ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರನ್ನು ವಶಕ್ಕೆ ಪಡೆದ ಸಿಸಿಬಿ

ಬೆಂಗಳೂರು, ಜುಲೈ 19: ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಐವರು ಶಂಕಿತ ಉಗ್ರರನ್ನು ವಶಕ್ಕೆ ಪಡೆಯಲಾಗಿದೆ. ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿರುವ ಸಿಸಿಬಿ ಪೊಲೀಸರು ಐವರನ್ನು ವಶಕ್ಕೆ ಪಡೆದುಕೊಂಡಿದೆ.

ವಶಕ್ಕೆ ಪಡೆದ ಐವರು ಶಂಕಿತ ಉಗ್ರರು ಬೆಂಗಳೂರಿನ ಆರ್ ಟಿ ನಿವಾಸಿಗಳು ಮತ್ತು ಜುನೈದ್ ಗುಂಪಿನವರು ಎಂದು ಹೇಳಲಾಗಿದೆ. ಬಂಧಿತರನ್ನು ಸುಹೈಲ್, ಉಮರ್, ತಬ್ರೇಜ್, ಮುದಾಸಿರ್, ಫೈಜಲ್‌ರಬ್ಬಾ ಎಂದು ಗುರುತಿಸಲಾಗಿದೆ. ಸಿಸಿಬಿ ಹಾಗೂ ಕೇಂದ್ರ ಗುಪ್ತಚರ ಇಲಾಖೆ ಈ ಜಂಟಿ ಕಾರ್ಯಾಚರಣೆ ನಡೆಸಿದೆ ಎಂದು ವರದಿಯಾಗಿದೆ.

Central Crime Branch (CCB) Has Arrested 5 Suspected Terrorists In Bengaluru

ಶಂಕಿತ ಉಗ್ರರ ಬಳಿ ಮೊಬೈಲ್ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಪರಿಶೀಲನೆ ಮಾಡಲಾಗುತ್ತಿದೆ. ಆರೋಪಿಗಳನ್ನು ತೀವ್ರ ವಿಚಾರಣೆಗೆ ಗುರಿ ಪಡಿಸಿದ್ದು ಮಹತ್ವದ ಮಾಹಿತಿಗಳನ್ನು ಕಲೆ ಹಾಕಲಾಗುತ್ತಿದೆ. ಶಂಕಿತ ಉಗ್ರರ ನೆಟ್‌ವರ್ಕ್ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದು ಇನ್ನೂ ಹಲವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಇನ್ನೂ ಇಬ್ಬರು ಈ ಐವರು ಶಂಕಿತ ಉಗ್ರರ ಜೊತೆ ಸಂಪರ್ಕದಲ್ಲಿದೆ ಎಂದು ಹೇಳಲಾಗಿದ್ದು ಮಾಹಿತಿ ಕಲೆಹಾಕುತ್ತಿದ್ದಾರೆ ಎನ್ನಲಾಗಿದೆ. ಮಡಿವಾಳ ಟೆಕ್ನಿಕಲ್ ಸೆಲ್‌ನಲ್ಲಿ ಶಂಕಿತ ಉಗ್ರರ ತೀವ್ರ ವಿಚಾರಣೆ ನಡೆಸಲಾಗಿದೆ.

ಬೆಂಗಳೂರಿನಲ್ಲಿ ಸ್ಫೋಟಕ್ಕೆ ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿದೆ. ಮೂಲಗಳ ಪ್ರಕಾರ, ಐವರು ಆರೋಪಿಗಳು ಬೆಂಗಳೂರಿನಲ್ಲಿ ಸ್ಫೋಟಕ್ಕೆ ನಿಖರವಾದ ಯೋಜನೆಯನ್ನು ರಚಿಸಿದ್ದರು. ಭಯೋತ್ಪಾದಕರ ಸಂಪರ್ಕಕ್ಕೆ ಬರುವ ಮೊದಲು 2017 ರಲ್ಲಿ ಕೊಲೆ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು. ಆರೋಪಿಗಳನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು ಎನ್ನುವ ಮಾಹಿತಿ ಸಿಕ್ಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+