ಸಿಎಲ್‌ಪಿ ಸಭೆಗಾಗಿ ಮುಂಬೈನಿಂದ ಬೆಂಗಳೂರಿಗೆ ಬಂದ ಶಾಸಕ ಸುಧಾಕರ್
ಬೆಂಗಳೂರು, ಫೆಬ್ರವರಿ 8: ಚಿಕ್ಕಬಳ್ಳಾಪುರ ಶಾಸಕ ಡಾ. ಕೆ ಸುಧಾಕರ್ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ಅವರು ಮುಂಬೈನಿಂದ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದಾರೆ, ಆದರೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿ ಬೆಂಗಳೂರು ನಗರದೆಡೆಗೆ ಪ್ರಯಾಣ ಬೆಳೆಸಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈಗಾಗಲೇ ಈಶ್ವರ ಖಂಡ್ರೆ, ಇನ್ನಿತರೆ ಕಾಂಗ್ರೆಸ್ ಸದಸ್ಯರು ಆಗಮಿಸಿದ್ದು, ಉಮೇಶ್ ಜಾದವ್ ಆಗಮನ ಸಾಧ್ಯತೆ ಕಡಿಮೆ ಇದೆ ಎನ್ನಲಾಗುತ್ತಿದೆ.

ಸಭೆಯಲ್ಲಿ ಪಾಲ್ಗೊಳ್ಳುವಂತೆ ಮತ್ತು ಅಧಿವೇಶನದಲ್ಲಿ ಹಾಜರಿರುವಂತೆ ಎಲ್ಲಾ ಶಾಸಕರಿಗೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಭೆಯಲ್ಲಿ ಪಾಲ್ಗೊಳ್ಳಲು ಸುಧಾಕರ್ ಆಗಮಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications