ಸಿಎಂ ಕುಮಾರಸ್ವಾಮಿ ಇಂದಿನಿಂದ ವಾರಗಳ ಕಾಲ ಅಮೆರಿಕ ಪ್ರವಾಸ
Recommended Video
ಬೆಂಗಳೂರು, ಜೂನ್ 28: ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇಂದಿನಿಂದ ಒಂದು ವಾರಗಳ ಕಾಲ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ.
ಜುಲೈ 4,5,6 ರಂದು ಅಮೆರಿಕದಲ್ಲಿ ಒಕ್ಕಲಿಗ ಪರಿಷತ್ ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಅಮೆರಿಕ ಪ್ರವಾಸಕ್ಕೆ ತೆರಳಲಿದ್ದಾರೆ.ಶುಕ್ರವಾರ ಸಂಜೆ ಅಮೆರಿಕಕ್ಕೆ ತೆರಳಲಿದ್ದು ಜುಲೈ 8ರಂದು ಬೆಂಗಳೂರಿಗೆ ವಾಪಸಾಗಲಿದ್ದಾರೆ.
ಅಮೆರಿಕ ಪ್ರವಾಸ ಕೈಗೊಳ್ಳಲಿರುವ ಕುಮಾರಸ್ವಾಮಿ ಅವರಿಗೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಜೊತೆಯಾಗಲಿದ್ದಾರೆ. ಒಂದು ವಾರಗಳ ಕಾಲ ಪ್ರವಾಸ ಕೈಗೊಳ್ಳಲಿರುವ ಮುಖ್ಯಮಂತ್ರಿ ಜೊತೆ ಕೆಲವು ಅಧಿಕಾರಿಗಳು ಕೂಡ ಅವರೊಟ್ಟಿಗೆ ತೆರಳಲಿದ್ದಾರೆ. ದೇವೇಗೌಡರು ಎರಡು ದಿನಗಳ ಮಟ್ಟಿಗೆ ಅಮೆರಿಕದಲ್ಲಿದ್ದು, ಬಳಿಕ ರಾಜಧಾನಿಗೆ ಹಿಂದಿರುಗಲಿದ್ದಾರೆ.

ಅಮೆರಿಕದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವಂತೆ ಕುಮಾರಸ್ವಾಮಿ, ದೇವೇಗೌಡರು. ಸಚಿವ ಡಿ ಕೆ ಶಿವಕುಮಾರ್ ಸೇರಿದಂತೆ ಒಕ್ಕಲಿಗ ಸಚಿವರು, ಶಾಸಕರಿಗೆ ಆಹ್ವಾನ ನೀಡಲಾಗಿದೆ.
ಅಮೆರಿಕಾಗೆ ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದ ಶ್ರೀಗಳು, ಸ್ಪಟಿಕಪುರಿ ಮಹಾಸಂಸ್ಥಾನದ ನಂಜಾವಧೂತ ಶ್ರೀಗಳು ಸೇರಿದಂತೆ ಅನೇಕ ಮಠಾಧೀಶರು ಕಾರ್ಯಕ್ರಮಕ್ಕೆ ತೆರಳಲಿದ್ದಾರೆ ಎನ್ನಲಾಗಿದೆ.
ಇಂದು ಸಚಿವ ಸಂಪುಟ ಸಭೆ ಕೂಡ ಇದ್ದು, ಪ್ರಮುಖವಾಗಿ ಜಿಂದಾಲ್, ಐಎಂಎ ಹಗರಣ, ಲಿಂಗನಮಕ್ಕಿಯಿಂದ ಬೆಂಗಳೂರಿಗೆ ಶರಾವತಿ ನೀರು ತರುವುದು, ವಾಲ್ಮೀಕಿ ಸಮುದಾಯ ಸಮುದಾಯದ ಮೀಸಲಾತಿ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಮಧ್ಯಾಹ್ನ 12.30ಕ್ಕೆ ಸಚಿವ ಸಂಪುಟ ಸಭೆ ನಡೆಯಲಿದೆ.












Click it and Unblock the Notifications