ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜನಪ್ರತಿನಿಧಿಗಳ ಮಕ್ಕಳು ಸರ್ಕಾರಿ ಶಾಲೆಗೆ ಸೇರೋದು ಕಡ್ಡಾಯ?

ಜನಪ್ರತಿನಿಧಿಗಳ ಮಕ್ಕಳು ಸರ್ಕಾರಿ ಶಾಲೆಗೆ ಸೇರಲಿ. ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರದಿಂದ ಸರ್ಕಾರಕ್ಕೆ ಶಿಫಾರಸು.

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 5: ಇನ್ನು ಚುನಾಯಿತ ನಾಯಕರು ಹಾಗೂ ಸರ್ಕಾರಿ ಅಧಿಕಾರಿಗಳು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ ದಾಖಲಾತಿ ಮಾಡಿಸಬೇಕೆಂಬ ಕಟ್ಟುನಿಟ್ಟಾದ ಆದೇಶವನ್ನು ಜಾರಿಗೊಳಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ (ಕೆಡಿಎ) ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿರುವ ಕೆಬಿಎಯ ಏಳು ಸದಸ್ಯರ ನಿಯೋಗ ಮಂಗಳವಾರ (ಸೆಪ್ಟೆಂಬರ್ 5) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನ್ನ ವರದಿಯನ್ನು ಸಲ್ಲಿಸಿದೆ. ಇದರಲ್ಲಿ ಸುಮಾರು 21 ಶಿಫಾರಸುಗಳನ್ನು ಸರ್ಕಾರಕ್ಕೆ ನೀಡಲಾಗಿದೆ.

Children of People representativs should study in Government schools: KDA

ಇದರಲ್ಲಿ ಪ್ರಮುಖವಾದದ್ದು, ಜನಪ್ರತಿನಿಧಿಗಳು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸುವುದನ್ನು ಕಡ್ಡಾಯಗೊಳಿಸುವುದು. ಎಲ್ಲಾ ಜನಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಕಳುಹಿಸುವುದೇ ಆದರೆ, ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಅಧಿಕಾರಿಗಳಿಗೆ, ಜನನಾಯಕರಿಗೆ ತಿಳಿಯುವುದಾದರೂ ಹೇಗೆ. ಇವರೆಲ್ಲರೂ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸಿದರೆ ಮಾತ್ರ ಆ ಶಾಲೆಗಳಲ್ಲಿನ ಶಿಕ್ಷಣದ ಗುಣಮಟ್ಟ ಏರಿಕೆಯಾಗುತ್ತದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.

English summary
The Kannada Development Authority (KDA), which recently made headlines for their aggressive push against Hindi imposition, asked the state government to make it mandatory for elected representatives and government employees to send their children to government schools.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X