ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಬಿಕ್ಕಟ್ಟು: ರಾಜ್ಯಕ್ಕೆ ಆಗಮಿಸಿದ ಕೇಂದ್ರದ ತಂಡ, ಸಿಎಂ ಸಭೆಯಲ್ಲಿ ಹೇಳಿದ್ದೇನು?

|
Google Oneindia Kannada News

ಬೆಂಗಳೂರು, ಜುಲೈ 7: ಕರ್ನಾಟಕದಲ್ಲಿ ಕೊರೊನಾ ಪರಿಸ್ಥಿತಿ ಹಾಗೂ ಸರ್ಕಾರದ ನಿಯಂತ್ರಣಗಳ ಕ್ರಮಗಳ ಬಗ್ಗೆ ಪರಿಶೀಲನೆ ಮಾಡಲು ಕೇಂದ್ರದಿಂದ ಅಧಿಕಾರಿಗಳ ತಂಡ ಆಗಮಿಸಿದೆ. ಕೃಷ್ಣಾ ಕಚೇರಿಯಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾದ ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಗಳ ತಂಡವು ರಾಜ್ಯದ ಕೊವಿಡ್ ನಿರ್ವಹಣೆಯ ಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದೆ ಎನ್ನಲಾಗಿದೆ.

ಕೊವಿಡ್ ನಿಯಂತ್ರಣಕ್ಕಾಗಿ ಸಂಪರ್ಕಿತರ ಪತ್ತೆ ಹಚ್ಚುವುದು ಹಾಗೂ ಕೊ-ಮಾರ್ಬಿಡ್ ವ್ಯಕ್ತಿಗಳನ್ನು ಗುರುತಿಸಿ, ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಕೇಂದ್ರ ತಂಡವು ಶ್ಲಾಘಿಸಿದೆ ಎಂದು ಸಚಿವ ಶ್ರೀರಾಮುಲು, ಡಾ ಸುಧಾಕರ್ ತಿಳಿಸಿದ್ದಾರೆ.

ಕೊರೊನಾ ಪಾಸಿಟೀವ್ ಕಾಣಿಸಿಕೊಂಡ ರಾಜ್ಯದ ಆರು ರಾಜಕಾರಣಿಗಳ ಪಟ್ಟಿಕೊರೊನಾ ಪಾಸಿಟೀವ್ ಕಾಣಿಸಿಕೊಂಡ ರಾಜ್ಯದ ಆರು ರಾಜಕಾರಣಿಗಳ ಪಟ್ಟಿ

ಇನ್ನು ಕೇಂದ್ರ ಆರೋಗ್ಯ ಸಚಿವಾಲಯದ ಅಪರ ಕಾರ್ಯದರ್ಶಿ ಆರ್ತಿ ಅಹುಜಾ ಹಾಗೂ ತುರ್ತು ವೈದ್ಯಕೀಯ ಸ್ಪಂದನಾ ಕೇಂದ್ರದ ನಿರ್ದೇಶಕ ಡಾ. ರವೀಂದ್ರನ್ ಅವರು ರಾಜ್ಯದಲ್ಲಿ ಎರಡು ದಿನಗಳು ಪರಿಶೀಲನೆ ನಡೆಸಲಿದ್ದಾರೆ. ಹಾಗಾಗಿದ್ರೆ, ಕೇಂದ್ರ ತಂಡ ಕರ್ನಾಟಕದ ಬಗ್ಗೆ ಹೇಳಿದ್ದೇನು? ಮುಂದೆ ಓದಿ...

ಹೆಚ್ಚು ಟೆಸ್ಟ್ ಗಳು ಆಗಬೇಕು ಎಂದು ಸಲಹೆ

ಹೆಚ್ಚು ಟೆಸ್ಟ್ ಗಳು ಆಗಬೇಕು ಎಂದು ಸಲಹೆ

ಕೇಂದ್ರದ ಅಧಿಕಾರಿಗಳ ಸಭೆ ಕುರಿತು ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು ''ಕಂಟೈನ್‌ಮೆಂಟ್ ಜೋನ್ ನಲ್ಲಿ ಮತ್ತಷ್ಟು ಟೆಸ್ಟ್ ಗಳು ಆಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು. ಕಂಟೈನ್‌ಮೆಂಟ್ ಜೋನ್‌ಗಳಿಗೆ ಹೋಗಿ ಪರಿಶೀಲನೆ ಮಾಡಲಿದ್ದಾರೆ. ಕೋವಿಡ್ ಕೇರ್ ಸೆಂಟರ್‌ಗಳಿಗೆ ಭೇಟಿ ನೀಡಲಿದ್ದಾರೆ. ಆ ಬಳಿಕ ಮತ್ತೊಮ್ಮೆ ಸಿಎಂ ಜೊತೆ ಸಭೆ ನಡೆಸಲಿದ್ದಾರೆ'' ಎಂದು ಮಾಹಿತಿ ನೀಡಿದ್ದಾರೆ.

ಲಾಕ್‌ಡೌನ್ ಬಗ್ಗೆ ಚರ್ಚೆ ಆಗಿಲ್ಲ

ಲಾಕ್‌ಡೌನ್ ಬಗ್ಗೆ ಚರ್ಚೆ ಆಗಿಲ್ಲ

''ಕೇಂದ್ರದ ತಂಡದ ಜೊತೆ ಲಾಕ್‌ಡೌನ್ ಬಗ್ಗೆ ಯಾವುದೇ ಚರ್ಚೆ ಆಗಲಿಲ್ಲ. ಸಮುದಾಯ ಹಬ್ಬುವಿಕೆ ಬಗ್ಗೆಯೂ ಚರ್ಚೆ ಆಗಲಿಲ್ಲ. ಸೀಲ್ ಡೌನ್ ಕ್ರಮವನ್ನು ಇನ್ನಷ್ಟು ಬಿಗಿ ಮಾಡ್ತೇವೆ ಅಷ್ಟೇ. ಕಂಟೈನ್ಮೆಂಟ್ ವಲಯದಲ್ಲಿ ಹೆಚ್ಚು ಪರೀಕ್ಷೆ ಮಾಡಲು ಸೂಚಿಸಿದ್ದಾರೆ. 60 ವರ್ಷ ಮೇಲ್ಪಟ್ಟ, 10 ವರ್ಷದ ಕೆಳಗಿನ ಮಕ್ಕಳು, ಗರ್ಭಿಣಿಯರ ಬಗ್ಗೆ ಎಚ್ಚರಿಕೆ ವಹಿಸಲು ಸೂಚಿಸಿದ್ದಾರೆ. ಜನಜಂಗುಳಿ ಪ್ರದೇಶಗಳು, ಮಾರ್ಕೆಟ್ ಪ್ರದೇಶಗಳಲ್ಲೂ ಪರೀಕ್ಷೆ ಹೆಚ್ಚಿಸಲು ಸೂಚಿಸಿದ್ದಾರೆ' ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ತಿಳಿಸಿದ್ದಾರೆ.

ಸುಮಲತಾ ಭೇಟಿ: ಸಿಎಂ ಯಡಿಯೂರಪ್ಪಗೂ ಕೊರೊನಾ ಸೋಂಕಿನ ಭೀತಿ?ಸುಮಲತಾ ಭೇಟಿ: ಸಿಎಂ ಯಡಿಯೂರಪ್ಪಗೂ ಕೊರೊನಾ ಸೋಂಕಿನ ಭೀತಿ?

ಎರಡು ದಿನ ರಾಜ್ಯದಲ್ಲಿ ಇರಲಿದ್ದಾರೆ

ಎರಡು ದಿನ ರಾಜ್ಯದಲ್ಲಿ ಇರಲಿದ್ದಾರೆ

''ಕೇಂದ್ರದ ಅಧಿಕಾರಿಗಳು ಇವತ್ತು ಹಾಗೂ ನಾಳೆ ಎರಡು ದಿನ ರಾಜ್ಯದಲ್ಲಿ ಇರ್ತಾರೆ. ಇವತ್ತು ಕೋವಿಡ್ ಕೇರ್ ಸೆಂಟರ್, ಕಂಟೈನ್.ಮೆಂಟ್ ಝೋನ್ ಗೆ ಭೇಟಿ ನೀಡಲಿದ್ದಾರೆ. ನಾಳೆ ವಿಕ್ಟೋರಿಯ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಕಂಟೈನ್ ಮೆಂಟ್ ಝೋನ್ ನಲ್ಲಿ ಪ್ರತಿ ಮನೆಗಳಿಗೆ ಟೆಸ್ಟ್ ಮಾಡಿಸಬೇಕು. 60ಕ್ಕೂ ಹೆಚ್ಚು ವಯಸ್ಸಿನವರನ್ನು ಹಾಗೂ ಮಕ್ಕಳಿಗೆ ಹೆಚ್ಚು ಟೆಸ್ಟ್ ಮಾಡಿಸಲು ಸೂಚಿಸಿದ್ದಾರೆ'' ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.

ಮಾಹಿತಿ ನೀಡಿದ ರಾಜ್ಯದ ಅಧಿಕಾರಿಗಳು

ಮಾಹಿತಿ ನೀಡಿದ ರಾಜ್ಯದ ಅಧಿಕಾರಿಗಳು

ಇನ್ನು ಕೇಂದ್ರ ತಂಡದ ಜೊತೆಗಿನ ಸಭೆಯಲ್ಲಿ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳು ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಹೈ ಫ್ಲೋ ಆಕ್ಷಿಜನ್ ವ್ಯವಸ್ಥೆ ಅಳವಡಿಸಲಾಗುತ್ತಿದ್ದು, ಆಗಸ್ಟ್ 15 ರೊಳಗಾಗಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿವೆ ಎಂದು ವಿವರಿಸಿದ್ದಾರೆ ಎಂದು ತಿಳಿದು ಬಂದಿದೆ.

English summary
Team of Central Health Department Officials Visited Karnataka Today. CM yediyurappa, sriramulu, Dr sudhakar has discuss current situation in state with them.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X