ರಾಜನಾಲಾ ಕಬಳಿಕೆ: 20 ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಚಾರ್ಜ್ ಶೀಟ್

ಬೆಂಗಳೂರು, ಸೆಪ್ಟೆಂಬರ್ 7: ಬೆಂಗಳೂರಿನಲ್ಲಿರುವ ರಾಜಕಾಲುವೆ ಒತ್ತುವರಿಗೆ ಸಹಾಯ ಮಾಡಿದ ಆರೋಪದ ಮೇಲೆ ಬಿಬಿಎಂಪಿ 20 ಅಧಿಕಾರಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ.

ಈ ಕುರಿತು ನಗರಾಭಿವೃದ್ಧಿ ಇಲಾಖೆಯು ಕ್ರಮಕ್ಕೆ ಮುಂದಾಗಿದ್ದು, ಬೆಳೇಕಹಳ್ಳಿ, ಅವನಿ ಶೃಂಗೇರಿನಗರ, ನಾನಪ್ಪನಹಳ್ಳಿಯ ರಾಜಕಾಲುವೆ, ಕಸವನಹಳ್ಳಿ ಕೆರೆ ಅಂಗಳದಲ್ಲಿ ಮನೆಗಳು ಮತ್ತು ಅಪಾರ್ಟ್ ಮೆಂಟ್ ಸಮುಚ್ಚಯಗಳ ನಿಮಾಣಕ್ಕೆ ಕಾನೂನು ಬಾಹಿರವಾಗಿ ನಕ್ಷೆ ಮಂಜೂರಾತಿ, ಸ್ವಾಧೀನಾನುಭವ ಪ್ರಮಾಣಪತ್ರ ನೀಡಿದ್ದ 20 ಅಧಿಕಾರಿಗಳ ವಿರುದ್ಧ ಚಾರ್ಜ್ ಶೀಟ್ ಹೊರ ಎಂವಿ ಗುರುಪ್ರಸಾದ್ ಅವರನ್ನು ಈಗಾಗಲೇ ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಕಳೆದ ಎರಡು ವರ್ಷಗಳ ಹಿಂದೆ ಬೆಂಗಳೂರಲ್ಲಿ ಸುರಿದ ಭಾರಿ ಮಳೆಗೆ ರಾಜಕಾಲುವೆಗಳು ಉಕ್ಕಿಹರಿಸು, ಕೆಲವು ಬಡಾವಣೆಗಳು ಜಲಾವೃತವಾಗಿದ್ದವು, ಮಳೆ ಅನಾಹುತಕ್ಕೆ ರಾಜಕಾಲುವೆ ಒತ್ತುವರಿಯೇ ಕಾರಣ ಎಂದು ಆರೋಪಿಸಲಾಗಿತ್ತು.

Charge sheet against 20 BBMP officials who involved in encroachment

ಅಧಿಕಾರಿಗಳು ನಿಯಮಬಾಹಿರವಾಗಿ ನಕ್ಷೆ ಮಂಜೂರು ಮಾಡಿ ರಾಜಕಾಲುವೆಗಳ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡಲು ಅನುವು ಮಾಡಿಕೊಟ್ಟಿರುವುದು ಸಾಬೀತಾಗಿತ್ತು. ಆ ಸಂದರ್ಭದಲ್ಲಿ ಕೆಲವು ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ನಂತರ ಹೈಕೋರ್ಟ್ ನಿರ್ದೇಶನದ ಮೇರೆಗೆ ಆದೇಶವನ್ನು ಕೈಬಿಡಲಾಗಿತ್ತು. ಇದೀಗ ನಗರಾಭಿವೃದ್ಧಿ ಇಲಾಖೆ 20 ಅಧಿಕಾರಿಗಳ ವಿರುದ್ಧ ದೋಷಾರೋಪ ಪಟ್ಟಿ ಸಿದ್ಧಪಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+