CEC ಜ್ಞಾನೇಶ್ ಕುಮಾರ್ ವಿರುದ್ಧ ಗುಡುಗಿದ ರಾಮಲಿಂಗಾರೆಡ್ಡಿ, ಪರಮೇಶ್ವರ್: ಕಾಂಗ್ರೆಸ್ ಪ್ರತಿಭಟನೆ, ಆಗ್ರಹವೇನು?

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಆಡಳಿತ, ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ನಿರ್ಧಾರಗಳ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆದಿಯಾಗಿ ಅನೇಕ ನಾಯಕರು ಜ್ಞಾನೇಶ್ ಕುಮಾರ್ ರಾಜೀನಾಮೆ ಆಗ್ರಹಿಸಿದ್ದಾರೆ. ಇದೀಗ ಸಚಿವರಾದ ರಾಮಲಿಂಗಾ ರೆಡ್ಡಿ ಮತ್ತು ಡಿಸಿಎಂ ಡಾ.ಜಿ.ಪರಮೇಶ್ವರ್ ಸಹ ಮತ್ತೊಮ್ಮ ಗುಡುಗಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಾರದರ್ಶಕತೆ ನಮ್ಮ ಪ್ರಥಮ ಆದ್ಯತೆಯಾಗಬೇಕು. ಚುನಾವಣಾ ಆಯೋಗವು ಯಾವುದೇ ಪಕ್ಷದ ಪರವಾಗಿರದೆ, ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ಸಂಪೂರ್ಣ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವುದು ಅತ್ಯಗತ್ಯ ಎಂದು ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಅವರು ಹೇಳಿದರು..

CEC Gyanesh Kumar

ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಬಲವಾದ ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕೆಪಿಸಿಸಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಈ ವೇಳೆ ಮಾತನಾಡಿದ ಸಚಿವರು, ಈ ಹಿಂದೆ ಟಿ.ಎನ್. ಶೇಷನ್ ಅವರಂತಹ ದಿಗ್ಗಜರು ಚುನಾವಣಾ ಆಯೋಗದ ಘನತೆಯನ್ನು ಎತ್ತಿಹಿಡಿದು ಮಾದರಿಯಾಗಿದ್ದರು. ಆದರೆ ಇಂದಿನ ವ್ಯವಸ್ಥೆಯಲ್ಲಿ ಪ್ರಜಾಪ್ರಭುತ್ವದ ಆಶೋತ್ತರಗಳು ಮತ್ತು ಮತದಾರರ ಹಕ್ಕುಗಳು ಹೇಗೆ ಮೊಟಕುಗೊಳ್ಳುತ್ತಿವೆ ಎಂಬುದನ್ನು ನಾವೆಲ್ಲರೂ ಗಂಭೀರವಾಗಿ ಚಿಂತಿಸಬೇಕಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಈ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ, ಎಐಸಿಸಿ ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್, ಸೇರಿದಂತೆ ಹಿರಿಯ ನಾಯಕರು, ಸಚಿವರು, ಶಾಸಕರು ಹಾಗೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಅವರೆಲ್ಲರು ಒಕ್ಕೋರಲಿನಿಂದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ಎಚ್ಚರಿಸಿದರು.

ಸಿಇಸಿ ಆಡಳಿತ ಪರಿಶೀಲನೆ ಅಗತ್ಯ: ಡಿಸಿಎಂ

ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಮಾತನಾಡಿ, ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆಯ ಕುರಿತು ಗಂಭೀರ ಪ್ರಶ್ನೆಗಳು ಎದ್ದಿವೆ. ಸಂದರ್ಭದಲ್ಲಿ, ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿ ತೀವ್ರ ಪರಿಶೀಲನೆಗೆ ಒಳಪಡಬೇಕಿದೆ. SIR ಪ್ರಕ್ರಿಯೆ, ಮತದಾರರ ಹೆಸರುಗಳ ಸೇರ್ಪಡೆ-ಅಳಿಸುವಿಕೆ, ನಮೂನೆ-6 ಬದಲಾವಣೆ ಹಾಗೂ ಚುನಾವಣಾ ವ್ಯವಸ್ಥೆಯ ನಿರ್ವಹಣೆ ಕುರಿತು ಆಯೋಗದೊಳಗೇ ಆಕ್ಷೇಪಗಳು ದಾಖಲಾಗಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ ಎಂದರು.

ಇಂತಹ ಗಂಭೀರ ಪ್ರಶ್ನೆಗಳು ಎದ್ದಿರುವ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರು ಮುಖ್ಯ ಚುನಾವಣಾ ಆಯುಕ್ತರ ಹುದ್ದೆಯಲ್ಲಿ ಮುಂದುವರಿಯುವ ನೈತಿಕತೆ ಮತ್ತು ವಿಶ್ವಾಸಾರ್ಹತೆಯ ಕುರಿತು ದೇಶದ ಮುಂದೆ ಸ್ಪಷ್ಟ ಉತ್ತರ ನೀಡಬೇಕು. ಮಾತ್ರವಲ್ಲ ಅವರನ್ನು ಹುದ್ದೆಯಿಂದ ಈ ಕೂಡಲೇ ವಜಾಗೊಳಿಸಬೇಕು..

ಅವರ ನೇತೃತ್ವದಲ್ಲಿ ನಡೆದಿರುವ ನಿರ್ಧಾರಗಳು ಮತ್ತು SIR ಸಂಬಂಧಿಸಿದ ವಿವಾದಗಳ ಕುರಿತು ಸ್ವತಂತ್ರ, ನಿಷ್ಪಕ್ಷಪಾತ ಹಾಗೂ ಪಾರದರ್ಶಕ ತನಿಖೆ ನಡೆಯಬೇಕು. ಮತದಾರರ ಹಕ್ಕು, ಚುನಾವಣೆಯ ಪಾರದರ್ಶಕತೆ ಮತ್ತು ಪ್ರಜಾಪ್ರಭುತ್ವದ ವಿಶ್ವಾಸಾರ್ಹತೆಯ ವಿಚಾರದಲ್ಲಿ ಯಾವುದೇ ರಾಜಿ ಸಲ್ಲದು.

ಮೂವರು ಚುನಾವಣಾ ಆಯುಕ್ತರ ಪೈಕಿ ಇಬ್ಬರು ನಮೂನೆ-6ರಲ್ಲಿ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ಆಕ್ಷೇಪಿಸಿದ್ದರೂ, ಬದಲಾವಣೆ ಮಾಡಲಾಗಿದೆ ಎಂಬ ವರದಿಗಳು ಹೊರಬಂದಿವೆ. ಹಾಗಾದರೆ, ಇಬ್ಬರು ಆಯುಕ್ತರ ಆಕ್ಷೇಪವನ್ನು ಬದಿಗೊತ್ತಿ ಈ ಬದಲಾವಣೆ ಮಾಡಿದ್ದು ಯಾರಿಗಾಗಿ? ಯಾರ ಅನುಕೂಲಕ್ಕಾಗಿ? ತೀವ್ರ ವಾಗ್ದಾಳಿ ನಡೆಸಿದರು.

ಸ್ವತಂತ್ರ ತನಿಖೆಯಾಗಿ ಸತ್ಯ ಹೊರ ಬರಲೇಬೇಕು

ಹೊಸ ಮತದಾರರ ಸೇರ್ಪಡೆ, ಹೆಸರುಗಳ ಅಳಿಸುವಿಕೆ ಮತ್ತು ಮರು ಸೇರ್ಪಡೆ ಇವೆಲ್ಲವೂ ಮತದಾರರ ಹಕ್ಕಿಗೆ ನೇರವಾಗಿ ಸಂಬಂಧಿಸಿದ ಪ್ರಕ್ರಿಯೆಗಳು. ಕಾನೂನಿನ ನಿಯಮಗಳನ್ನೇ ಬದಿಗೊತ್ತಿ ಮತದಾರರ ಪಟ್ಟಿಯಲ್ಲಿ ಬದಲಾವಣೆ ಮಾಡುವಂತಿದ್ದರೆ, ಚುನಾವಣಾ ವ್ಯವಸ್ಥೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯ ಪ್ರಶ್ನೆಗೆ ಉತ್ತರಿಸುವವರು ಯಾರು? ನಮೂನೆ-6ರ ಬದಲಾವಣೆಗಳ ಕುರಿತು ಸ್ವತಂತ್ರ ತನಿಖೆಯಾಗಲೇಬೇಕು. ಸತ್ಯಾಸತ್ಯತೆ ಈ ದೇಶದ ಮುಂದೆ ಬಯಲಾಗಲೇಬೇಕು ಎಂದು ಒತ್ತಾಯಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+