CET Exam Row: ಪರೀಕ್ಷೆ ಶುದ್ಧತೆ, ಮಾರ್ಗಸೂಚಿ, ಧಾರ್ಮಿಕ ಸ್ವಾತಂತ್ರ್ಯ ಬಗ್ಗೆ ರಾಮಲಿಂಗಾ ರೆಡ್ಡಿ ಪತ್ರ
ಬೆಂಗಳೂರು, ಏಪ್ರಿಲ್ 22: ದ್ವಿತೀಯ ಪಿಸಿಯು ಪೂರ್ಣಗೊಳಿಸಿದ ಅಭ್ಯರ್ಥಿಗಳ ಸಾಮಾನ್ಯ ಪ್ರವೇಶ ಪರೀಕ್ಷೆ (CET 2025) ವೇಳೆ ಜನಿವಾರ ತೆಗೆಸಿದ ಪ್ರಕರಣ ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಜನರ ಧಾರ್ಮಿಕ ಭಾವನೆಗೆ ಧಕ್ಕೆ ತರಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಆದಿಯಾಗಿ, ಕಾಂಗ್ರೆಸ್ ಸಚಿವರು, ಶಾಸಕರು ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಗರಂ ಆಗಿರುವ ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿ ಅವರು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರಿಗೆ ಪತ್ರ ಬರೆದಿದ್ದಾರೆ.
CET ಪರೀಕ್ಷೆ ಬರೆಯಲು ಕೇಂದ್ರಕ್ಕೆ ತೆರಳಿದಾಗ ತಪಾಸಣೆಗಾರರು ವಿಧ್ಯಾರ್ಥಿಯ ಜನಿವಾರ ತೆಗೆಸಿದ್ದಾರೆ. ಈ ಪ್ರಕರಣವು ತೀವ್ರ ನಮಗೆ ಆಘಾತ ತಂದಿದೆ. ಈ ಘಟನೆ ಆ ವಿದ್ಯಾರ್ಥಿಯ ಮನಸ್ಸನ್ನು ಎಷ್ಟು ಘಾಸಿಗೊಳಿಸಿರಬಹುದು ಎಂಬುದನ್ನು ಊಹಿಸಲು ಸಾಧ್ಯವಿಲ್ಲ. ಇದನ್ನು ನಾವು ಖಂಡಿಸುತ್ತೇವೆ. ಇನ್ನೂ ಈ ಪ್ರಕರಣದಲ್ಲಿ ಬಿಜೆಪಿಗರು ವಿನಾಕಾರಣ ರಾಜಕೀಯ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಅವರು ಹಿಂದೂ ವಿರೋಧಿ ಎಂದು ಆರೋಪಿಸಿದ್ದಾರೆ. ಅಪಪ್ರಚಾರ ಮಾಡುತ್ತಿರುವುದು ಮತ್ತಷ್ಟು ಕಳವಳಕಾರಿ ಎಂದು ಸಚಿವರ ರಾಮಲಿಂಗಾ ರೆಡ್ಡಿ ಅವರು ಹೇಳಿದ್ದಾರೆ.

ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸುವುದು, ಮಾಂಗಲ್ಯ ತೆಗೆಸುವುದು (ಕಳೆದ ಬಾರಿಯ KAS ಪರೀಕ್ಷೆಯಲ್ಲಿ ನಡೆದ ಘಟನೆ) ಹಿಜಾಬ್ ತೆಗೆಸುವುದು ಸರಿಯಲ್ಲ. ಅದು ಒಬ್ಬ ವ್ಯಕ್ತಿಯ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ಕೆಲಸವಾಗುತ್ತದೆ. ಇಂತಹ ನಡೆಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಪರೀಕ್ಷಾ ಪ್ರಾಧಿಕಾರಗಳೇ ಮಾಡಿರುವ ಕಾನೂನು ಹಾಗೂ ವಸ್ತ್ರ ಸಂಹಿತೆ (Dress Code) ನಿಯಮಗಳು ಭಾರತದಾದ್ಯಂತ ಅನ್ವಯವಾಗುತ್ತವೆ. ಈ ನಿಯಮಕ್ಕೂ ಸಿದ್ದರಾಮಯ್ಯ ಸರ್ಕಾರಕ್ಕೂ ಅಥವಾ ನಿಯಮ ಪಾಲನೆ ಮಾಡಿದ ಪರೀಕ್ಷಾ ಕೇಂದ್ರದ ತಪಾಸಕರಿಗೂ ಯಾವ ರೀತಿಯ ಸಂಬಂಧ ಎಂದು ಅವರು ಖಾರವಾಗಿ ಪ್ರಶ್ನೆ ಮಾಡಿದ್ದಾರೆ.
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಸ್ತ್ರ ಸಂಹಿತೆ NEET, CET ಪರೀಕ್ಷೆಗಳಲ್ಲಿ ನಿಷ್ಪಕ್ಷಪಾತತೆ ಮತ್ತು ಶುದ್ಧತೆಯನ್ನು ಕಾಪಾಡುವ ಉದ್ದೇಶ ಒಳಿತೆ. ಆದರೆ ಕೇಂದ್ರ ಸರ್ಕಾರದ ಪರೀಕ್ಷಾ ಮಾರ್ಗಸೂಚಿಗಳಲ್ಲಿ ಕೆಲವೊಂದನ್ನು ಮಾರ್ಪಾಡು ಮಾಡಿ ಧಾರ್ಮಿಕ ಸ್ವಾತಂತ್ರ್ಯ ಕಾಪಾಡಲು, ರಕ್ಷಿಸಿಕೊಳ್ಳಲು ಅನುವು ಮಾಡಿಕೊಡಬೇಕೆಂದು ಅವರು ಪತ್ರ ಮೂಲಕ ಆಗ್ರಹಿಸಿದ್ದಾರೆ.
ಈ ಪರೀಕ್ಷೆಗೆ ನಿಷಿದ್ಧ
ಕೇಂದ್ರ ಸರ್ಕಾರದ NEET ಪರೀಕ್ಷೆಯು National Testing Agency (NTA) ಮೂಲಕ ನಡೆಯುವ ಪರೀಕ್ಷೆ. CET ಪರೀಕ್ಷೆಯು ರಾಜ್ಯ ಮಟ್ಟದಿದ್ದರೂ, ತಂತ್ರಜ್ಞಾನ ಮೂಲಕದ ನಕಲು ತಡೆಗೆ ಕೇಂದ್ರದ ಮಾರ್ಗಸೂಚಿಗಳನ್ನು ರಾಜ್ಯದ ಎಲ್ಲಾ ಶಿಕ್ಷಣ ಇಲಾಖೆಯೂ ಅನುಸರಿಸುತ್ತದೆ.
ಪರೀಕ್ಷೆಗೆ ಉದ್ದ ಶರ್ಟ್, ಜಾಕೆಟ್, ಕೋಟ್, ಕೈದಾರ, ಜನಿವಾರ, ಬೂಟ್, ಕೈಗೆ ಯಾವುದೇ ದಾರ, ವಾಚು, ದಪ್ಪ/ಅತಿಯಾದ ಮೇಕಪ್, ಗಟ್ಟಿ ಅಲಂಕಾರ,ದುಪ್ಪಟ,ಚೈನ್ ಕಿವಿ ಗೆಜ್ಜೆ, ಸರ, ಉಂಗುರ, ಎಲ್ಲಾ ಆಭರಣಗಳ ಧಾರಣೆ, ಮುಚ್ಚಿದ ಪಾದರಕ್ಷೆ ನಿಷಿದ್ಧವಾಗಿದೆ.
ಪರೀಕ್ಷೆ ಶುದ್ಧತೆ ಜೊತೆಗೆ ಧಾರ್ಮಿಕ ಸ್ವಾತಂತ್ರ್ಯವೂ ಕಾಪಾಡಿ
ಸುಪ್ರೀಂ ಕೋರ್ಟ್ ಅನ್ವಯ, ಧಾರ್ಮಿಕ ಆಚರಣೆಗೆ ಹಕ್ಕಿದೆ ಆದರೆ ಪರೀಕ್ಷಾ ಕೇಂದ್ರದ ಭದ್ರತೆ ತಪಾಸಣೆಯ ನಂತರ ಮಾತ್ರ ಧರಿಸಲು ಅನುಮತಿ ಇದೆ. 'ಪರೀಕ್ಷೆಯಲ್ಲಿ ಶುದ್ಧತೆಯನ್ನು ಕಾಪಾಡುವುದು ಪ್ರಧಾನ, ಆದರೆ ಧಾರ್ಮಿಕ ಸ್ವಾತಂತ್ರ್ಯವನ್ನು ನಿರ್ಲಕ್ಷಿಸಬಾರದು' ಎಂಬ ಸಮತೋಲನದ ತೀರ್ಪನ್ನು ಮಾನ್ಯ ನ್ಯಾಯಾಲಯಗಳು ಈಗಗಲೇ ನೀಡಿವೆ ಎಂದು ಸಚಿವರ ಗಮನಕ್ಕೆ ತಂದರು.
ಕೇಂದ್ರಕ್ಕೆ ಪತ್ರ ಬರೆದು ಕ್ರಮ ವಹಿಸಿ..
ಸದರಿ ಈ ಎಲ್ಲ ಅಂಶಗಳನ್ನು ಗಮನಿಸಿ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು. ಪರೀಕ್ಷಾ ಮಾರ್ಗ ಸೂಚಿಯ ವಸ್ತ್ರಸಂಹಿತೆ ನೀತಿಯಲ್ಲಿ ಅವಶ್ಯಕ ಬದಲಾವಣೆ ಮಾಡುವಂತೆ ಕೋರಬೇಕು. ಈ ಕುರಿತು ಕೂಡಲೇ ಮುಂದಿನ ಕ್ರಮ ಕೈಗೊಳ್ಳುವಂತೆ ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications