• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪಾದರಾಯನಪುರ ಗಲಭೆ ಪ್ರಕರಣ: 137 ಆರೋಪಿಗಳ ವಿರುದ್ದ ಚಾರ್ಜ್ ಶೀಟ್

|

ಬೆಂಗಳೂರು, ಮೇ 18: ಪಾದರಾಯನಪುರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 137 ಆರೋಪಿಗಳ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಕಮೀಷನರ್ ಭಾಸ್ಕರ್ ರಾವ್ ಸೂಚನೆ ನಂತರ ಎರಡು ದಿನದಲ್ಲಿ ಪ್ರಕರಣ ಸಂಬಂಧ ನ್ಯಾಯಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗಲಿದೆ ಎಂಬ ಮಾಹಿತಿ ಹೊರಬಿದ್ದಿದೆ.

ಎಸಿಪಿ ಧರ್ಮೆಂದ್ರ ಹಾಗು ಇನ್ಸ್ ಪೆಕ್ಟರ್ ಶಿವಾಜಿರಾವ್ ನೇತೃತ್ವದಲ್ಲಿ ತನಿಖೆ ನಡೆದಿತ್ತು. ತನಿಖೆ ಸಂಪೂರ್ಣ ಮಾಡಿರುವ ಪೊಲೀಸ್ ಅಧಿಕಾರಿಗಳು ಒಂದು ಸಾವಿರ ಪುಟಗಳ ಚಾರ್ಜ್ ಶೀಟ್ ಸಿದ್ಧ ಮಾಡಿದ್ದು, 3ನೇ ಎಸಿಎಂಎಂ ಕೋರ್ಟ್‌ನಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದಾರೆ.

ಪಾದರಾಯನಪುರ ಗಲಭೆ; ಸರ್ಕಾರಕ್ಕೆ ಹಲವು ಪ್ರಶ್ನೆ ಕೇಳಿದ ಹೈಕೋರ್ಟ್

ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದ್ದ ಈ ಪ್ರಕರಣದಲ್ಲಿ ಇರ್ಫಾನ್ ಮೊದಲನೇ ಆರೋಪಿ, ಇರ್ಫಾನ್ ಜೋತೆ ಸೇರಿ ಗಲಾಟೆ ಮಾಡಿದ್ದ 137 ಮಂದಿ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಆರೋಪಿಗಳ ವಿರುದ್ದ 307, NDMA ಆಕ್ಟ್ ಅಡಿ ಜಾರ್ಜ್ ಶೀಟ್ ಸಲ್ಲಿಕೆ ಮಾಡಲಾಗುತ್ತಿದೆ.

ಕೊರೊನಾ ವೈರಸ್ ಶಂಕಿತರನ್ನು ಕ್ವಾರಂಟೈನ್‌ ಮಾಡಲು ಪಾದರಾಯನಪುರಕ್ಕೆ ತೆರಳಿದ್ದ ಸಮಯದಲ್ಲಿ ಆಶಾ ಕಾರ್ಯಕರ್ತರು ಹಾಗು ಪೊಲೀಸರ ಮೇಲೆ ಹಲ್ಲೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ 137 ಜನರನ್ನು ಪೊಲೀಸರು ಬಂಧಿಸಿದ್ದರು.

ಬಳಿಕ ರಾಮನಗರ ಜಿಲ್ಲೆಯ ಜಿಲ್ಲಾ ಕಾರಗೃಹಕ್ಕೆ ಈ ಆರೋಪಿಗಳನ್ನು ಸ್ಥಳಾಂತರಿಸಲಾಗಿತ್ತು. ಜೈಲಿನಲ್ಲಿ ಕೊರೊನಾ ಭೀತಿ ಹೆಚ್ಚಾದ ಹಿನ್ನೆಲೆ ನಂತರ ಪಾದರಾಯನಪುರ ಆರೋಪಿಗಳನ್ನು ಬೆಂಗಳೂರಿನ ಹಜ್ ಭವನಕ್ಕೆ ಕರೆತರಲಾಗಿತ್ತು.

English summary
Charge sheet filed against 137 accused in the Padarayanapura riot case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X