CP Yogeshwar: ಲಕ್ ಬದಲಿಸಲಿದೆಯಾ ಸೈನಿಕನ ಕ್ಯಾಪ್

ಬೆಂಗಳೂರು, ಅಕ್ಟೋಬರ್ 23: ಕರ್ನಾಟಕ ಉಪ ಚುನಾವಣೆ ವಿಚಾರದಲ್ಲಿ ರಾಜಕೀಯ ಶಕ್ತಿ ಕೇಂದ್ರವಾಗಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಪಕ್ಷದಿಂದ ಸಿಪಿ ಯೋಗೇಶ್ವರ ಕಣಕ್ಕಿಳಿಯುವುದು ಖಚಿತವಾಗಿದೆ. ಚನ್ನಪಟ್ಟಣ ಟಿಕೆಟ್ ವಿಚಾರದ ಸದ್ದು ಕೇಳು ಬರುತ್ತಿದ್ದಂತೆ ಹೊಸ ಲೂಕ್‌ನಲ್ಲಿ ಜನರೆದು ಸಿಪಿ ಯೋಗೇಶ್ವರ ಬಂದಿದ್ದಾರೆ. ಅವರು ಕ್ಯಾಪ್ ಧರಿಸಿಯೇ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅವರ ಕ್ಯಾಪ್ ಫೋಟೋಗಳು ಎಲ್ಲೆಡೆ ಹರಿದಾಡುತ್ತವೆ.

ಮೈತ್ರಿ ಸರ್ಕಾರ ಪತನದ ಬಳಿಕ ಬಿಜೆಪಿಯಲ್ಲಿ ಸಚಿವರಾಗಿದ್ದ ಅವರು, ಲೋಕಸಭಾ ಚುನಾವಣೆ ನಂತರದವರೆಗೆ ಅವರು ಎಲ್ಲಿಯೂ ಕ್ಯಾಪ್ ಸಮೇತ ಕಂಡಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ಸೈನಿಕನ ಕ್ಯಾಪ್ ಭಾರೀ ಸುದ್ದಿ ಮಾಡುತ್ತಿದೆ. ಹೊಸ ಅವತಾರದಲ್ಲಿ ಬಂದಿರುವ ಅವರಿಗೆ ಈ ಕ್ಯಾಪ್ ಲಕ್ ಸಂಕೇತವಾ? ಅಥವಾ ಈ ಕ್ಯಾಪ್ ಹಾಕಿದ್ದರಿಂದಲೇ ಅವರಿಗೆ ಟಿಕೆಟ್ ಸಿಕ್ಕಿತೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.

Channapatna ByPoll Congress Candidate CP Yogeshwara s hat Secret Reveal

ಅಂದುಕೊಂಡಂತೆ ಚನ್ನಪಟ್ಟಣದಿಂದ ಬಹುದೊಡ್ಡ ಪಕ್ಷದಿಂದ ಚುನಾವಣೆ ಕಣಕ್ಕಿಳಿಯಲು ಅವರಿಗೆ ಟಿಕೆಟ್ ಸಿಕ್ಕಿದೆ. ಬಿಜೆಪಿ ತೊರೆದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಸಿಪಿ ಯೋಗೇಶ್ವರ ಅವರು ಬುಧವಾರ ಕಾಂಗ್ರೆಸ್ ಸೇರಿದ್ದಾರೆ.

ಪಟ್ಟು ಬಿಡದ ಎಚ್‌ಡಿ ಕುಮಾರಸ್ವಾಮಿ ಅವರ ವಿರುದ್ಧ ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಗೆಲ್ಲಲು ಪಣ ತೊಟ್ಟಿದ್ದಾರೆ. ಕ್ಷೇತ್ರದಲ್ಲಿ ಹೆಚ್ಚು ಓಡಾಡಿರುವ ಅವರಿಗೆ ಲಕ್ ಅಗತ್ಯತೆ ಇದೆ. ಹೀಗಾಗಿ ಅವರು ಈ ಕ್ಯಾಪ್ ಧರಿಸುತ್ತಿದ್ದಾರೆ. ಹೊಸ ಲುಕ್ ನಲ್ಲಿ ಒಂದು ಪಕ್ಷ ಬಿಟ್ಟು ಮತ್ತೊಂದು ಪಕ್ಷದಲ್ಲಿ ಸಕ್ರಿಯವಾಗಿದ್ದಾರೆ. ಇದು ಕ್ಯಾಪ್ ಲೂಕ್ಕು ಅವರಿಗೆ ಲಕ್ ತಂದು ಕೊಡಬಹುದು ಅಂತಲೂ ಮಾತನಾಡಿಕೊಳ್ಳಲಾಗುತ್ತಿದೆ.

ಉಪಚುನಾವಣೆಗೆ ಮಹ್ವದ ನಿರ್ಧಾರ ಕೈಗೊಳ್ಳುವ ಮೂಲಕ ಅದೃಷ್ಟದ ಪರೀಕ್ಷೆ ಇಳಿದ ಸಿ.ಪಿ ಯೋಗೇಶ್ವರ ಅವರಿಗೆ ಈ ಕ್ಯಾಪ್ ಲಕ್ ತಂದುಕೊಡುತ್ತಾ ಎಂಬುದು ಖಾತ್ರಿಯಾಗಲು ನಾವೆಲ್ಲ ತಿಳಿಯಲು ನವೆಂಬರ್ 23 ಮತ ಎಣಿಕೆವರೆಗೆ ಕಾಯಬೇಕಿದೆ. ನವೆಂಬರ್ 13ರಂದು ಶಿಗ್ಗಾವಿ, ಸಂಡೂರು ಮತ್ತು ಚನ್ನಪಟ್ಟಣದಲ್ಲಿ ಮತದಾನ ನಡೆಯಲಿದೆ.

ಯೋಗೇಶ್ವರ್ ರಾಜಕೀಯ ಭವಿಷ್ಯ ಹಾಳುಗೆಡವಲು 'ಡಿಕೆಶಿ' ಪ್ಲಾನ್

ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿರುವ ಸಿ.ಪಿ.ಯೋಗೇಶ್ವರ್ ಕುರಿತು ಬುಧವಾರ ನಗರದಲ್ಲಿ ಮಾತನಾಡಿದ ಬಿಜೆಪಿ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಯೋಗೇಶ್ವರ ಅವರು ತಮ್ಮ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ. ಕಾಂಗ್ರೆಸ್‌ನಿಂದ ಚನ್ನಪಟ್ಟಣದಲ್ಲಿ ಸ್ಪರ್ಧಿಸಿದರೆ ಅವರಿಗೆ ಲೀಡ್‌ ದೊರೆಯುವುದಿಲ್ಲ ಎಂದು ಅವರು ಭವಿಷ್ಯ ನುಡಿದರು.

Channapatna ByPoll Congress Candidate CP Yogeshwara s hat Secret Reveal

ಜೆಡಿಎಸ್ ನಾಯಕರು ಕಾರ್ಯಕರ್ತರನ್ನು ಒಪ್ಪಿಸಿ ಸಿ.ಪಿ.ಯೋಗೇಶ್ವರ್‌ ಅವರಿಗೆ ಚನ್ನಪಟ್ಟಣ ಕ್ಷೇತ್ರದ ಟಿಕೆಟ್‌ ನೀಡಲು ತಯಾರಾಗಿದ್ದೆವು. ನಾನು ಸೇರಿದಂತೆ ಎಲ್ಲ ಬಿಜೆಪಿ ನಾಯಕರು ಅವರಿಗೆ ಬೆಂಬಲ ನೀಡಿದ್ದೆವು. ಅವರಿಗೆ ಟಿಕೆಟ್‌ ಸಿಗಲು ಎಲ್ಲ ಪ್ರಯತ್ನ ಮಾಡಿದ್ದೆವು. ಅವರು ಪಕ್ಷ ತೊರೆಯುವ ಮೂಲಕ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.

ಮೈತ್ರಿಯ ಒಗ್ಗಟ್ಟನ್ನು ಬದಿಗೆ ಸರಿಸಿ ಕಾಂಗ್ರೆಸ್‌ಗೆ ಸೇರಿರುವುದರಿಂದ ಅವರ ರಾಜಕೀಯ ಭವಿಷ್ಯ ಹಾಳಾಗಿದೆ. ಎನ್‌ಡಿಎದಲ್ಲಿ ಯೋಗೇಶ್ವರ್‌ ಅವರಿಗೆ ಹಿರಿತನವಿತ್ತು. ಈಗ ಕಾಂಗ್ರೆಸ್‌ಗೆ ಸೇರಿ ಕೊನೆಯ ಸಾಲಿನಲ್ಲಿ ನಿಂತಿದ್ದಾರೆ. ಅವರು ಕಾಂಗ್ರೆಸ್‌ಗೆ ಹೋದ ಕೂಡಲೇ ಮಣೆ ಹಾಕಿ ಕೂರಿಸುವುದಿಲ್ಲ. ಡಿ.ಕೆ.ಶಿವಕುಮಾರ್‌ ಅವರು ಯೋಗೇಶ್ವರ್‌ನ್ನು ಕರೆಸಿಕೊಂಡು ಕೆಡಿಸಿದ್ದಾರೆ. ಇನ್ನು ಹೇಗೆ ತುಳಿಯಬೇಕೆಂದು ಡಿ.ಕೆ.ಶಿವಕುಮಾರ್‌ ಅವರೇ ಯೋಜನೆ ರೂಪಿಸಿರುತ್ತಾರೆ. ಇವರು ಮುಂದೆ ಬರಲು ಕಾಂಗ್ರೆಸ್‌ನ ಯಾರೂ ಬಿಡುವುದಿಲ್ಲ ಎಂದು ಅವರು ತಿಳಿಸಿದರು.

ಚನ್ನಪಟ್ಟಣ ಜೆಡಿಎಸ್‌ಗೆ ಸೇರಿದ್ದ ಕ್ಷೇತ್ರ. ಹೀಗಾಗಿ ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುವುದು ಜೆಡಿಎಸ್‌ಗೆ ಬಿಡಲಾಗಿತ್ತು. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ನನ್ನೊಡನೆ ಈ ಬಗ್ಗೆ ಮಾತಾಡಿದ್ದಾರೆ. ನಿನ್ನೆಯೇ ಈ ಬಗ್ಗೆ ನಮಗೆ ಸುಳಿವು ಸಿಕ್ಕಿತ್ತು. ಅವರನ್ನು ಇಲ್ಲಿಯೇ ಉಳಿಸಿಕೊಳ್ಳಬೇಕೆಂದು ಎಲ್ಲ ಪ್ರಯತ್ನ ಮಾಡಲಾಗಿತ್ತು. ಆದರೆ ಅವರೇ ಭವಿಷ್ಯಕ್ಕೆ ಕಲ್ಲು ಹಾಕಿಕೊಂಡಿದ್ದಾರೆ. ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದರೆ ಅವರಿಗೆ ಗೆಲ್ಲಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+