ಉಪನಗರ ರೈಲು ಯೋಜನೆ: ಎಲೆವೇಟೆಡ್ ಕಾರಿಡಾರ್ ಗೆ ಕೇಂದ್ರ ಚಿಂತನೆ

ಬೆಂಗಳೂರು, ಜನವರಿ 29: ಬೆಂಗಳೂರು ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಮಂಜೂರಾಗಿರುವ ಉಪನಗರ ರೈಲು ಯೋಜನೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವೇ ಯೋಜನೆ ಕೈಗೆತ್ತಿಕೊಳ್ಳಲಿದೆ.

ಕೇಂದ್ರ ಸರ್ಕಾರ ಯೋಜನೆಗಾಗಿ 2013ರಲ್ಲೇ ಆಡಳಿತಾತ್ಮಕ ಅನುಮೋದನೆ ನೀಡಿದ್ದರೂ ವೆಚ್ಚದ ವಿಷಯದಲ್ಲಿ ರಾಜ್ಯ ಸರ್ಕಾರ ಹಾಗೂ ರೈಲ್ವೆ ಇಲಾಖೆಯ ನಡುವೆ ಹೊಂದಾಣಿಕೆ ಸಮಸ್ಯೆ ಎದರಾಗಿರುವುದರಿಂದ ಉಪನಗರ ರೈಲು ಯೋಜನೆಯನ್ನು ಕೇಂದ್ರ ಸರ್ಕಾರ ತನ್ನ ವ್ಯಾಪ್ತಿಯಲ್ಲಿ ತೆಗೆದುಕೊಳ್ಳಲಿದೆ.

train

ಬೆಂಗಳೂರು ನಗರ ಹಾಗೂ ಹೊರ ವಲಯದ 170 ಕಿಲೋಮೀಟರ್ ರೈಲ್ವೆ ಮಾರ್ಗದ ಮೇಲೆ, ಮೆಟ್ರೋ ರೈಲಿನ ಮಾದರಿಯಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಿಸಲು ಚಿಂತನೆ ನಡೆದಿದ್ದು, ಗಂಟೆಗೆ 90 ರಿಂದ 125 ಕಿಮೀ ವೇಗದ ರೈಲು ಸಂಚಾರಕ್ಕೆ ಆದ್ಯತೆ ನೀಡಲಾಗಿದೆ.

ಬೈಯ್ಯಪ್ಪನಹಳ್ಳಿ ಹಾಗೂ ಬೆಂಗಳೂರು ನಗರ ರೈಲ್ವೆ ನಿಲ್ದಾಣಗಳನ್ನು ವಿಶ್ವದರ್ಜೆಗೆ ಏರಿಸುವುದಲ್ಲದೆ, ಬಾಣಸವಾಡಿ, ಯಲಹಂಕ, ಯಶವಂತಪುರ, ಕೆಂಗೇರಿ, ಕಾಕ್ಸ್ ಟೌನ್, ಮಲ್ಲೇಶ್ವರ, ರಾಮನಗರ, ವೈಟ್ ಫೀಪ್ಲಡ್, ದೊಡ್ಡ ಬಳ್ಳಾಪುರ ಮತ್ತು ನೆಲಮಂಗಲ ರೈಲು ನಿಲ್ದಾಣಗಳ ಆಧುನೀಕರಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ.

ಯೋಜನೆಗೆ ಸುಮಾರು 12 ಸಾವಿರ ಕೋಟಿ ವೆಚ್ಚವಾಗಲಿದ್ದು, ರೈಲ್ವೆ ಇಲಾಖೆ ಹೊಂದಿರುವ ಭೂಮಿಯನ್ನು ಖಾಸಗಿ ಅಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಿ ಆದಾಯ ಪಡೆಯುವ ಮೂಲಕ ಹಣಕಾಸಿನ ವ್ಯವಸ್ಥೆ ಮಾಡಲು ಯೋಜಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+