ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅತಿ ಹೆಚ್ಚು ಮಾಲಿನ್ಯ: 102 ನಗರಗಳಲ್ಲಿ ಬೆಂಗಳೂರು ಕೂಡ ಇದೆ

|
Google Oneindia Kannada News

ಬೆಂಗಳೂರು, ನವೆಂಬರ್ 28: ಬೆಂಗಳೂರು ಸೇರಿ ಒಟ್ಟು 102 ನಗರಗಳಲ್ಲಿ ವಾಯುಮಾಲಿನ್ಯ ವಿಪರೀತವಾಗಿದೆ. 2024ರ ಒಳಗೆ ಶೇ.20-30ರಷ್ಟು ಮಾಲಿನ್ಯವನ್ನು ತಗ್ಗಿಸಲು ಕೇಂದ್ರ ಪರಿಸರ ಸಚಿವಾಲಯ ಸೂಚನೆ ನೀಡಿದೆ.

ವಾಯು ಮಾಲಿನ್ಯ ಇಳಿಸಲು ಕಾಲಮಿತಿಯಲ್ಲಿ ಕ್ರಿಯಾಯೋಜನೆ ರೂಪಿಸಬೇಕು, ವಾಯು ಗುಣಮಟ್ಟ ಸೂಚ್ಯಂಕ ಆಧಾರದಲ್ಲಿ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲ್ಯಾನ್ ರೂಪಿಸಬೇಕು ಎಂದು ಎನ್‌ಸಿಎಪಿಯಲ್ಲಿ ಸೂಚಿಸಲಾಗಿದೆ. ವಾಯುಮಾಲಿನ್ಯ ತಡೆ, ನಿಯಂತ್ರಣ ಮತ್ತು ಇಳಿಕೆ ಉದ್ದೇಶದಿಂದ ಎನ್‌ಸಿಎಪಿ ಸಮಗ್ರಹ ನಿರ್ವಹಣಾ ಯೋಜನೆಯನ್ನು ರೂಪಿಸಿದೆ.

Central govt instructed to Decline air pollution in Bengaluru

ದೆಹಲಿ: 15 ವರ್ಷ ಹಳೆಯ ಡೀಸೆಲ್ ವಾಹನಗಳು ರಸ್ತೆಗಿಳಿಯುವಂತಿಲ್ಲ ದೆಹಲಿ: 15 ವರ್ಷ ಹಳೆಯ ಡೀಸೆಲ್ ವಾಹನಗಳು ರಸ್ತೆಗಿಳಿಯುವಂತಿಲ್ಲ

ಕೇಂದ್ರ ಸಚಿವ ಹರ್ಷವರ್ಧನ್ ಪೋಲೆಂಡ್‌ನ ಕಟೌಯಿಸ್‌ನಲ್ಲಿ ಡಿಸೆಂಬರ್ 2ರಿಂದ ನಡೆಯುವ ವಿಶ್ವಸಂಸ್ಥೆಯ ಹವಾಮಾನ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ದೇಶಾದ್ಯಂತ ವಾಯು ಗುಣಮಟ್ಟದ ಮೇಲೆ ನಿಗಾ ಇರಿಸುವ ಜಾಲದ ಕಾರ್ಯಕ್ಷಮತೆ ಹೆಚ್ಚಳ ಮಾಡುವ ಉದ್ದೇಶವೂ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ಮಾಲಿನ್ಯ ನಿಯಂತ್ರಣಕ್ಕೆ ಹೊಸ ವಾಹನ ನೋಂದಣಿ ಸ್ಥಗಿತ:ದೆಹಲಿ ಮಾದರಿಯಲ್ಲಿ ಖಾಸಗಿ ವಾಹನಗಳನ್ನು ನಿರ್ಬಂಧಿಸಿದರೆ ಬೆಂಗಳೂರಿನಲ್ಲಿ ವ್ಯಾಪಕ ಪ್ರತಿರೋಧ ಉಂಟಾಗುವ ಸಾಧ್ಯತೆ ಇದೆ.

ಹೀಗಾಗಿ ವಾಯು ಮಾಲಿನ್ಯ ನಿಯಂತ್ರಣ ದೃಷ್ಟಿಯಿಂದ ಹೊಸ ವಾಹನಗಳ ನೋಂದಣಿ ಮಾತ್ರ ನಿರ್ಬಂಧಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ ಹೇಳಿದ್ದಾರೆ.

ದೆಹಲಿಯಲ್ಲಿ ಈಗಾಗಲೇ ಖಾಸಗಿ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಆ ಮೂಲಕ ದಟ್ಟ ಹೊಗೆಯನ್ನು ನಿಯಂತ್ರಿಸಲು ಅಲ್ಲಿನ ಸರ್ಕಾರ ಮುಂದಾಗಿದೆ, ಆದರೆ ಕಾರ್ಪೊರೇಟ್ ಕಂಪನಿಗಳಿಗೆ ಹೆಸರಾದ ಬೆಂಗಳೂರಿನಲ್ಲಿ ಆ ರೀತಿ ನಿರ್ಬಂಧ ವಿಧಿಸುವುದು ಕಷ್ಟಸಾಧ್ಯ.

ಈ ಹಿನ್ನೆಲೆಯಲ್ಲಿ ಪರ್ಯಾಯವಾಗಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಹೊಸ ವಾಹನಗಳ ನೋಂದಣಿ ವ್ಯವಸ್ಥೆಯಲ್ಲಿ ನಿಯಂತ್ರಣ ತಂದೆರೆ ಈಗಾಗಲೇ 70 ಲಕ್ಷ ಮೀರಿರುವ ವಾಹನಗಳ ಸಂಖ್ಯೆಯನ್ನು ಮಿತಿಗೊಳಿಸಬಹುದು ಎಂದು ಹೇಳಿದ್ದಾರೆ.

English summary
Central environment ministry instructed to Pollution control board to Bengaluru and other 102 cities to decrease the air pollution level within five years.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X