• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಿವಿಧ ಬೇಡಿಕೆ ಈಡೇರಿಸುವಂತೆ ಸರ್ಕಾರಿ ದಿನಗೂಲಿ ನೌಕರರ ಮನವಿಗೆ ಸ್ಪಂದಿಸಿದ ಸಿಎಸ್ ರವಿಕುಮಾರ್

|

ಬೆಂಗಳೂರು, ಜನವರಿ 20: ಕರ್ನಾಟಕ ಸರ್ಕಾರಿ ದಿನಗೂಲಿ ನೌಕರರಿಗೆ ಪಿಂಚಣಿ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ದಿನಗೂಲಿ ಕ್ಷೇಮಾಭಿವೃದ್ಧಿ ನೌಕರರ ಸಂಘವು ಸರ್ಕಾರದ ಪ್ರಧಾನ ಕಾರ್ಯದರ್ಶಿ ಪಿ.ರವಿಕುಮಾರ್ ಅವರಲ್ಲಿ ವಿನಂತಿಸಿದ್ದಾರೆ.

ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ, ಸರ್ಕಾರಿ ದಿನಗೂಲಿ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಹನುಮಂತಪ್ಪ ಕೋಳಿ, ಪ್ರಧಾನ ಕಾರ್ಯದರ್ಶಿ ಶಿವಬಸಪ್ಪ ಸವದತ್ತಿ ಹಾಗೂ ಕಾರ್ಯಾಧ್ಯಕ್ಷ ಶೇಖ್ ಅಲಿ ಅವರ ನೇತೃತ್ವದಲ್ಲಿ ಪಿ.ರವಿಕುಮಾರ್ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.

ಇಂದಿರಾ ಕ್ಯಾಂಟೀನ್ ಕಡೆ ಗಮನಹರಿಸಿ ಸಿಎಂಗೆ ಸಿದ್ದರಾಮಯ್ಯ ಪತ್ರಇಂದಿರಾ ಕ್ಯಾಂಟೀನ್ ಕಡೆ ಗಮನಹರಿಸಿ ಸಿಎಂಗೆ ಸಿದ್ದರಾಮಯ್ಯ ಪತ್ರ

ಸುಮಾರು 30-35 ಹರ್ಷಗಳಿಂದ ಸರ್ಕಾರಿ ನೌಕರರ ಸಮನಾಗಿ ಅವರನ್ನು ಜವಾಬ್ದಾರಿಯಿಂದ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಡಿಮೆ ವೇತನ ಪಡೆದುಕೊಂಡು ಸೇವೆ ಸಲ್ಲಿಸುತ್ತಾ ಬಂದಿರುತ್ತೇವೆ, ದಿನಗೂಲಿ ನೌಕರರಿಗೆ ಸೇವಾ ಭದ್ರತೆಯ ನೀಡುವ ಸಲುವಾಗಿ "ಕರ್ನಾಟಕ ದಿನಗೂಲಿ ಕ್ಷೇಮಾಭಿವೃದ್ಧಿ ಅಧಿನಿಯಮ-2012 ಬಾರಿಗೆ ಮಾಡಿದ್ದು, ಅಂದು 13 ಸಾವಿರ ಇದ್ದ ನೌಕರರ ಸಂಖ್ಯೆ, ನಿವೃತ್ತಿ ಹಾಗೂ ಮರಣದಿಂದಾಗಿ ಈಗ ಸುಮಾರು 6 ರಿಂದ 7 ಸಾವಿರ ಮಾತ್ರ ಉಳಿದಿದೆ. ಅವರುಗಳು ಸಹ 3-4 ವರ್ಷಗಳಲ್ಲಿ ನಿವೃತ್ತಿ ಹೊಂದಲಿದ್ದಾರೆ.

ಸೌಲಭ್ಯಗಳನ್ನು ವಿಸ್ತರಿಸುವಂತೆ ಬೇಡಿಕೆ

ಸೌಲಭ್ಯಗಳನ್ನು ವಿಸ್ತರಿಸುವಂತೆ ಬೇಡಿಕೆ

ಈಗಾಗಲೇ ನಮಗೆ ನಾವು ಸೇವೆ ಸಲ್ಲಿಸುತ್ತಿರುವ ಹುದ್ದೆಯ ವೇತನ ಶ್ರೇಣಿಯ ಕನಿಷ್ಠ ವೇತನ ಮತ್ತು ಕನಿಷ್ಠ ವೇತನಕ್ಕೆ ಶೇ 90 ಡಿ ಎ, ಹಾಗೂ ಶೇ.90 ಎಚ್.ಆರ್.ಎ ಗಳನ್ನು ನೀಡಲಾಗುತ್ತಿದೆ. ಅಲ್ಲದೆ ಸರ್ಕಾರಿ ನೌಕರರ ಸರಿಸಮಾನವಾಗಿ ನಮಗೂ ಈ ಕೆಳಕಂಡ ಸೌಲಭ್ಯಗಳನ್ನು ವಿಸ್ತರಿಸುವಂತೆ ಬೇಡಿಕೆ ಇಟ್ಟಿದ್ದಾರೆ.

1) ನಿವೃತ್ತಿ /ಮರಣ ಹೊಂದಿದ ನೌಕರರಿಗೆ ನಿವೃತ್ತಿ ವೇತನ ಮಂಜೂರು ಮಾಡುವುದು

2) ವಾರ್ಷಿಕ ವೇತನ ಬಡ್ತಿ ನೀಡುವುದು, ಹೆಚ್.ಆರ್ ಎ, ಹಾಗೂ ತುಟ್ಟಿ ಭತ್ಯೆಯನ್ನು ಶೇ.100 ರಷ್ಟು ನೀಡುವುದು

3) ವೈದ್ಯಕೀಯ ಸೌಲಭ್ಯ, ಗಳಿಕೆ ರಜೆ ನಗದೀಕರಣ ಸೌಲಭ್ಯ, ಹಬ್ಬದ ಮುಂಗಡ ಸೌಲಭ್ಯವನ್ನು ಮತ್ತು ಎಲ್ಲ ಇಲಾಖೆಯ ನೌಕರರಿಗೆ ಆರ್ಥಿಕ ಸೌಲಭ್ಯಗಳನ್ನು ದಿನಾಂಕ 15-2-2013 ರಿಂದ ನೀಡುವುದು,

4) ಮರಣ ಹೊಂದಿದ ದಿನಗೂಲಿ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದ ಹುದ್ದೆ ನೀಡುವುದು,

5) ಒಟ್ಟಾರೆ ಸರ್ಕಾರಿ ನೌಕರರಿಗೆ ಒದಗಿಸಲಾದ ಎಲ್ಲ ಸೌಲಭ್ಯಗಳನ್ನು ವಿಸ್ತರಿಸುವುದು

ಮುಖ್ಯಕಾರ್ಯದರ್ಶಿ ಸಕಾರಾತ್ಮಕ ಸ್ಪಂದನೆ

ಮುಖ್ಯಕಾರ್ಯದರ್ಶಿ ಸಕಾರಾತ್ಮಕ ಸ್ಪಂದನೆ

ಮೇಲಿನಂತೆ ನಮ್ಮ ಬೇಡಿಕೆಗಳು ಇದ್ದು, ಈಗಾಗಲೇ ಸಂಘದಿಂದಲೂ ಸಹ ಸರ್ಕಾರಕ್ಕೆ ಹಾಗೂ ಮಾನ್ಯ ಮುಖ್ಯಮಂತ್ರಿಗಳಿಗೆ ಸಾಕಷ್ಟು ಮನವಿಗಳನ್ನು ಸಹ ನೀಡಲಾಗಿದೆ. ಅಲ್ಲದೇ ನಮ್ಮ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ 6 ಜನ ಮಂತ್ರಿಗಳು, 4 ಸಂಸದರು ಮತ್ತು ಸುಮಾರು 40 ಶಾಸಕರುಗಳು ನಮ್ಮ ಬೇಡಿಕೆ ಈಡೇರಿಸುವಂತೆ ಕುರಿತು ಪತ್ರದನ್ನು ಬರೆದಿರುತ್ತಾರೆ. ಆದರೂ ಬೇಡಿಕೆ ಈಡೇರಿಲ್ಲ ಬಡ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಮುಖ್ಯಕಾರ್ಯದರ್ಶಿಗಳು ಸ್ಪಂದಿಸಿದ್ದಾರೆ ಎಂದು ದಿನಗೂಲಿ ನೌಕರರ ಸಂಘದ ರಾಜ್ಯಾಧ್ಯಕ್ಷ ಹನುಮಂತಪ್ಪ ಕೋಳಿ ತಿಳಿಸಿದ್ದಾರೆ.

ಡೆತ್ ನೋಟ್ ಬರೆದು ದಿನಗೂಲಿ ನೌಕರ ಆತ್ಮಹತ್ಯೆ

ಡೆತ್ ನೋಟ್ ಬರೆದು ದಿನಗೂಲಿ ನೌಕರ ಆತ್ಮಹತ್ಯೆ

ಇನ್ನು, ಇದೇ ವೇಳೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅರಣ್ಯ ಇಲಾಖೆಯ ಕ್ಷೇಮಾಭಿವೃದ್ಧಿ ಅಡಿಯಲ್ಲಿ ಅಧಿಸೂಚಿಸಲ್ಪಟ್ಟ ನೌಕರರಾದ ಟಿ.ಮಲ್ಲಿಕಾರ್ಜುನ ಅವರು ಮುಂದಿನ ನಿವೃತ್ತಿ ಜೀವನದ ಬಗ್ಗೆ ಹಾಗೂ ಕುಟುಂಬ ನಿರ್ವಹಣೆಯ ಬಗ್ಗೆ ಆತಂಕಗೊಂಡು ತಮ್ಮ ಕಚೇರಿಯಲ್ಲಿ ಮುಖ್ಯಮಂತ್ರಿಗಳ ಹೆಸರಿನಲ್ಲಿ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರಿ ದಿನಗೂಲಿ ನೌಕರರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಅವರು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.

  ಬಿಎಂಟಿಸಿ ಬಸ್ ಅಲ್ಲಿ ಕಾಂಗ್ರೆಸ್ಸ್ ಕಾರ್ಯಕರ್ತರು!! | Oneindia Kannada
  ನೌಕರರ ಬೇಡಿಕೆಗಳನ್ನು ಶೀಘ್ರದಲ್ಲೇ ಈಡೇರಿಸಿ

  ನೌಕರರ ಬೇಡಿಕೆಗಳನ್ನು ಶೀಘ್ರದಲ್ಲೇ ಈಡೇರಿಸಿ

  ಸದರಿಯವರ ಕುಟುಂಬಕ್ಕೆ ಮುಂದಿನ ಜೀವನ ನಿರ್ವಹಣೆಯ ಸಲುವಾಗಿ ಕುಂಟುಂಬಕ್ಕೆ ಸಿಗುವ ಎಲ್ಲ ಸೌಲಭ್ಯಗಳನ್ನು ಒದಗಿಸಿ ನ್ಯಾಯ ದೂರಕಿಸಿಕೊಡಲು ಸಂಘದ ಪರವಾಗಿ ವಿನಂತಿಸಲಾಯಿತು. ಆ ಮೂಲಕ ದಿನಗೂಲಿ ನೌಕರರ ಬೇಡಿಕೆಗಳನ್ನು ಶೀಘ್ರದಲ್ಲೇ ಈಡೇರಿಸಿ, ಮುಂದಿನ ದುರಂತಗಳನ್ನು ತಡೆಯಬೇಕೆಂದು ಸಿಎಸ್ ರವಿಕುಮಾರ್ ಅವರಲ್ಲಿ ಒತ್ತಾಯಿಸಲಾಯಿತು. ಇದಕ್ಕೆ ಅವರು ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ, ಸರ್ಕಾರಿ ದಿನಗೂಲಿ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಹನುಮಂತಪ್ಪ ಕೋಳಿ, ಪ್ರಧಾನ ಕಾರ್ಯದರ್ಶಿ ಶಿವಬಸಪ್ಪ ಸವದತ್ತಿ ಹಾಗೂ ಇತರರು ಉಪಸ್ಥಿತರಿದ್ದರು.

  English summary
  The Karnataka State Government Daily Welfare Employees Union has requested the government to address the demands.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X