BBMP Voters List: ಚಿಕ್ಕಪೇಟೆ, ಶಿವಾಜಿನಗರ, ಮಹದೇಪುವರದ ಅಂತಿಮ ಮತದಾರರ ಪಟ್ಟಿ ವಿವರ ತಿಳಿಯಿರಿ
ಬೆಂಗಳೂರು, ಜನವರಿ 15: ಬಿಬಿಎಂಪಿ ವ್ಯಾಪ್ತಿಯ 3 ವಿಧಾನಸಭಾ ಕ್ಷೇತ್ರಗಳಾದ ಶಿವಾಜಿನಗರ, ಚಿಕ್ಕಪೇಟೆ ಹಾಗೂ ಮಹದೇವಪುರಕ್ಕೆ ಸಂಬಂಧಿಸಿದಂ ಮತದಾರರ ಅಂತಿಮ ಪಟ್ಟಿ ಭಾನುವಾರ ಪ್ರಕಟಿಸಲಾಗಿದೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.
ಬಿಬಿಎಂಪಿ ವ್ಯಾಪ್ತಿಯ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 9,80,542 ಮತದಾರರು ಇದ್ದಾರೆ. ಈ ಹಿಂದೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ 2023ರ ಅಂತಿಮ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ 25 ವಿಧಾನ ಸಭಾ ಕ್ಷೇತ್ರಗಳ ಪಟ್ಟಿ ಜನವರಿ 05 ರಂದು ಪ್ರಕಟಿಸಲಾಗಿತ್ತು. ಇದೀದ ಬಾಕಿ ಉಳಿದಿದ್ದ 3 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಬಿಡುಗಡೆ ಮಾಡಲಾಗಿದೆ ಎಂದರು.
ಶಿವಾಜಿನಗರ, ಚಿಕ್ಕಪೇಟೆ ಹಾಗೂ ಮಹದೇವಪುರದಲ್ಲಿ ಒಟ್ಟು 9,90,542 ಮತದಾರರಿದ್ದಾರೆ. ಅದರಲ್ಲಿ 5,15,983 ಪುರುಷರು, 4,64,415 ಮಹಿಳೆಯರು ಹಾಗೂ 144 ಇತರೆ (ತೃತೀಯ ಲಿಂಗಿಗಳು) ಮತದಾರರು ಇದ್ದಾರೆ. ಅಂತಿಮ ಮತದಾರರ ಪಟ್ಟಿಯನ್ನು ಸಂಬಂಧಪಟ್ಟ ಮತದಾರರ ನೋಂದಣಾಧಿಕಾರಿಗಳ ಕಛೇರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಛೇರಿ ಹಾಗೂ ವಾರ್ಡ್ ಕಛೇರಿಗಳಲ್ಲಿ ಪ್ರಕಟಿಸಲಾಗಿದೆ.

ಸಾರ್ವಜನಿಕರು ಕೇಂದ್ರ ಚುನಾವಣೇ ಆಯೋಗದ ಅಧಿಕೃತ ವೆಬ್‌ಸೈಟ್ http://www.ceokarnataka.kar.nic.in ಮತ್ತು ಬಿಬಿಎಂಪಿ ವೆಬ್‌ಸೈಟ್ www.bbmp.gov.in ನಲ್ಲಿ ಪ್ರಚುರ ಪಡಿಸಲಾಗುವುದು. ಮತದಾರರು ತಮ್ಮ ಮತದಾರರ ಮಾಹಿತಿಯನ್ನು ಪರಿಶೀಲಿಸಿಕೊಂಡು ಖಾತರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಮತದಾರರ ಪಟ್ಟಿಯ ನಿರಂತರ ಪರಿಷ್ಕರಣೆಯಲ್ಲಿ, ಸೇರ್ಪಡೆ ತಿದ್ದುಪಡಿ, ಸ್ಥಳಾಂತರ ಹಾಗೂ ಮತದಾರರ ಪಟ್ಟಿಯಿಂದ ತೆಗೆದುಹಾಕುವಿಕೆ ಪ್ರಕ್ರಿಯೆ ಜಾರಿಯಲ್ಲಿರುತ್ತದೆ. ಈ ಪೈಕಿ ಮೊಬೈಲ್ ತಂತ್ರಾಂಶವಾದ Voter Helpline App, NVSP ಪೋರ್ಟಲ್ (www.nvsp.in) ಮೂಲಕ ವೋಟರ್ ಪೋರ್ಟಲ್ (www.voterportal.eci.gov.in) ಮುಖೇನ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸಾರ್ವಜನಿಕರು ಮತ್ತು ಮತದಾರರು ಇದನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಮತಗಟ್ಟೆಗಳ ಪರಿಶೀಲನೆ ಪ್ರಾರಂಭ
ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆಗಳ ಪರಿಶೀಲನೆಯನ್ನು ಸಹಾಯಕ ಮತದಾನ ನೋಂದಣಾಧಿಕಾರಿಗಳು ನಾಳೆಯಿಂದ ಪ್ರಾರಂಭಿಸಲಿದ್ದಾರೆ ಎಂದು ಮುಖ್ಯ ಆಯುಕ್ತರು ತಿಳಿಸಿದರು.
ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಉಜ್ವಲ್ ಕುಮಾರ್ ಗೋಷ್, ಅಪರ ಜಿಲ್ಲಾ ಚುನಾವಣಾ ಅಧಿಕಾರಿಗಳಾದ ದಯಾನಂದ್ (ಬೆಂಗಳೂರು ನಗರ), ಚುನಾವಣಾ ವಿಭಾಗದ ಸಹಾಯಕ ಆಯುಕ್ತ ಉಮೇಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications