R.V.Devaraj passes away: ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ.ದೇವರಾಜ್ ಹೃದಯಾಘಾತದಿಂದ ನಿಧನ
R.V.Devaraj passes away: ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ.ದೇವರಾಜ್ ಸೋಮವಾರ (ಡಿಸೆಂಬರ್ 2) ಹೃದಯಾಘಾತದಿಂದ ನಿಧನರಾಗಿದ್ದಾರೆ. ಹಾಗಾದ್ರೆ ಇವರ ರಾಜಕೀಯ ಹಿನ್ನೆಲೆ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಡಿಸೆಂಬರ್ 3ರಂದು ಜನ್ಮದಿನ ಹಿನ್ನೆಲೆ ಡಿಸೆಂಬರ್ 2ರ ಸೋಮವಾರದಂದು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದು, ಈ ವೇಳೆ ಹೃದಯಾಘಾತ ಸಂಭವಿಸಿದೆ. ಆಗ ತಕ್ಷಣವೇ ಅವರನ್ನು ಮೈಸೂರಿನಲ್ಲಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗೆಂದು ಜಯದೇವ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಇನ್ನೂ ವೈದ್ಯರು ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಿದ್ದಾರೆ ಎನ್ನಲಾಗಿದೆ.

ಆರ್.ವಿ.ದೇವರಾಜ್ ಅವರು 1957ರ ಡಿಸೆಂಬರ್ 3ರಂದು ಆರ್.ವಿ.ದೇವರಾಜ್ ಜನಿಸಿದ್ದರು. ಶಿಕ್ಷಣದ ಬಳಿಕ 1989-99ರಲ್ಲಿ ಚಾಮರಾಜಪೇಟೆ ಶಾಸಕರಾಗಿದ್ದರು. 2000ರಿಂದ ಅಕ್ಟೋಬರ್ 2007ರವರೆಗೆ ಕೆಎಸ್ಆರ್ಟಿಸಿ ಅಧ್ಯಕ್ಷ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಎಐಸಿಸಿ ಸದಸ್ಯರಾಗಿ ಸೇವೆ ಸಲ್ಲಿದ್ದರು.
ಇನ್ನೂ 2008ರಲ್ಲಿ ಕ್ಷೇತ್ರ ಮರುವಿಂಗಡನೆ ಆದಾಗ ಎಸ್.ಎಂ.ಕೃಷ್ಣ ಅವರಿಗೆ ಬೆಂಗಳೂರಲ್ಲಿ ಸ್ಪರ್ಧಿಸಲು ಕ್ಷೇತ್ರ ತ್ಯಜಿಸುತ್ತಾರೆ. ಚಾಮರಾಜಪೇಟೆ ಕ್ಷೇತ್ರ ಆ ಸಮಯದಲ್ಲಿ ಕಾಂಗ್ರೆಸ್ಗೆ ಪೂರಕವಾಗಿತ್ತು. ಎಸ್.ಕೃಷ್ಣ ಸಿಎಂ ಆದ ವೇಳೆ ಆರ್.ವಿ ದೇವರಾಜ್ ಆಪ್ತರಾಗಿದ್ದು, ನಂತರ ಚಿಕ್ಕಪೇಟೆ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. ಚಾಮರಾಜಪೇಟೆ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಕ್ಷೇತ್ರದ ಕ್ಷೇತ್ರ ಪುನರ್ವಿಂಗಡಣೆ ನಂತರ ಚಿಕ್ಕಪೇಟೆಯ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದರು. ನಂತರ 2016ರಲ್ಲಿ ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಆಗಿದ್ದರು.
ಮಾಜಿ ಶಾಸಕ ಆರ್.ವಿ. ದೇವರಾಜ್ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಡಿಕೆ ಶಿವಕುಮಾರ್ ಸೇರಿದಂತೆ ಹಲವಾರು ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಅವರ ರಾಜಕೀಯ ಸಾಧನೆ ಬಗ್ಗೆ ಮೆಲುಕು ಹಾಕಿದ್ದಾರೆ.
ಡಿಕೆ ಶಿವಕುಮಾರ್ ಸಂತಾಪ: ಈ ಕುರಿತು ಟ್ವೀಟ್ ಮಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, 'ಚಿಕ್ಕಪೇಟೆ ಮಾಜಿ ಶಾಸಕ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಶ್ರೀ ಆರ್.ವಿ.ದೇವರಾಜ್ ಅವರ ನಿಧನದ ಸುದ್ದಿ ತೀವ್ರ ದುಃಖ ತಂದಿದೆ. ರಾಜಕೀಯ ಮತ್ತು ಸಮಾಜಸೇವೆ ಮೂಲಕ ಚಿಕ್ಕಪೇಟೆ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ. ಅವರ ಅಗಲಿಕೆಯಿಂದಾಗಿ ರಾಜ್ಯ ರಾಜಕಾರಣ ಮತ್ತು ಚಿಕ್ಕಪೇಟೆ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ. ದೇವರಾಜ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಬರೆದುಕೊಂಡಿದ್ದಾರೆ.












Click it and Unblock the Notifications