ಬೆಂಗಳೂರಿನ ಈ ರೈಲು ಸೇವೆಗಳಲ್ಲಿ ಬದಲಾವಣೆ. ರೈಲುಗಳ ಪಟ್ಟಿ
ಬೆಂಗಳೂರು, ಫೆಬ್ರವರಿ 20: ಉದ್ಯಾನ ನಗರಿ ಬೆಂಗಳೂರಿನಿಂದ ಸಂಚಾರ ನಡೆಸುವ ಕೆಲವು ರೈಲುಗಳ ಪಟ್ಟಿಯಲ್ಲಿ ಕೆಲವು ಬದಲಾವಣೆಯಾಗಲಿದೆ. ಸುರಕ್ಷತಾ ಕ್ರಮಗಳು ಮತ್ತು ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳ ನಡುವೆ ನಡೆಯುತ್ತಿರುವ ರಸ್ತೆ ಕೆಳಸೇತುವೆ ಕಾಮಗಾರಿಗಳ ಹಿನ್ನಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ.
ಬೆಂಗಳೂರು ನಗರದಿಂದ ಸಂಚಾರ ನಡೆಸುವ ಹಲವು ರೈಲು ಸೇವೆಗಳಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತಿದೆ ಎಂದು ನೈಋತ್ಯ ರೈಲ್ವೆ ಹೇಳಿದೆ. ರೈಲುಗಳ ಸಂಚಾರ ಭಾಗಶಃ ರದ್ದು, ರದ್ದು, ಮಾರ್ಗ ಬದಲಾವಣೆ ಬಗ್ಗೆ ಮಾಹಿತಿ ನೀಡಲಾಗಿದೆ.

ರೈಲುಗಳು ಭಾಗಶಃ ರದ್ದು
* ಫೆಬ್ರವರಿ 24 ಮತ್ತು 27 ರಂದು ರೈಲು ಸಂಖ್ಯೆ 16521 ಬಂಗಾರಪೇಟೆ-ಕೆಎಸ್‌ಆರ್ ಬೆಂಗಳೂರು ಮೆಮು ರೈಲು ಬೈಯಪ್ಪನಹಳ್ಳಿ ಮತ್ತು ಕೆಎಸ್‌ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಿದೆ. ಇದು ಬೈಯ್ಯಪ್ಪನಹಳ್ಳಿಯಲ್ಲಿ ಕೊನೆಗೊಳ್ಳುತ್ತದೆ.
* ಫೆಬ್ರವರಿ 24 ಮತ್ತು 27ರಂದು ರೈಲು ಸಂಖ್ಯೆ 56520 ಹೊಸಪೇಟೆ-ಕೆಎಸ್‌ಆರ್ ಬೆಂಗಳೂರು ಡೈಲಿ ಪ್ಯಾಸೆಂಜರ್ ರೈಲು ಯಶವಂತಪುರ ಮತ್ತು ಕೆಎಸ್‌ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಿದೆ. ಇದು ಯಶವಂತಪುರದಲ್ಲಿ ಕೊನೆಗೊಳ್ಳುತ್ತದೆ.
* ಫೆಬ್ರವರಿ 25 ಮತ್ತು 28 ರಂದು ರೈಲು ಸಂಖ್ಯೆ 17391 ಕೆಎಸ್‌ಆರ್ ಬೆಂಗಳೂರು-ಎಸ್‌ಎಸ್‌ಎಸ್ ಹುಬ್ಬಳ್ಳಿ ಡೈಲಿ ಎಕ್ಸ್‌ಪ್ರೆಸ್ ರೈಲು ಕೆಎಸ್‌ಆರ್ ಬೆಂಗಳೂರು ಮತ್ತು ಯಶವಂತಪುರ ನಡುವೆ ಭಾಗಶಃ ರದ್ದಾಗಿದೆ. ಈ ರೈಲು ಕೆಎಸ್‌ಆರ್ ಬೆಂಗಳೂರಿನ ಬದಲು ಯಶವಂತಪುರದಿಂದ ಪ್ರಾರಂಭ.
* ಫೆಬ್ರವರಿ 23 ಮತ್ತು 26ರಂದು ಹೊರಡುವ ರೈಲು ಸಂಖ್ಯೆ 07339 ಎಸ್‌ಎಸ್‌ಎಸ್ ಹುಬ್ಬಳ್ಳಿ-ಕೆಎಸ್‌ಆರ್ ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್ ವಿಶೇಷ ರೈಲು ಯಶವಂತಪುರ ಮತ್ತು ಕೆಎಸ್‌ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಿದೆ. ರೈಲು ಯಶವಂತಪುರದಲ್ಲಿ ಕೊನೆಗೊಳ್ಳುತ್ತದೆ.
* ಫೆಬ್ರವರಿ 24 ಮತ್ತು 27ರಂದು ಹೊರಡುವ ರೈಲು ಸಂಖ್ಯೆ 07340 ಕೆಎಸ್‌ಆರ್ ಬೆಂಗಳೂರು-ಎಸ್‌ಎಸ್‌ಎಸ್ ಹುಬ್ಬಳ್ಳಿ ಡೈಲಿ ಎಕ್ಸ್‌ಪ್ರೆಸ್ ವಿಶೇಷ ರೈಲು ಕೆಎಸ್‌ಆರ್ ಬೆಂಗಳೂರು ಮತ್ತು ಯಶವಂತಪುರ ನಡುವೆ ಭಾಗಶಃ ರದ್ದಾಗಿದೆ. ಈ ರೈಲು ಕೆಎಸ್‌ಆರ್ ಬೆಂಗಳೂರಿನ ಬದಲು ಯಶವಂತಪುರದಿಂದ ಹೊರಡಲಿದೆ.
ರೈಲುಗಳ ಮಾರ್ಗ ಬದಲಾವಣೆ
* ಫೆಬ್ರವರಿ 24 ಮತ್ತು 27ರಂದು ಹೊರಡುವ ರೈಲು ಸಂಖ್ಯೆ 12658 ಕೆಎಸ್‌ಆರ್ ಬೆಂಗಳೂರು-ಡಾ.ಎಂಜಿಆರ್ ಚೆನ್ನೆ ಸೆಂಟ್ರಲ್ ಡೈಲಿ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಹೆಬ್ಬಾಳ, ಬಾಣಸವಾಡಿ, ಎಸ್‌ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ ಮತ್ತು ಬಂಗಾರಪೇಟೆ ನಿಲ್ದಾಣಗಳ ಮೂಲಕ ಸಂಚರಿಸಲಿದೆ.
* ಫೆಬ್ರವರಿ 24 ಮತ್ತು 27ರಂದು ಹೊರಡುವ ರೈಲು ಸಂಖ್ಯೆ 16593 ಕೆಎಸ್‌ಆರ್ ಬೆಂಗಳೂರು-ನಾಂದೇಡ್ ಡೈಲಿ ಎಕ್ಸ್‌ಪ್ರೆಸ್ ರೈಲು ಕೆಎಸ್‌ಆರ್ ಬೆಂಗಳೂರು, ಯಶವಂತಪುರ ಮತ್ತು ಯಲಹಂಕ ನಿಲ್ದಾಣಗಳ ಮೂಲಕ
ಸಂಚರಿಸಲಿದೆ.
* ಫೆಬ್ರವರಿ 24 ಮತ್ತು 27ರಂದು ಹೊರಡುವ ರೈಲು ಸಂಖ್ಯೆ 06270 ಎಸ್‌ಎಂವಿಟಿ ಬೆಂಗಳೂರು-ಮೈಸೂರು ಡೈಲಿ ಪ್ಲಾಸೆಂಜರ್ ಸ್ಪೆಷಲ್ ರೈಲು ಎಸ್‌ಎಂವಿಟಿ ಬೆಂಗಳೂರು, ಬಾಣಸವಾಡಿ, ಯಶವಂತಪುರ ಮತ್ತು ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ಮೂಲಕ ಸಂಚರಿಸಲಿದೆ.
* ಫೆಬ್ರವರಿ 24 ಮತ್ತು 27ರಂದು ಹೊರಡುವ ರೈಲು ಸಂಖ್ಯೆ 16022 ಮೈಸೂರು-ಡಾ.ಎಂಜಿಆರ್ ಚೆನ್ನೆ ಸೆಂಟ್ರಲ್ ಡೈಲಿ ಎಕ್ಸ್‌ಪ್ರೆಸ್ ರೈಲು ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಲೊಟ್ಟೆಗೊಲ್ಲಹಳ್ಳಿ, ಬಾಣಸವಾಡಿ, ಬೈಯಪ್ಪನಹಳ್ಳಿ ಮತ್ತು ಕೃಷ್ಣರಾಜಪುರಂ ಮೂಲಕ ಸಂಚರಿಸಲಿದೆ.
* ಫೆಬ್ರವರಿ 24 ಮತ್ತು 27ರಂದು ಹೊರಡುವ ರೈಲು ಸಂಖ್ಯೆ 06269 ಮೈಸೂರು-ಎಸ್‌ಎಂವಿಟಿ ಬೆಂಗಳೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಬಾಣಸವಾಡಿ ಮತ್ತು ಎಸ್‌ಎಂವಿಟಿ ಬೆಂಗಳೂರು ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಈ ಮೇಲಿನ ರೈಲುಗಳು (12658, 16593, 06270, 16022 ಮತ್ತು 06269) ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣದಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.












Click it and Unblock the Notifications