ಸದಾ ನಗುತ್ತಲಿರುವ ಸದಾನಂದಗೌಡರು ಈ ಪ್ರಶ್ನೆಗೆ ಸಿಟ್ಟಾಗಿದ್ದೇಕೆ?
ಬೆಂಗಳೂರು, ಜುಲೈ 28: ಸದಾ ನಗುತ್ತಲಿರುವ ಕೇಂದ್ರ ಸಚಿವ ಸದಾನಂದಗೌಡ ಅವರು ಇಂದು ಮಾತ್ರ ಪತ್ರಕರ್ತರ ಪ್ರಶ್ನೆಗಳಿಗೆ ಖಾರವಾಗಿ ಉತ್ತರಿಸಿದರು.
ಸದಾನಂದಗೌಡರು ಲೋಕಸಭೆ ಚುನಾವಣೆಗೆ ಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎಂಬ ಪ್ರಶ್ನೆಗೆ ಗರಂ ಆದ ಸದಾನಂದಗೌಡ ನಾನು ಕ್ಷೇತ್ರ ಬಿಡುವುದಿಲ್ಲ ಈ ಬಾರಿಯೂ ಅಲ್ಲೇ ಸ್ಪರ್ಧಿಸುತ್ತೇನೆ ಎಂದರು.

ನಾನು ಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರಕ್ಕೆ ಹೋಗುತ್ತೇನೆ ಎಂಬುದು ಅಪ್ಪಟ ಸುಳ್ಳು. ಈ ರೀತಿ ಸುಳ್ಳು ಸುದ್ದಿ ಹರಡಿಸುತ್ತಿರುವವರು ದ್ರೋಹಿಗಳು ಎಂದು ಆಕ್ರೋಶ ಹೊರಹಾಕಿದರು.
ಕಳೆದ ಬಾರಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸದಾನಂದಗೌಡ ಅವರು ಕಾಂಗ್ರೆಸ್‌ನ ಸಿ.ನಾರಾಯಣಸ್ವಾಮಿ ವಿರುದ್ಧ ಭಾರಿ ಅಂತರದಲ್ಲಿ ಗೆಲುವು ಸಾಧಿಸಿದ್ದರು.
ಆದರೆ ಈ ಬಾರಿ ಬೆಂಗಳೂರು ಉತ್ತರ ಕ್ಷೇತ್ರದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ ಅಲ್ಲದೆ ಈ ಬಾರಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಮಾಜಿ ಸಂಸದೆ ರಮ್ಯಾ ಅವರು ಸ್ಪರ್ಧಿಸುವ ಸಾಧ್ಯತೆ ಇದ್ದು ಹಾಗಾಗಿ ಸದಾನಂದ ಗೌಡ ಅವರು ಕ್ಷೇತ್ರ ತೊರೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.












Click it and Unblock the Notifications