ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಬ್ ಗಯಾರ್ ಅತ್ಯಾಚಾರ ಪ್ರಕರಣ : ವರದಿ ಕೇಳಿದ ಕೇಂದ್ರ

|
Google Oneindia Kannada News

ಬೆಂಗಳೂರು, ಜು. 18 : ನಗರದ ಪ್ರತಿಷ್ಠಿತ ವಿಬ್ ಗಯಾರ್ ಶಾಲೆಯಲ್ಲಿ ಆರು ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಕುರಿತು ಕೇಂದ್ರ ಸರ್ಕಾರ ವರದಿ ಕೇಳಿದೆ. ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರು ಶಾಲೆಯಲ್ಲಿ ಗುರುವಾರ ರಾತ್ರಿ ಮಹಜರು ಮುಗಿಸಿದ್ದಾರೆ.

ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಕರ್ನಾಟಕದ ಶಿಕ್ಷಣ ಇಲಾಖೆ ಕಾರ್ಯದರ್ಶಿ ಅವರಿಗೆ ಘಟನೆ ಕುರಿತು ವಿವರಣೆ ನೀಡುವಂತೆ ಸೂಚನೆ ನೀಡಿದೆ. ಶಾಲೆಯಲ್ಲಿ ಮಕ್ಕಳ ಸುರಕ್ಷತೆ ತೆಗೆದುಕೊಂಡ ಕ್ರಮಗಳು, ಶಾಲೆಯ ಆಡಳಿತ ಮಂಡಳಿ ವೈಫಲ್ಯ ಮುಂತಾದ ವಿಚಾರಗಳ ಕುರಿತು ವಿವರವಾದ ವರದಿ ನೀಡುವಂತೆ ಕೇಳಿದೆ.

Vibgyor High

ಬೆಂಗಳೂರಿನ ಪ್ರತಿಷ್ಠಿತ ಐಸಿಎಸ್ ಇ ಮಾಧ್ಯಮ ಶಾಲೆ VIBGYOR HIGH ಶಾಲೆಯ 1ನೇ ತರಗತಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರದ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರು ಶುಕ್ರವಾರ ರಾತ್ರಿ ಶಾಲೆಯ ಆವರಣದಲ್ಲಿ ಮಹಜರು ನಡೆಸಿದ್ದಾರೆ. ಶನಿವಾರ ಶಾಲೆಯಲ್ಲಿ ಪೋಷಕರ ಸಭೆ ಕರೆಯಲಾಗಿದೆ. [ಕಾಮನಬಿಲ್ಲು ಶಾಲೆಯಲ್ಲಿ 'ಕಾಮುಕ' ಟ್ವೀಟ್ ಕಿಡಿ]

ಪ್ರತಿಭಟನೆ ವಾಪಸ್ : ಶಾಲಾ ಆಡಳಿತ ಮಂಡಳಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿರುವ ಹಿನ್ನಲೆಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸದಿರಲು ಪೋಷಕರು ನಿರ್ಧರಿಸಿದ್ದಾರೆ. ಶನಿವಾರ ಫೋಷಕರ ಸಭೆಯನ್ನು ಶಾಲೆಯ ಆಡಳಿತ ಮಂಡಳಿ ಕರೆದಿದ್ದು, ಸಭೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. [ಪ್ರಕರಣದ ವಿವರ]

ಶನಿವಾರ ಪ್ರತಿಭಟನೆ : VIBGYOR HIGH ಶಾಲೆಯಲ್ಲಿ ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಫೋಷಕರು ಶನಿವಾರ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಶನಿವಾರ ಬೆಳಗ್ಗೆ 10 ಗಂಟೆಗೆ ಪ್ರತಿಭಟನೆ ಶಾಲೆಯ ಮುಂಭಾಗದಲ್ಲಿ ನಡೆಯಲಿದೆ.

English summary
HRD Minister Smriti Irani expressed concern over the alleged rape of a six-year-old in Vibgyor High School in Bangalore and her ministry has sought a report from Karnataka government about the incident.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X