ಸಂಗೀತ ನಿರ್ದೇಶಕ ರಾಜನ್ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ

ಬೆಂಗಳೂರು, ಅ. 12: ಹೆಸರಾಂತ ಹಿರಿಯ ಸಂಗೀತ ನಿರ್ದೇಶಕ ರಾಜನ್ ಅವರ ನಿಧನ ತೀವ್ರ ಶೋಕವನ್ನುಂಟು ಮಾಡಿದೆ ಎಂದು ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ತಮ್ಮ ಸಹೋದರ ನಾಗೇಂದ್ರಪ್ಪ ಅವರೊಂದಿಗೆ 'ರಾಜನ್‌-ನಾಗೇಂದ್ರ' ಹೆಸರಿನಲ್ಲಿ ಜಂಟಿಯಾಗಿ ಅನೇಕ ಜನಪ್ರಿಯ, ಯಶಸ್ವಿ ಕನ್ನಡ ಚಿತ್ರಗಳಿಗೆ ಸಂಗೀತ ನೀಡಿದ್ದ ರಾಜನ್ ಅವರ ನಿಧನದಿಂದ ಕನ್ನಡ ಚಿತ್ರರಂಗ ಪ್ರತಿಭಾವಂತ ಸಂಗೀತ ನಿರ್ದೇಶಕರೊಬ್ಬರನ್ನು ಕಳೆದುಕೊಂಡಿದೆ.

Chief Minister B.S. Yediyurappa Condoles Music Director Rajans Death

ಚಿತ್ರರಸಿಕರು ಎಂದಿಗೂ ಮರೆಯಲಾರದ ತಮ್ಮ ನೂರಾರು ಸುಮಧುರ ಗೀತೆಗಳ ಮೂಲಕ ರಾಜನ್ ಅವರು ಸದಾ ನೆನಪಿನಲ್ಲಿರುತ್ತಾರೆ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದವರಿಗೆ ಮತ್ತು ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+