Darshan: ಡಿ.ಕೆ. ಸುರೇಶ್ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ
ನಟ ದರ್ಶನ್ ತೂಗುದೀಪ ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಪರವಾಗಿ ಶನಿವಾರ ಪ್ರಚಾರ ನಡೆಸಲಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ಚುನಾವಣಾ ಪ್ರಚಾರ ನಡೆಸಿದ್ದ ದರ್ಶನ್ ಈಗ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಡಿ.ಕೆ. ಸುರೇಶ್, "ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರಕ್ಕಾಗಿ ಶನಿವಾರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಆಗಮಿಸುತ್ತಿದ್ದಾರೆ. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ನೀಡಬೇಕು." ಎಂದು ಮನವಿ ಮಾಡಿದ್ದಾರೆ.
ಬನ್ನಿ ಜೊತೆಯಾಗಿ
— DK Suresh (@DKSureshINC) April 19, 2024
ಗೆಲವು ಸಾಧಿಸೋಣ!
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರಕ್ಕಾಗಿ ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಆಗಮಿಸುತ್ತಿದ್ದಾರೆ. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ನೀಡಬೇಕು.#DKSuresh #DBoss #LokSabhaElections2024 pic.twitter.com/PmFqNNszaK
ಎಲ್ಲೆಲ್ಲಿ ಪ್ರಚಾರ?
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ರಾಜ ರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ಮತ್ತು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.
ಸಂಜೆ 4 ಗಂಟೆಗೆ ಯಶವಂತಪುರ ಮಾರ್ಕೆಟ್, ಸಂಜೆ 5 ಗಂಟೆಗೆ ಲಗ್ಗೆರೆ ಸರ್ಕಲ್‌ನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಸಂಜೆ 6 ಗಂಟೆಗೆ ಕೊಟ್ಟಿಗೆಪಾಳ್ಯ ಶ್ರೀನಿವಾಸನಗರ ಸರ್ಕಲ್‌ನಲ್ಲಿ ಕೂಡ ರೋಡ್ ಶೋದಲ್ಲಿ ಭಾಗವಹಿಸಲಿದ್ದಾರೆ.
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಉತ್ತರ ಹಳ್ಳಿಯಲ್ಲಿ ಸಂಜೆ 7 ಗಂಟೆಗೆ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಸಂಜೆ 8 ಗಂಟೆಗೆ ಗೊಟ್ಟಿಗೆರೆ ವಾರ್ಡ್‌ನ ವೀವರ್ಸ್ ಕಾಲೋನಿಯಲ್ಲಿ ಪ್ರಚಾರ ನಡೆಸಲಿದ್ದಾರೆ.
ಸುಮಲತಾ ಅವರ ಬೆಂಬಲಿಗರಾಗಿರುವ ನಟ ದರ್ಶನ್ ಈಗ ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರ ಮಾಡುತ್ತಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ಸ್ಟಾರ್ ಚಂದ್ರು ಪರವಾಗಿ ಮಂಡ್ಯದ ಮಳವಳ್ಳಿಯಲ್ಲಿ ಪ್ರಚಾರ ನಡೆಸಿದ್ದರು.
ಡಿಕೆ ಸುರೇಶ್ ಬಿರುಸಿನ ಪ್ರಚಾರ
ಬೆಂಗಳೂರು ಗ್ರಾಮಾಂತರ ರಾಜ್ಯದಲ್ಲಿ ಕುತೂಹಲ ಕೆರಳಿಸಿರುವ ಲೋಕಸಭಾ ಕ್ಷೇತ್ರವಾಗಿದೆ. ಡಿಕೆ ಸುರೇಶ್ ಎದುರಾಳಿಯಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ. ಮಂಜುನಾಥ್ ಕಣಕ್ಕಿಳಿದಿರುವುದು ತೀವ್ರ ಹಣಾಹಣಿ ಏರ್ಪಟ್ಟಿದೆ.












Click it and Unblock the Notifications