ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ಕಾರ್ಯಕರ್ತನ ಕೊಲೆ: ಸಿಎಂಗೆ ಡಿವಿಎಸ್ ಪಂಚ ಪ್ರಶ್ನೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 01 : ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಸಂತೋಷ್ ಹತ್ಯೆ ಕುರಿತು ಕೇಂದ್ರ ಸಾಂಖ್ಯಿಕ ಸಚಿವ ಡಿ.ವಿ. ಸದಾನಂದ ಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಂಚ ಪ್ರಶ್ನೆಗಳನ್ನು ಕೇಳಿದ್ದಾರೆ.

ಟ್ವೀಟ್ ಮಾಡುವ ಮೂಲಕ ಪಂಚ ಮುಗ್ಧರಿಗೆ ಪಂಚ ಪ್ರಶ್ನೆಗಳು ಎಂದು ಹೇಳಿ ಸಿದ್ದರಾಮಯ್ಯ, ಸಚಿವ ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಹಾಗೂ ಕಾಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಟ್ಯಾಗ್ ಮಾಡಿದ್ದಾರೆ.

ಜೆಸಿ ನಗರದ ಚಿನ್ನಪ್ಪ ಗಾರ್ಡನ್ ಬಳಿ ಬಿಜೆಪಿ ಕಾರ್ಯಕರ್ತ ಸಂತೋಷ್(28) ಎಂಬುವವರನ್ನು ಬರ್ಬರವಾಗಿ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಬುಧವಾರ ನಡೆದಿದೆ. ಈ ಸಂಬಂಧ ಕಾಂಗ್ರೆಸ್ ನ ಜೆಸಿ ನಗರ ಬ್ಲಾಕ್ ಅಧ್ಯಕ್ಷ ಖಾದರ್ ಅವರ ಮಗ ವಾಸಿಂ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆ ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆ

ಚಿನ್ನಪ್ಪ ಗಾರ್ಡ್ ನ್ ನಿವಾಸಿ ಸಂತೋಷ್ ಸಂಜೆ 6 ಗಂಟೆ ಸುಮಾರಿಗೆ ಸ್ಥಳೀಯ ಬೇಕರಿಯೊಂದರ ಬಳಿ ನಿಂತುಕೊಂಡಿದ್ದರು. ಅಲ್ಲಿಗೆ ಬಂದಿದ್ದ ವಾಸಿಂ, ಫಿಲಿಪ್ಸ್‌, ಇರ್ಫಾನ್ ಹಾಗೂ ಉಮ್ಮರ್ ಅವರ ಜತೆ ಜಗಳ ತೆಗೆದು ಮಾರಕಾಸ್ತ್ರಗಳಿಂದ ಹೊಡೆದಿದ್ದರು.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಂತೋಷ್‌ ಅವರನ್ನು ಸ್ಥಳೀಯರು ಜೈನ್‌ ಆಸ್ಪತ್ರೆಗೆ ಕರೆದೊಯ್ದರು. ತಪಾಸಣೆ ನಡೆಸಿದ ವೈದ್ಯರು, ಮಾರ್ಗಮಧ್ಯೆಯೇ ಅವರು ಮೃತಪಟ್ಟಿರುವುದಾಗಿ ತಿಳಿಸಿದರು. ಈ ಘಟನೆ ಸಂಬಂಧ ಟಿವಿಎಸ್ ಐದು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ಮುಗ್ಧ ಸುತ್ತೋಲೆಯ ಪರಿಣಾಮವೇ ಸಂತೋಷ್ ಕೊಲೆಗೆ ಕಾರಣ

ಮುಗ್ಧ ಸುತ್ತೋಲೆಯ ಪರಿಣಾಮವೇ ಸಂತೋಷ್ ಕೊಲೆಗೆ ಕಾರಣ

ಪಂಚ ಮುಗ್ಧರೇ ದಲಿತ ಯುವಕ ಸಂತೋಷನ ಕೊಲೆ ನಿಮ್ಮ ಮುಗ್ಧ ಸುತ್ತೋಲೆಯ ಪರಿಣಾಮ ಎಂದು ಒಪ್ಪಿಕೊಳ್ಳುತೀರಾ ಎಂದು ಮೊದಲ ಪ್ರಶ್ನೆ ಕೇಳಿದ್ದಾರೆ.

ಸಮಾಜ ದ್ರೋಹಿ ಶಕ್ತಿಗಳಿಗೆ ರಕ್ಷಣೆ

ನಿಮ್ಮ ಮುಗ್ಧಸುತ್ತೋಲೆ ಹೊರಡಿಸುವ ಮುನ್ನ ಸಮಾಜ ದ್ರೋಹಿ ಶಕ್ತಿಗಳಿಗೆ ನೀವು ರಕ್ಷಾ ಕವಚ ಹಾಕುತ್ತಿದೀರೆಂಬ ಕನಿಷ್ಠ ಜ್ಞಾನವು ನಿಮಗೆ ಇರಲಿಲ್ಲವಾ ಎಂದು ಎರಡನೇ ಪ್ರಶ್ನೆಯನ್ನು ಕೇಳಿದ್ದಾರೆ.

ಸಂತೋಷ್ ಅವರನ್ನು ಮುಗ್ಧರು ಕೊಂದರು ಎಂದು ಹೇಳುತ್ತೀರಾ?

ದಲಿತ ಯುವಕ ಸಂತೋಷನ ಹೆತ್ತವರಿಗೆ ಏನೆಂದು ಹೇಳುತ್ತೀರಿ ಅವರನ್ನು ಮುಗ್ಧರು ಕೊಂದದೆಂದು ಹೇಳುತ್ತೀರಾ ಎಂದು ಮೂರನೇ ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ.

ಕಾನೂನು ವ್ಯವಸ್ಥೆ ಪರೀಚಿಕೆಯಾಗಿದೆ

23 ಹಿಂದೂ ಕಾರ್ಯಕರ್ತರ ಕೊಲೆಯಾಗಿದೆ. ಕಾನೂನು ವ್ಯವಸ್ಥೆ ಅನ್ನುವುದು ಮರೀಚಿಕೆಯಾಗಿದೆ ನೀವು ಇದೆಲ್ಲವನ್ನು ನೋಡಿಯೂ ನೋಡದಂತೆ ಮುಗ್ಧರಾಗಿ ಉಳಿದಿರುವುದರ ಹಿಂದಿನ ಜಾಣ ಮುಗ್ಧತೆ ಏನು? ಎಂದು ಪ್ರಶ್ನಿಸಿದ್ದಾರೆ.

ಹಿಂದೂ ಬಾಂಧವರ ರಕ್ತ ದಾಹಕ್ಕೆ ಎಂದಿಗೆ ಕೊನೆ

ನಿಮ್ಮ ಮುಗ್ಧ ತುಷ್ಟೀಕರಣಕ್ಕೆ ಕೊನೆ ಯಾವಾಗ? ನಿಮ್ಮಗಳ ಆಡಳಿತದಲ್ಲಿ ಹಿಂದೂ ಬಾಂಧವರ ರಕ್ತ ಬಸಿಯುವ ದಾಹಕ್ಕೆ ಕೊನೆ ಯಾವಾಗ? ಒಂದಂತೂ ನೆನಪಿಟ್ಟುಕ್ಕೊಳ್ಳಿ ನೀವೀಗ ಉತ್ತರ ಕೊಡದಿದ್ದರೆ. ಚುನಾವಣೆಯಲ್ಲಿ ರಾಜ್ಯದ ಜನತೆ ಕೊಟ್ಟೇ ಕೊಡುತ್ತಾರೆ ಎಂದಿದ್ದಾರೆ.

English summary
Central minister DV Sadananda Gowda raised Five questions to Chief minister Siddaramaiah and four others. Regarding hindu and BJP workers murder in karnataka. Sadananda Gowda express his anguish over murder of Hindus
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X