Chaitra Kundapur: ಸ್ವಾಮೀಜಿ ಬಂಧನವಾದ್ರೆ ದೊಡ್ಡ ನಾಯಕರ ಹೆಸರುಗಳು ಬಹಿರಂಗ- ತಲ್ಲಣ ಸೃಷ್ಟಿಸಿದ ಚೈತ್ರಾ ಕುಂದಾಪುರ ಹೇಳಿಕೆ
ಬೆಂಗಳೂರು, ಸೆಪ್ಟೆಂಬರ್ 14: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ದಿನಗಳ ಕಾಲ ಸಿಸಿಬಿ ಕಸ್ಟಡಿಯಲ್ಲಿರುವ ಹಿಂದುತ್ವ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸ್ಪೋಟಕ ಹೇಳಿಕೆವೊಂದನ್ನು ನೀಡಿದ್ದಾರೆ. ಸ್ವಾಮೀಜಿ ಬಂಧನವಾದರೆ, ದೊಡ್ಡ-ದೊಡ್ಡವರ ಹೆಸರುಗಳು ಬಹಿರಂಗವಾಗಲಿವೆ ಎಂದು ತಿಳಿಸಿದ್ದಾರೆ. ಗುರುವಾರ ಬೆಳಗ್ಗೆ ಮಹಿಳಾ ಪುನರ್ವಸತಿ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆತಂದಾಗ ಚೈತ್ರಾ ಈ ಆರೋಪ ಮಾಡಿದ್ದಾರೆ.
ಇಂದಿರಾ ಕ್ಯಾಂಟೀನ್‌ನ ಬಾಕಿ ಬಿಲ್‌ಗಳನ್ನು ಪಡೆಯಲು ದೂರುದಾರ ಗೋವಿಂದ ಬಾಬು ಪೂಜಾರಿ ಸಂಚು ನಡೆಸಿದ್ದಾರೆ ಎಂದು ಇದೇ ವೇಳೆ ಚೈತ್ರಾ ಕುಂದಾಪುರ ಹೇಳಿದ್ದಾರೆ.

ಸ್ವಾಮೀಜಿಯನ್ನು ಬಂಧಿಸಿದ ನಂತರ ಹಲವಾರು ದೊಡ್ಡ ನಾಯಕರ ಹೆಸರುಗಳು ಹೊರಬರುತ್ತವೆ ಎಂದು ಚೈತ್ರಾ ಹೇಳಿದ್ದಾರೆ.
'ಒಂದು ವೇಳೆ, ಸ್ವಾಮೀಜಿಯನ್ನು ಬಂಧಿಸಿದರೆ ಸತ್ಯ ಹೊರಬರಲಿದೆ. ಹಲವಾರು ದೊಡ್ಡ ನಾಯಕರ ಹೆಸರುಗಳು ಹೊರಬೀಳಲಿವೆ. ಇಂದಿರಾ ಕ್ಯಾಂಟೀನ್ ಬಿಲ್ ಬಾಕಿ ಉಳಿದಿರುವುದರಿಂದ ಗೋವಿಂದ ಬಾಬು ಪೂಜಾರಿ ಅವರು ಈ ಸಂಚನ್ನು ರೂಪಿಸಿದ್ದಾರೆ' ಎಂದು ಚೈತ್ರಾ ಬಹಿರಂಗ ಹೇಳಿಕೆ ನೀಡಿದ್ದಾರೆ.
ಮಂಗಳವಾರ ಸಂಜೆ ಬೆಂಗಳೂರು ಸಿಸಿಬಿ ಪೊಲೀಸರು ಚೈತ್ರಾ ಅವರನ್ನು ಉಡುಪಿಯ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಬಂಧಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ ಐವರನ್ನು ಚಿಕ್ಕಮಗಳೂರಿನಲ್ಲಿ ಬಂಧಿಸಲಾಗಿದೆ.
ಗೋವಿಂದ ಬಾಬು ಪೂಜಾರಿ ಅವುರ ಬೆಂಗಳೂರಿನ ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ 8 ಜನರ ವಿರುದ್ಧ ದೂರು ದಾಖಲಿಸಿದ್ದರು. ಆ ನಂತರ ಆರೋಪಿಗಳನ್ನು ಬಂಧಿಸಲಾಗಿದೆ.
ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಚೈತ್ರಾ ಅವರು ಆಶ್ವಾಸನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ 5 ಕೋಟಿ ರೂಪಾಯಿ ಗೋವಿಂದ ಬಾಬು ಪೂಜಾರಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಎಫ್‌ಐಆರ್‌ನಲ್ಲಿ ಆರೋಪಿ ನಂಬರ್ 3 ಎಂದು ಬಳ್ಳಾರಿಯ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಹೆಸರಿಸಲಾಗಿದೆ. ಅವರಿಗೆ 5 ಕೋಟಿ ಮತ್ತು 1.5 ಕೋಟಿ ರೂ.ಗಳನ್ನು ಕಂತುಗಳಲ್ಲಿ ನೀಡಲಾಗಿದೆ ಎಂದು ದೂರು ನೀಡಲಾಗಿದೆ.
ದೂರುದಾರ ಪೂಜಾರಿ ಅವರು ಚೆಫ್ಟಾಕ್ ಫುಡ್ ಅಂಡ್ ಹಾಸ್ಪಿಟಾಲಿಟಿ ಸರ್ವಿಸಸ್ ಎಂಬ ಕಂಪನಿಯನ್ನು ಹೊಂದಿದ್ದಾರೆ. 2017 ರಿಂದ ನಗರದಲ್ಲಿ 98 ಇಂದಿರಾ ಕ್ಯಾಂಟೀನ್‌ಗಳ ಗುತ್ತಿಗೆಯನ್ನು ಹೊಂದಿದ್ದಾರೆ. ವರದಿಗಳ ಪ್ರಕಾರ, ಅವರ 35 ಕೋಟಿ ಬಿಲ್‌ಗಳು ಬಾಕಿ ಉಳಿದಿವೆ ಎಂದು ಹೇಳಲಾಗುತ್ತಿದೆ.
ಚೈತ್ರಾ ಕುಂದಾಪುರ ಮತ್ತು ಇತರ ಐವರನ್ನು ಬಂಧಿಸಿದ ನಂತರ ನಗರ ಅಪರಾಧ ವಿಭಾಗ (ಸಿಸಿಬಿ) ಬುಧವಾರ ಅವರನ್ನು ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಿತು. ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಾಲಯ ಆರು ಆರೋಪಿಗಳನ್ನು ಸೆಪ್ಟೆಂಬರ್ 23ರ ವರೆಗೆ ಸಿಸಿಬಿ ವಶಕ್ಕೆ ನೀಡಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications