ಜಯದೇವ ಆಸ್ಪತ್ರೆಗೆ ತೆರಳಿ ಎಚ್‌ ವಿಶ್ವನಾಥ್ ಆರೋಗ್ಯ ವಿಚಾರಿಸಿದ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಮಾ.19: ಲಘು ಹೃದಯಾಘಾತಕ್ಕೆ ಒಳಗಾಗಿ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್‌ ವಿಶ್ವನಾಥ್ ಅವರನ್ನು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇಂದು ಭೇಟಿ ಮಾಡಿದರು.

ಆಸ್ಪತ್ರೆಯಲ್ಲಿ ವಿಶ್ವನಾಥ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಕುಮಾರಸ್ವಾಮಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್ ಅವರಿಂದಲೂ ವಿಶ್ವನಾಥ್ ಆರೋಗ್ಯದ ಬಗ್ಗೆ ಮುಖ್ಯಮಂತ್ರಿ ಮಾಹಿತಿ ಪಡೆದರು.

ಸೋಮವಾರ ಸಂಜೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕೂಡ ಜಯದೇವ ಆಸ್ಪತ್ರೆಗೆ ಭೇಟಿ ನೀಡಿ ವಿಶ್ವನಾಥ್ ಅವರ ಆರೋಗ್ಯ ವಿಚಾರಿಸಿದ್ದರು.

Chief minister HD Kumaraswamy meets JDS president H Vishwanath

ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೈದರಾಬಾದ್‌ಗೆ ತೆರಳಿದ್ದ ಸಂದರ್ಭದಲ್ಲಿ ವಿಶ್ವನಾಥ್ ಅವರು ಲಘು ಹೃದಯಾಘಾತಕ್ಕೆ ಒಳಗಾಗಿದ್ದು, ಶನಿವಾರ ಸಂಜೆ ಬೆಂಗಳೂರಿಗೆ ಮರಳಿದ್ದರು. ಬೆಂಗಳೂರಿಗೆ ಆಗಮಿಸಿದ ನಂತರ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ವರ್ಷ ಅವರು ಮೂತ್ರಪಿಂಡದಲ್ಲಿ ಕಲ್ಲಿನ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದರು. ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿದ್ದ ಅವರು ಸುದೀರ್ಘ ಕಾಲ ಚಿಕಿತ್ಸೆ ಹಾಗೂ ವಿಶ್ರಾಂತಿ ಪಡೆದುಕೊಂಡಿದ್ದರು. ಆಸ್ಪತ್ರೆಯಿಂದ ಬಿಡುಗಡೆಗೊಂಡು ಚೇತರಿಸಿಕೊಂಡ ಬಳಿಕ ಅವರು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕವಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+