದ ಕಾಂಗ್ರೆಸ್

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಈ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆಯಾಗುವುದಾಗಿ ಭರವಸೆ ನೀಡಿದ್ದಾರೆ ಎಂದ ಅವರು, ರಮೇಶ್ ಜಾರಕಿಹೊಳಿ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡಲಾಗಿದೆ. ಈ ಆರೋಪ ದುರುದ್ದೇಶಪೂರಕವಾಗಿದೆ ಎಂದು ಹೇಳಿದರು.

CD Scandal Wont Impact By Elections In State Says CM Yediyurappa

ಕೆಲಸ ಕೊಡಿಸುವ ನೆಪದಲ್ಲಿ ಯುವತಿಯನ್ನು ದೈಹಿಕವಾಗಿ ಬಳಸಿಕೊಂಡು ವಂಚಿಸಿದ ಆರೋಪ ರಮೇಶ್ ಜಾರಕಿಹೊಳಿ ಅವರ ಮೇಲಿದ್ದು, ಮಾರ್ಚ್ 2ರಂದು ಅವರು ಯುವತಿಯೊಂದಿಗಿದ್ದ ಸಿ.ಡಿ ಬಿಡುಗಡೆಯಾಗಿತ್ತು. ಆದರೆ ಈ ಆರೋಪವನ್ನು ಜಾರಕಿಹೊಳಿ ತಳ್ಳಿಹಾಕಿದ್ದಾರೆ. ರಮೇಶ್ ಜಾರಕಿಹೊಳಿ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.

Recommended Video

ಕೊರೊನಾ ಸಂಕಷ್ಟಕ್ಕೆ ಬೇಸತ್ತು ಕ್ಯಾಬ್‌ ಚಾಲಕ ಆತ್ಮಹತ್ಯೆ ಯತ್ನ! ಚಾಲಕನ ಸ್ಥಿತಿ ಗಂಭೀರ | Oneindia Kannada

ಬಸವಕಲ್ಯಾಣ, ಮಸ್ಕಿ ಕ್ಷೇತ್ರಗಳಿಗೆ ಉಪ ಚುನಾವಣೆ ಹಾಗೂ ಬೆಳಗಾವಿ ಲೋಕಸಭೆ ಉಪ ಚುನಾವಣೆಯು ಏಪ್ರಿಲ್ 17ರಂದು ನಡೆಯುತ್ತಿದ್ದು, ಈ ಸಿ.ಡಿ ಹಗರಣ ಚುನಾವಣೆ ಮೇಲೆ ಪರಿಣಾಮ ಬೀರಬಹುದು ಎಂಬ ಮಾತುಗಳು ಕೇಳಿಬಂದಿದ್ದವು.

English summary
Alleged CD scandal will not impact on upcoming by elections in state says CM Yediyurappa on tuesday
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X