ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶೀಘ್ರ ಶಾಲಾ ವಾಹನಗಳಿಗೆ ಮಹಿಳಾ ಚಾಲಕರ ನೇಮಕ

|
Google Oneindia Kannada News

ಬೆಂಗಳೂರು, ಫೆಬ್ರವರಿ 2: ಶಾಲಾ ಮಕ್ಕಳ ಮೇಲೆ ಅತ್ಯಾಚಾರ, ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ವಾಹನಗಳಿಗೆ ಮಹಿಳಾ ಚಾಲಕರನ್ನು ನೇಮಕ ಮಾಡುವ ಕುರಿತು ಕೇಂದ್ರ ಸರ್ಕಾರ ಆಲೋಚಿಸಿದೆ.

ಮಹಿಳಾ ಚಾಲಕರು ಹಾಗೆಯೇ ಮಹಿಳಾ ಸಹಾಯಕರು ಕೂಡ ಇರಲಿದ್ದಾರೆ. ಕೇಂದ್ರ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮೇನಕಾ ಗಾಂಧಿ ಪ್ರಸ್ತಾವನೆ ಮುಂದಿಟ್ಟಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಯೋಗ ತರಬೇತಿ

ಬೆಳೆಯುತ್ತಿರುವ ಮಕ್ಕಳಲ್ಲಿ ಆತಂಕ ಹೋಗಲಾಡಿಸಿ, ಸಮಾಜದ ಬಗ್ಗೆ ಉತ್ತಮ ಭಾವನೆ ಬರುವಂತೆ ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ. ಇಲಾಖೆಯಲ್ಲಿ ಈ ಕುರಿತು ಚರ್ಚೆ ಈಗಾಗಲೇ ಆರಂಭವಾಗಿದೆ. ಇದಕ್ಕೆ ಪರ ವಿರೋಧ ಎರಡೂ ವ್ಯಕ್ತವಾಗಿದೆ. ಶಾಲೆಗಳಿಗೆ ಪ್ರಸ್ತು ಚಾಲಕರ ಕೊರತೆ ಎದುರಾಗಿದೆ. ಹಾಗಿರುವಾಗ ಮಹಿಳೆ ಚಾಲಕರನ್ನು ನೇಮಿಸುವುದು ಎಂದರೆ ಸುಲಭದ ಮಾತಲ್ಲ ಎಂದು ಹೇಳಿದ್ದಾರೆ.

Centre wants women appointed as drivers in school vans

ದೇಶಾದ್ಯಂತ ಮಕ್ಕಳು ಮನೆಯಿಂದ ಹೊರಗಡೆ ಕಾಲಿಡಲು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಇದೊಂದು ಉಪಾಯವನ್ನು ಇಲಾಖೆ ಮಾಡಿದೆ. ಮಹಿಳಾ ಚಾಲಕರಿದ್ದರೆ ಮಕ್ಕಳನ್ನು ಶಾಲೆಗೆ ಕಳುಹಿಸಲು ಪಾಲಕರಿಗೂ ನೆಮ್ಮದಿ ಹಾಗೆಯೇ ಮಕ್ಕಳು ಕೂಡ ಯಾವುದೇ ಆತಂಕವಿಲ್ಲದೆ ಶಾಲೆಗೆ ಹೋಗಬಹುದಾಗಿದೆ.

English summary
Soon, you might get to women drivers and assistants in vehicles that provide transport facilities to school children in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X