ಸಿದ್ದರಾಮಯ್ಯ ಬೆಂಗಳೂರು ರೌಂಡ್ಸ್, ಗುಂಡಿ ಮುಚ್ಚಲು 15 ದಿನದ ಗಡುವು
ಬೆಂಗಳೂರು, ಅಕ್ಟೋಬರ್ 09 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರ ಪ್ರದಕ್ಷಿಣೆ ಆರಂಭಿಸಿದ್ದಾರೆ. ಮಳೆಯಿಂದ ಹಾನಿಗೊಳಗಾದ ರಸ್ತೆಗಳಲ್ಲಿನ ಗುಂಡಿ ಮುಚ್ಚಲು ಅವರು ಬಿಬಿಎಂಪಿ ಅಧಿಕಾರಿಗಳಿಗೆ 15 ದಿನದ ಗಡುವು ನೀಡಿದ್ದಾರೆ.
ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಬಿಬಿಎಂಪಿ ಮೇಯರ್ ಸಂಪತ್ ರಾಜ್ ಬೆಂಗಳೂರು ನಗರ ಪ್ರದಕ್ಷಿಣೆ ಕೈಗೊಂಡಿದ್ದಾರೆ. ವಿವಿಧ ಇಲಾಖೆಗಳ ಅಧಿಕಾರಿಗಳು ಸಿದ್ದರಾಮಯ್ಯ ಜೊತೆಗಿದ್ದಾರೆ.
ಬೆಂಗಳೂರಿನಲ್ಲಿ ಇತ್ತೀಚೆಗೆ ಭಾರಿ ಮಳೆ ಸುರಿದ ಪರಿಣಾಮ ರಸ್ತೆಗಳು ಹಾಳಾಗಿ ಗುಂಡಿಗಳಿಂದ ವಾಹನ ಸವಾರರು ಮೃತಪಟ್ಟಿರುವುದು ದುರ್ದೈವದ ಸಂಗತಿ :@siddaramaiah
— CM of Karnataka (@CMofKarnataka) October 9, 2017

* ಸಿದ್ದರಾಮಯ್ಯ ಅವರು ನಾಯಂಡಹಳ್ಳಿ ಜಂಕ್ಷನ್‌ಗೆ ಭೇಟಿ ನೀಡಿ ಮಳೆ ಬಂದಾಗ ರಸ್ತೆ ತುಂಬಾ ನೀರು ತುಂಬಿಕೊಳ್ಳುವ ಸ್ಥಳಗಳನ್ನು ಪರಿಶೀಲಿಸಿದರು. ನಾಯಂಡಹಳ್ಳಿ ಬಳಿಯ ಪಂತರಪಾಳ್ಯದಲ್ಲಿ ರಸ್ತೆ ಗುಂಡಿಯಿಂದ ಆದ ಅಪಘಾತದಲ್ಲಿ ಭಾನುವಾರ ಮಹಿಳೆ ಮೃತಪಟ್ಟಿದ್ದಳು. ಮಹಿಳೆ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ 5 ಲಕ್ಷ ರೂ. ಪರಿಹಾರವನ್ನು ಮೇಯರ್ ಘೋಷಣೆ ಮಾಡಿದ್ದಾರೆ.
* ಸಿದ್ದರಾಮಯ್ಯ ಅವರು ಬಾಲಗಂಗಾಧರನಾಥ ಸ್ವಾಮೀಜಿ ಮೇಲ್ಸೇತುವೆ ಮೇಲಿನ ಗುಂಡಿಗಳನ್ನು ಪರಿಶೀಲಿಸಿದರು. ಕಳೆದ ವಾರ ಈ ಗುಂಡಿಯಿಂದಾಗಿ ಸ್ಕೂಟರ್‌ನಲ್ಲಿ ಸಾಗುತ್ತಿದ್ದ ದಂಪತಿ ರಸ್ತೆಗೆ ಬಿದ್ದಿದ್ದರು. ಅವರಿಗೆ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿದ್ದರು.
ಬೆಂಗಳೂರಿನ ನಾಯಂಡಹಳ್ಳಿ ಸಮೀಪ ರಸ್ತೆಗುಂಡಿಯಿಂದಾಗಿ ಇತ್ತೀಚೆಗೆ ವಾಹನಸವಾರರು ಮೃತಪಟ್ಟ ಸ್ಥಳಕ್ಕೆ ಮುಖ್ಯಮಂತ್ರಿಯವರು ಭೇಟಿ ನೀಡಿ ಪರಿಶೀಲಿಸಿದರು. pic.twitter.com/2Sgxt7FvcW
— CM of Karnataka (@CMofKarnataka) October 9, 2017












Click it and Unblock the Notifications