Get Updates
Get notified of breaking news, exclusive insights, and must-see stories!

ಕುಡಿಯುವ ನೀರಿನ ಪೂರೈಕೆ ನನ್ನ ಆದ್ಯತೆ : ಬಚ್ಚೇಗೌಡ

(ಬಚ್ಚೇಗೌಡರ ಸಂದರ್ಶನದ ಮುಂದುವರಿದ ಭಾಗ)

ಪ್ರಶ್ನೆ : ನೀವು ಕ್ಷೇತ್ರದ ಅಭಿವೃದ್ಧಿಗೆ ಹಾಕಿಕೊಂಡಿರೋ ಮಾರ್ಗಸೂಚಿ ಎಂತಹುದು?

ಬಚ್ಚೇಗೌಡ : ಈ ಕ್ಷೇತ್ರದ ಜನತೆಗೆ ಮುಖ್ಯವಾಗಿ ಬೇಕಾಗಿರೋದು ನೀರು. ಇಲ್ಲಿ ನೀರಿನ ಸಮಸ್ಯೆ ಬಹಳ ತೀವ್ರವಾಗಿದೆ. ಇದಕ್ಕೊಂದು ಶಾಶ್ವತ ಪರಿಹಾರ ಬೇಕು. ಮೊಯ್ಲಿಯವರು ನಾಮಕಾವಸ್ಥೆಗೆ ಉದ್ಘಾಟನೆ ಮಾಡಿದ್ದಾರೆ. ಈ ಯೋಜನೆಯನ್ನು ವೈಜ್ಞಾನಿಕವಾಗಿ ಜಾರಿಗೆ ತರೋದಿಕ್ಕೆ ನಾನು ಪ್ರಯತ್ನಿಸುತ್ತೇನೆ.

ಬೆಂಗಳೂರು ನಗರಕ್ಕೆ ಕುಡಿಯುವ ನೀರನ್ನು ಕಾವೇರಿ ನದಿಯಿಂದ ಪೂರೈಸುತ್ತಿದ್ದು, ಈ ವ್ಯವಸ್ಥೆಯನ್ನು ಯಲಹಂಕ ಮತ್ತು ಸುತ್ತಮುತ್ತಲ ಪ್ರದೇಶಕ್ಕೆ ವಿಸ್ತರಿಸುವ ಕಾರ್ಯಯೋಜನೆಯನ್ನು ರೂಪಿಸಿ ಅದನ್ನು ಅನುಷ್ಠಾನಕ್ಕೆ ತರಲು ರಾಜ್ಯ ಸರ್ಕಾರದ ಮೇಲೆ ಒತ್ತಡ ತರುತ್ತೇನೆ. ಅದೇ ರೀತಿ ಈ ಕ್ಷೇತ್ರದಲ್ಲಿ ಬರುವ ಒಂಭತ್ತು ನಗರಗಳಾದ ನೆಲಮಂಗಲ, ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ, ಗೌರಿಬಿದನೂರು, ಗುಡಿಬಂಡೆ, ಬಾಗೇಪಲ್ಲಿ, ದೇವನಹಳ್ಳಿ, ವಿಜಯಪುರ ಹಾಗೂ ಹೊಸಕೋಟೆ ನಗರಗಳಲ್ಲಿ ಜೆನರ್ಮ್ ಯೋಜನೆಯಡಿಯಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲು ಕೇಂದ್ರದಿಂದ ಹೆಚ್ಚಿನ ಹಣವನ್ನು ಈ ಕ್ಷೇತ್ರಕ್ಕೆ ತರಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತೇನೆ.

Chikkaballapur BJP candidate BN Bache Gowda interview - part3

ಕುಡಿಯುವ ನೀರಿನ ಬವಣೆ ಅತೀ ಹೆಚ್ಚಿರುವ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಲು ಕೇವಲ ಈ ಮೂರು ಜಿಲ್ಲೆಗಳ ಸಲುವಾಗಿ ಕರ್ನಾಟಕ ನಗರ ನೀರು ಮತ್ತು ಒಳಚರಂಡಿ ಮಂಡಳಿಯನ್ನು ವಿಭಜಿಸಿ ಆಗ್ನೇಯ ಕರ್ನಾಟಕ ಜಲಮಂಡಲಿಯನ್ನು (South-East Karnataka Water Board) ರಚಿಸಬೇಕು ಅನ್ನೋದು ನನ್ನ ಅಭಿಪ್ರಾಯ. ತಜ್ಞರೊಂದಿಗೆ ಚರ್ಚಿಸಿ, ಇದರ ಅನುಷ್ಠಾನಕ್ಕೆ ರಾಜ್ಯ ಸರ್ಕಾರದ ಮೇಲೆ ಒತ್ತಡ ತರುತ್ತೇನೆ.

ಚಿಕ್ಕಬಳ್ಳಾಪುರದ ಬೆಟ್ಟ ಗುಡ್ಡ ಪ್ರದೇಶದಲ್ಲಿ ಜನಿಸಿ ಗೌರಿ ಬಿದನೂರು ತಾಲೂಕಿನ ಮುಖಾಂತರ ಉತ್ತರಾಭಿಮುಖವಾಗಿ ಹರಿಯುವ ಪೆನ್ನಾರ್ ನದಿಗೆ ಅಡ್ಡಲಾಗಿ ಅಲ್ಲಲ್ಲಿ ಬ್ಯಾರೇಜ್‌ಗಳನ್ನು ಕಟ್ಟಿ ಅಲ್ಲಿನ ಸುತ್ತಮುತ್ತಲ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸಲು ಹಾಗೂ ಅಂತರ್ಜಲ ವೃದ್ಧಿಗೆ ಅನುಕೂಲ ಮಾಡಿಕೊಡಲಾಗುವುದು.

ಮಹಾನಗರದೊಂದಿಗೆ ಚಿಕ್ಕಬಳ್ಳಾಪುರದೊಡನೆ ಹೆಚ್ಚಿನ ಸಂಪರ್ಕ ಕಲ್ಪಿಸಿ, ಇಲ್ಲಿನ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ಕಲ್ಪಿಸಬೇಕಾದರೆ ಬೆಂಗಳೂರಿನ ಮಹಾನಗರವನ್ನು ಸುತ್ತುವರಿದಿರುವ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಜಿಲ್ಲೆಗಳನ್ನು ಸಂಪರ್ಕಿಸುವ ವರ್ತುಲ ರೈಲು (Circular Rail) ಯೋಜನೆಯನ್ನು ಅನುಷ್ಠಾನಗೊಳಿಸುವುದು ಅತಿ ಮುಖ್ಯವಾಗಿದೆ. ಇದರ ಅನುಷ್ಠಾನಕ್ಕೆ ಪ್ರಯತ್ನಿಸುತ್ತೇನೆ.

ಹೆದ್ದಾರಿಗಳ ನಿರ್ಮಾಣ ಹಾಗೂ ಸುಧಾರಣೆ, ಇಲ್ಲಿನ ಜನರ ಆರ್ಥಿಕ ಮಟ್ಟ ಸುಧಾರಿಸಲು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಂತೆ ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ಸಮೀಪ ಒಂದು ಒಣ ಬಂದರಿನ ನಿರ್ಮಾಣ, ಜೆನರ್ಮ್ ಅಡಿಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ವ್ಯಾಪ್ತಿಗೆ ಬರುವ ಎಲ್ಲಾ 9 ನಗರಗಳ ಸಮಗ್ರ ಅಭಿವೃದ್ಧಿ ಇತ್ಯಾದಿ ನನ್ನ ಕನಸುಗಳಾಗಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+