ಜು.26 ರಂದು ಸಿಎಂ ಸಿದ್ದರಾಮಯ್ಯ ಮಂಡೂರಿಗೆ ಭೇಟಿ
ಬೆಂಗಳೂರು,ಜು.9: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಂಡೂರು ಭೇಟಿಗೆ ದಿನ ನಿಶ್ಚಯವಾಗಿದೆ. ಮಂಡೂರು ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜು.26ರಂದು ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಂಗಳವಾರ ಡಂಪಿಂಗ್ ಯಾರ್ಡ್ ಸಮಸ್ಯೆ ಬಗ್ಗೆ ಮಂಡೂರು ಗ್ರಾಮಸ್ಥರ ಅಹವಾಲು ಸ್ವೀಕರಿಸಿ ಮಾತನಾಡಿ, ಡಂಪಿಂಗ್ ಯಾರ್ಡ್‌ಗೆ ಗುಣಮಟ್ಟದ ರಾಸಾಯನಿಕ ಸಿಂಪಡಿಸಲು ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತ ಲಕ್ಷ್ಮೀನಾರಾಯಣ್ ಅವರಿಗೆ ಸೂಚಿಸಿದರು. ಈಗ ಟ್ಯಾಂಕರ್ ಮೂಲಕ ಕಾವೇರಿ ನೀರು ಪೊರೈಕೆ ಮಾಡುತ್ತಿದ್ದು ಮುಂದಿನ ದಿನಗಳಲ್ಲಿ ಗ್ರಾಮಕ್ಕೆ ಪೈಪ್‌ಲೈನ್ ಸಂಪರ್ಕ ನೀಡುವುದಾಗಿ ಭರವಸೆ ನೀಡಿದರು.

ಒಂದು ತಿಂಗಳ ಹಿಂದೆ ಮಂಡೂರು ಗ್ರಾಮಸ್ಥರ ಜೊತೆ ನಡೆದ ಸಂಧಾನ ಸಭೆಯಲ್ಲಿ ಮುಖ್ಯಮಂತ್ರಿಗಳು ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸುವುದಾಗಿ ಭರವಸೆ ನೀಡಿದ್ದರು.











Click it and Unblock the Notifications