ಚಂದ್ರಯಾನ-3 ಯಶಸ್ವಿಗೆ ಕಾರಣಕರ್ತರಾದ ವಿಜ್ಞಾನಿಗಳಿಗೆ ಸನ್ಮಾನ ಮಾಡಲಾಗುತ್ತದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್ 24: ಚಂದ್ರನ ಮೇಲೆ ವಿಕ್ರಂ ಲ್ಯಾಂಡರ್ ಸುರಕ್ಷಿತವಾಗಿ ಇಳಿದಿರುವುದು ಐತಿಹಾಸಿಕ ಸಾಧನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅಲ್ಲದೆ ಇದೇ ವೇಳೆ ಅವರು ಇದಕ್ಕೆ ಪ್ರಮುಖ ಕಾರಣಕರ್ತರಾದ ವಿಜ್ಞಾನಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಕೂಡ ಆಯೋಜಿಸಲಾಗುತ್ತದೆ ಎನ್ನುವ ಮಾಹಿತಿಯನ್ನು ನೀಡಿದರು.

ಇಂದು (ಆಗಸ್ಟ್‌ 24) ಬೆಳಗ್ಗೆ ಇಸ್ರೋ ಸಂಸ್ಥೆಗೆ ಭೇಟಿ ನೀಡಿ ಅಧ್ಯಕ್ಷ ಎಸ್.ಸೋಮನಾಥ್ ಹಾಗೂ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

chandrayaan-3-success

ಇಸ್ರೋ ಸಾಧನೆಯನ್ನು ಅಭಿನಂದಿಸಬೇಕು

ಇಸ್ರೋ ಸಾಧನೆಯಿಂದ ಇಡೀ ಜಗತ್ತು ಭಾರತದ ಕಡೆಗೆ ನೋಡುವಂತೆ ಆಗಿದೆ. ಜಗತ್ತಿನಲ್ಲಿಯೇ ರಷ್ಯಾ, ಅಮೆರಿಕ, ಚೀನಾ ದೇಶಗಳನ್ನು ಬಿಟ್ಟರೆ ಚಂದ್ರನ ದಕ್ಷಿಣ ಭಾಗದಲ್ಲಿ ಕಾಲಿರಿಸಿರುವ ನಾಲ್ಕನೇ ದೇಶ ಭಾರತ. ನಾವೆಲ್ಲರೂ ಇಸ್ರೋ ಸಾಧನೆಯನ್ನು ಮೆಚ್ಚಿ ಅಭಿನಂದಿಸಬೇಕು ಎಂದರು.

ಸರ್ಕಾರದ ವತಿಯಿಂದ ಸನ್ಮಾನ

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿ ಇಸ್ರೋ ವಿಜ್ಞಾನಿಗಳನ್ನು ಸರ್ಕಾರ ಗೌರವಿಸಲಿದೆ. ಇಸ್ರೋ ಅಧ್ಯಕ್ಷ ಸೋಮನಾಥ್ ಸೇರಿದಂತೆ ಕರ್ನಾಟಕದ 500 ವಿಜ್ಞಾನಿಗಳು ಇದರಲ್ಲಿ ಪಾಲ್ಗೊಳ್ಳಲಿದ್ದು, ಅವರೆಲ್ಲರಿಗೂ ಸನ್ಮಾನಿಸಲಾಗುವುದು ಎಂದರು. ಇನ್ನು 3 ಲಕ್ಷ 84 ಕಿಲೋ ಮೀಟರ್‌ ಪ್ರಯಾಣ ಮಾಡಿರುವ ವಿಕ್ರಂ ಸಾಧನೆ ಕಡಿಮೆಯಲ್ಲ. ಇದಕ್ಕೆ ಸರ್ಕಾರದ ಸಹಕಾರ ಬೆಂಬಲ ಇರಲಿದೆ. ಇದು ದೇಶದ ಹೆಮ್ಮೆ ಎಂದರು.

ವಿಜ್ಞಾನಿಗಳು ಹಗಲು ಇರುಳು ಎನ್ನದೆ ಇದಕ್ಕಾಗಿ ಶ್ರಮಿಸಿದ್ದಾರೆ. ದೇಶದ ಒಟ್ಟು ಒಂದು ಸಾವಿರ ವಿಜ್ಞಾನಿಗಳು ಇದರಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಿಂದಲೇ 500 ಜನ ಪಾಲ್ಗೊಂಡಿದ್ದಾರೆ. ಸೆಪ್ಟೆಂಬರ್ 02ರ ನಂತರ ವಿಜ್ಞಾನಿಗಳಿಗೆ ಸನ್ಮಾನ ಕಾರ್ಯಕ್ರಮದ ದಿನಾಂಕ ನಿಗದಿಯಾಗಲಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+