ಗುಡ್ ನ್ಯೂಸ್: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುಣಮುಖ, ಸಿದ್ದರಾಮಯ್ಯಗೆ ನಾಳೆ ಪರೀಕ್ಷೆ

ಕೊರೊನಾ ವೈರಸ್ ಸೋಂಕು ದೃಢವಾಗಿದ್ದರಿಂದ ಆಗಸ್ಟ್ 3ರಂದು ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊರೊನಾ ವೈರಸ್‌ನಿಂದ ಮುಕ್ತರಾಗಿದ್ದಾರೆ. ಸೋಮವಾರದ ಪರೀಕ್ಷೆಯಲ್ಲಿ ಅವರಲ್ಲಿ ಕೊರೊನಾ ವೈರಸ್ ನೆಗೆಟಿವ್ ಕಂಡುಬಂದಿದೆ. ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.

Recommended Video

      BSY Discharged : ಒಂದೇ ವಾರದಲ್ಲಿ ಆಸ್ಪತ್ರೆಯಿಂದ ಹೊರಬಂದ ಯಡಿಯೂರಪ್ಪ | Oneindia Kannada

      ಇನ್ನೊಂದೆಡೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕೊರೊನಾ ವೈರಸ್ ಚಿಕಿತ್ಸೆಗೆ ಒಳಗಾಗಿದ್ದು, ಅವರು ಆಸ್ಪತ್ರೆ ವಾಸ ಮುಂದುವರಿಸಬೇಕೇ ಅಥವಾ ಮನೆಗೆ ಮರಳಬಹುದೇ ಎನ್ನುವುದು ಮಂಗಳವಾರ ಗೊತ್ತಾಗಲಿದೆ.

      ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಸೋಂಕಿನ ಯಾವ ಲಕ್ಷಣಗಳು ಇಲ್ಲದೆ ಹೋದರೂ ಪಾಸಿಟಿವ್ ಇರುವುದು ಕಂಡುಬಂದಿತ್ತು. ಹೀಗಾಗಿ ಮಣಿಪಾಲ್ ಆಸ್ಪತ್ರೆಗೆ ಆಗಸ್ಟ್ 3ರಂದು ದಾಖಲಾಗಿದ್ದರು. ಸೋಮವಾರ ಬೆಳಿಗ್ಗೆ ಬಂದಿರುವ ವರದಿಯಲ್ಲಿ ನೆಗೆಟಿವ್ ಬಂದಿರುವ ಕಾರಣ ಅವರು 10ನೇ ದಿನಕ್ಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಮುಂದೆ ಓದಿ...

      ಯಡಿಯೂರಪ್ಪ ಫುಲ್ ಫಿಟ್

      ಯಡಿಯೂರಪ್ಪ ಫುಲ್ ಫಿಟ್

      ಯಡಿಯೂರಪ್ಪ ಅವರು ಕೊರೊನಾ ವೈರಸ್ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ, ಎಲ್ಲವೂ ಕ್ಲಿಯರ್ ಆಗಿದೆ ಎಂದು ವೈದ್ಯರು ಯಡಿಯೂರಪ್ಪ ಮತ್ತು ಅವರ ಮಗಳು ಪದ್ಮಾ ಅವರಿಗೆ ಮಾಹಿತಿ ನೀಡಿದ್ದಾರೆ.

      ಸಿದ್ದರಾಮಯ್ಯಗೆ ನಾಳೆ ಪರೀಕ್ಷೆ

      ಸಿದ್ದರಾಮಯ್ಯಗೆ ನಾಳೆ ಪರೀಕ್ಷೆ

      ಮಣಿಪಾಲ್ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಗಳವಾರ ಬೆಳಿಗ್ಗೆ ಕೊರೊನಾ ವೈರಸ್ ಪರೀಕ್ಷೆ ನಡೆಸಲಾಗುತ್ತದೆ. ಅವರಲ್ಲಿಯೂ ನೆಗೆಟಿವ್ ಕಂಡುಬಂದರೆ ಬುಧವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತದೆ.

      ಆರೋಗ್ಯವಾಗಿರುವ ಸಿದ್ದರಾಮಯ್ಯ

      ಆರೋಗ್ಯವಾಗಿರುವ ಸಿದ್ದರಾಮಯ್ಯ

      ಯಡಿಯೂರಪ್ಪ ಅವರಂತೆಯೇ ಸಿದ್ದರಾಮಯ್ಯ ಅವರ ಆರೋಗ್ಯ ಕೂಡ ಚೆನ್ನಾಗಿದೆ. ಅವರಲ್ಲಿ ಯಾವುದೇ ರೋಗದ ಲಕ್ಷಣಗಳು ಕಂಡುಬಂದಿಲ್ಲ. ಆದರೂ ಅವರ ಆರೋಗ್ಯದ ಮೇಲೆ ವೈದ್ಯರ ತಂಡ ತೀವ್ರ ನಿಗಾ ಇರಿಸಿದೆ. ಕಳೆದ ಸೋಮವಾರದಿಂದ ಅವರು ಆಸ್ಪತ್ರೆಯಲ್ಲಿದ್ದಾರೆ. ನಾಳಿನ ವರದಿಯಲ್ಲಿ ನೆಗೆಟಿವ್ ಬಂದರೆ ಅವರು ಸಹ ಮನೆಗೆ ಮರಳಲಿದ್ದಾರೆ.

      ಆಸ್ಪತ್ರೆಯಿಂದಲೇ ಕಾರ್ಯ

      ಆಸ್ಪತ್ರೆಯಿಂದಲೇ ಕಾರ್ಯ

      ಯಡಿಯೂರಪ್ಪ ಅವರು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೆಲವು ದಿನಗಳ ಹಿಂದೆ ವರದಿಯಾಗಿತ್ತು. ಆದರೆ ಬಳಿಕ ಅದು ಸುಳ್ಳು ಸುದ್ದಿ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿತ್ತು. ರೋಗ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದ ಯಡಿಯೂರಪ್ಪ, ಆಸ್ಪತ್ರೆಯಿಂದಲೇ ಸರ್ಕಾರದ ಕೆಲಸಗಳನ್ನು ನಿಭಾಯಿಸಿದ್ದರು. ವಿಶ್ರಾಂತಿ, ಓದಿನಲ್ಲಿ ತೊಡಗಿಸಿಕೊಂಡಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+