Chennamma: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
Chennamma: ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಬುಧವಾರ (ಜುಲೈ 15) ರಾತ್ರಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣವೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ ಎನ್ನುವ ಮಾಹಿತಿ ಲಭ್ಯವಾಗಿದೆ.
ಬುಧವಾರ ತಡರಾತ್ರಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಆಸ್ಪತ್ರೆಗೆ ಭೇಟಿ ನೀಡಿ ತಾಯಿಯ ಆರೋಗ್ಯ ವಿಚಾರಿಸಿದ್ದಾರೆ. ಚೆನ್ನಮ್ಮ ಅವರಿಗೆ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿದ್ದು, ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ ಎಂದು ತಿಳಿದುಬಂದಿದೆ.

ಎಚ್.ಡಿ.ದೇವೇಗೌಡರ ಪತ್ನಿ ಆಸ್ಪತ್ರೆಗೆ ದಾಖಲು
ಬುಧವಾರ ರಾತ್ರಿ 10 ಗಂಟೆ ವೇಳೆಗೆ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ವಯೋಸಹಜ ಕಾಯಿಲೆ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ರಾತ್ರಿ ಇದ್ದಕ್ಕಿಂದ್ದತೆ ಉಸಿರಾಟದ ಸಮಸ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಹೆಚ್‌ಎಎಲ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಚೆನ್ನಮ್ಮ ಅವರ ಆರೋಗ್ಯ ಪರಿಕ್ಷಿಸಿದ ವೈದ್ಯರು ಮುಂದಿನ ಎರಡು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಸೂಚನೆ ನೀಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ವೈದ್ಯರ ಅವರನ್ನು ನಿಗಾದಲ್ಲಿ ಇರಿಸಿದ್ದಾರೆ. ಎರಡು ದಿನಗಳ ಬಳಿಕ ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.


Click it and Unblock the Notifications
