ಪೊಲೀಸ್ ಸಬಲೀಕರಣಗೊಳಿಸುವ ನಾಲ್ಕು ಯೋಜನೆಗಳಿಗೆ ಸಿಎಂ ಚಾಲನೆ

ಬೆಂಗಳೂರು, ಜು. 13: ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಹಾಗೂ ಪಿಯುಸಿ ಪರೀಕ್ಷೆಯ್ಲಿ ಅತಿ ಹೆಚ್ಚು ಅಂಕ ಗಳಿಸುವ ಪೊಲೀಸ್ ಸಿಬ್ಬಂದಿಯ ಮಕ್ಕಳಿಗೆ ಎರಡು ಸಾವಿರ ರೂ. ಪರಿಹಾರ ಧನ ನೀಡಲಾಗುವುದು! ಹೌದು. ಐಸಿಎಸ್ಇ, ಸಿಬಿಎಸ್ಇ ಪರೀಕ್ಷೆಯಲ್ಲಿ ಶೇ. 90 ರಷ್ಟು ಅಂಕ ಗಳಿಸಿದರೆ 5000 ರೂ. ಪ್ರೋತ್ಸಾಹ ಧನ ಪೊಲೀಸ್ ಇಲಾಖೆಯಿಂದ ಸಿಗಲಿದೆ.

ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯನ್ನು ಸಬಲೀಕರಣ ಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಂಗಳವಾರ ನಾಲ್ಕು ಮಹತ್ವಾಕಾಂಕ್ಷಿ ಹೊಸ ಯೋಜನೆಗಳನ್ನು ಜಾರಿಗೊಳಿಸಿದೆ. ವಿದ್ಯಾನಿಧಿ, ಪೊಲೀಸ್ ಕುಟುಂಬಗಳಿಗೆ ರೋಗ್ಯ ವಿಮೆ ಸೇರಿದಂತೆ ನಾಲ್ಕು ಯೋಜನೆಗಳೀಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದರು. ವಿಧಾನಸೌಧ ಎದುರಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಿದರು. ಅದರಲ್ಲಿ ಪೊಲೀಸ್ ಸಿಬ್ಬಂದಿಯ ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆರ್ಥಿಕ ನೆರವು ನೀಡುವ 'ವಿದ್ಯಾನಿಧಿ' ಯೋಜನೆಯನ್ನು ಘೋಷಣೆ ಮಾಡಲಾಗಿದೆ. ಪೊಲೀಸ್ ಇಲಾಖೆಯ ಬೆನವಲೆಂಟ್ ಫಂಡ್ ನಿಂದಲೇ ಈ ವಿದ್ಯಾನಿಧಿ ಆರ್ಥಿಕ ನೆರವು ನೀಡಲಾಗುವುದು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ.

Chief Minister B.S. Yediyurappa launched Four police empowerment schemes in The State

ಸಿಬ್ಬಂದಿಗೆ ಸಂತಸದ ಸುದ್ದಿ: ಪೊಲೀಸ್ ಸಿಬ್ಬಂದಿಯ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು ನೀಡುವ 'ವಿದ್ಯಾನಿಧಿ' ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ ಚಾಲನೆ ನೀಡಿದ್ದಾರೆ. ಪದವಿ ಹಾಗೂ ಸ್ನಾತಕೋತ್ತರ ಪದವಿ, ಡಿಪ್ಲೋಮಾ, ವೃತ್ತಿಪರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುವ ಪೊಲೀಸ್ ಸಿಬ್ಬಂದಿಯ ಮಕ್ಕಳಿಗೆ ವಿಶೇಷ ಆರ್ಥಿಕ ನೆರವು ನೀಡುವ ಯೋಜನೆಗೆ ಕೊನೆಗೂ ಹಸಿರು ನಿಶಾನೆ ಸಿಕ್ಕಿತು.

Chief Minister B.S. Yediyurappa launched Four police empowerment schemes in The State

ಪೊಲೀಸರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಬೆಂಗಳೂರು ಸೇರಿದಂತೆ ಹಲವಡೆ ಪೊಲೀಸ್ ಶಾಲೆಗಳನ್ನು ತೆರೆಯಲಾಗಿದೆ. ಇದೀಗ ಪೊಲೀಸರ ಮಕ್ಕಳಿಗೆ ಆರ್ಥಿಕ ನೆರವು ನೀಡುವ ಮೂಲಕ ಉತ್ಸುಕತೆ ತುಂಬಲು ವಿದ್ಯಾನಿಧಿ ಯೋಜನೆ ಜಾರಿಗೆ ತರಲಾಗಿದೆ. ಎಸ್ಎಸ್ಎಲ್‌ಸಿ ಹಾಗೂ ಪಿಯುಸಿಯಿಂದ ಹಿಡಿದು ವೃತ್ತಿಪರ ಕೋರ್ಸ್ ಗಳಿಗೆ ಸೇರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಸೌಲಭ್ಯ ದೊರೆಯಲಿದೆ.

Recommended Video

      ಪಾಕಿಸ್ತಾನ ಪರ ಬ್ಯಾಟಿಂಗ್ ಮಾಡ್ತಿರೋ ವಿರಾಟ್ ಕೊಹ್ಲಿಯನ್ನು ನೀವೂ ನೋಡಿ. | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+