ಅಂಗವಿಕಲರ ಸಬಲೀಕರಣಕ್ಕಾಗಿ ನೂತನ ರಾಷ್ಟ್ರೀಯ ನೀತಿ

ಬೆಂಗಳೂರು, ಜು.6: ದೇಶದಲ್ಲಿ ಅಂಗವಿಕಲರ ಸಬಲೀಕರಣಕ್ಕಾಗಿ ನೂತನ ರಾಷ್ಟ್ರೀಯ ನೀತಿ ಪರಿಚಯಿಸಲು ಪ್ರಧಾನಿ ನರೇಂದ್ರ ಮೋದಿಯವರು ಚಿಂತನೆ ನಡೆಸಿದ್ದಾರೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತ ಕುಮಾರ್‌ ಹೇಳಿದ್ದಾರೆ.

ಅಂಗವಿಕಲರು ತಯಾರಿಸಿದ ಕರಕುಶಲ ಉತ್ಪನ್ನಗಳನ್ನು ಮಾರಾಟ ಮಾಡಲು ಯಶಸ್ವಿನಿ ಸ್ವಾವಲಂಬನಾ ಟ್ರಸ್ಟ್‌ ಮುನಿವೆಂಕಟಪ್ಪ ಲೇಔಟನ್‌ಲ್ಲಿ ತೆರೆದ ಮಾರಾಟ ಮಳಿಗೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ananth kumar
ವಿಶೇಷ ಶಿಕ್ಷಣವನ್ನು ನೀಡಿ ಅವರಲ್ಲಿರುವ ಕೌಶಲಗಳನ್ನು ಉಪಯೋಗಿಸಿ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದರು.

ಈ ನೀತಿಯ ಅನುಷ್ಠಾನಕ್ಕಾಗಿ ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಸಚಿವಾಲಯಗಳು ಒಟ್ಟಾಗಿ ಸೇರಿ ಕಾರ್ಯ‌ನಿರ್ವ‌ಹಿಸುತ್ತವೆ. ಅಂಗವಿಕಲರ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳು ಸರ್ಕಾರಿ ಅಧಿಕಾರಿಗಳಿಗೆ ತಮ್ಮ ಸಲಹೆ ನೀಡಬೇಕು ಎಂದು ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+