ನಮ್ಮ ಮೆಟ್ರೋಗೆ ಸೇರ್ಪಡೆಯಾಗಲಿವೆ 216 ಚೀನಾ ಬೋಗಿಗಳು
ಬೆಂಗಳೂರು, ಫೆಬ್ರವರಿ 22: ನಮ್ಮ ಮೆಟ್ರೋಗೆ 216 ಬೋಗಿಗಳು ಸೇರ್ಪಡೆಗೊಳ್ಳಲಿವೆ. ನಮ್ಮ ಮೆಟ್ರೋದ ಎರಡನೇ ಹಂತದ ಯೋಜನೆಗೆ ಬೇಕಿರುವ ಬೋಗಿಗಳ ಪೂರೈಕೆಗೆ ಚೀನಾ ಮೂಲದ ಸಂಸ್ಥೆಗೆ ಗುತ್ತಿಗೆ ನೀಡಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ.
ಸಿಆರ್‌ಆರ್‌ಸಿ ಕಾರ್ಪೊರೇಷನ್ ಆಂಧ್ರಪ್ರದೇಶದ ಶ್ರೀ ಸಿಟಿಯಲ್ಲಿ ಬೋಗಿ ನಿರ್ಮಾಣ ಘಟಕ ಸ್ಥಾಪಿಸುತ್ತಿದೆ.. ಬಿಎಂಆರ್‌ಸಿಎಲ್ ಜೊತೆ ಒಪ್ಪಂದ ಏರ್ಪಟ್ಟ ನಂತರದಲ್ಲಿ 216 ಬೋಗಿಗಳ ಪೈಕಿ 204 ಬೋಗಿಗಳನ್ನು ಘಟಕದಲ್ಲೇ ನಿರ್ಮಿಲಾಗುತ್ತದೆ. ಇತರೆ 12 ಬೋಗಿಗಳನ್ನು ಚೀನಾದಲ್ಲಿ ನಿರ್ಮಿಸಿ ನೀಡಲಾಗುತ್ತದೆ.
ನಮ್ಮ ಮೆಟ್ರೋ ಎರಡನೇ ಹಂತದ 7 ಮಾರ್ಗಗಳ ಪೈಕಿ ನಾಲ್ಕು ಮಾರ್ಗಗಳು ಮೊದಲನೇ ಹಂತದಲ್ಲಿ ನಿರ್ಮಾಣಗೊಂಡಿರುವ ಮಾರ್ಗಗಳ ವಿಸ್ತರಣಾ ಮಾರ್ಗಗಳಾಗಿವೆ.

ಇವುಗಳ ಪೈಕಿ ಯಲಚೇನಹಳ್ಳಿ-ಅಂಜನಾಪುರ ಟೌನ್ ಶಿಪ್ ಮಾರ್ಗದಲ್ಲಿ ಆಗಸ್ಟ್‌ನಿಂದ ಹಾಗೂ ನಾಯಂಡಹಳ್ಳಿ-ಕೆಂಗೇರಿ ಮಾರ್ಗದಲ್ಲಿ ಅಕ್ಟೋಬರ್‌ನಿಂದ ರೈಲು ಸಂಚಾರ ಆರಂಭವಾಗುವ ನಿರೀಕ್ಷೆ ಇದೆ. ಅದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
ನಗರದಲ್ಲಿ ಸಂಚಾರ ದಟ್ಟಣೆ ನಿವಾರಣೆಗಾಗಿ ಮೆಟ್ರೋ ಯೋಜನೆ ವಿಸ್ತರಣೆ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ 42 ಕಿ.ಮೀ ಉದ್ದದ ಮಾರ್ಗ ನಿರ್ಮಿಸಿ ರೈಲು ಸಂಚಾರ ಆರಂಭಿಸಲಾಗಿದೆ.
ಜೊತೆಗೆ ಇದೀಗ ಎರಡನೇ ಹಂತದಲ್ಲಿ ಒಟ್ಟು ನಾಲ್ಕು ಮಾರ್ಗಗಳಲ್ಲಿ 72 ಕಿ.ಮೀ ಉದ್ದದ ಮಾರ್ಗವನ್ನು ವಿಸ್ತರಿಸಲಾಗುತ್ತಿದೆ. ಆ ಮಾರ್ಗಗಳ ಪೈಕಿ ಯಲಚೇನಹಳ್ಳಿ-ಅಂಜನಾಪುರ ಟೌನ್ ನಡುವಿನ ವಿಸ್ತೃತ ಮಾರ್ಗದಲ್ಲಿ ಆಗಸ್ಟ್‌ನಲ್ಲಿ ರೈಲು ಸಂಚಾರ ಆರಂಭವಾಗುವ ನಿರೀಕ್ಷೆ ಇದೆ.
ಎರಡನೇ ಹಂತಕ್ಕೆ ಅಗತ್ಯವಿರುವ ಒಟ್ಟು ಬೋಗಿಗಳ ಪೈಕಿ 216 ಬೋಗಿಗಳ ಪೂರೈಕೆಗಾಗಿ ಚೀನಾ ಮೂಲದ ಸಿಆರ್‌ಆರ್‌ಸಿ ಕಾರ್ಪೊರೇಷನ್ ಸಂಸ್ಥೆಗೆ ಗುತ್ತಿಗೆ ನೀಡಲಾಗುತ್ತಿದೆ. ಇದಕ್ಕಾಗಿ ಒಟ್ಟು 235 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ









Click it and Unblock the Notifications