ಚಿನ್ನಸ್ವಾಮಿ ಕ್ರೀಡಾಂಗಣ ಬಾಂಬ್ ಸ್ಫೋಟ ಪ್ರಕರಣ: ಆರೋಪಿಗಳ ತಪ್ಪೊಪ್ಪಿಗೆ

ಬೆಂಗಳೂರು, ಜುಲೈ 4: 2010ರ ಐಪಿಎಲ್ ಪಂದ್ಯಾವಳಿ ವೇಳೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳು ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾರೆ.

ಬಿಹಾರದ ದರ್ಬಾಂಗದ ಗೌಹರ್ ಅಜೀಜಿ ಕೋಮನಿ, ಮಧುಬನಿಯ ಕಮಲ್ ಹಸನ್ ಹಾಗೂ ನವದೆಹಲಿಯ ಮಹಮದ್ ತಾರೀಕ್ ಅಂಜು ಎಹ್ಸಾನ್ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಎನ್‌ಐಎ ವಿಶೇಷ ನ್ಯಾಯಾಲಯದ ಮುಂದೆ ಬುಧವಾರ ತಪ್ಪೊಪ್ಪಿಗೆ ಅಫಿಡವಿಟ್ ಸಲ್ಲಿಸಿದರು.

ತಪ್ಪೊಪ್ಪಿಗೆ ಹೇಳಿಕೆ ನೀಡುವಂತೆ ಯಾರಾದರೂ ಒತ್ತಡ ಹೇರಿದ್ದಾರೆಯೇ ಎಂದು ಪ್ರಶ್ನಿಸಿದ ಎನ್‌ಐಎ ನ್ಯಾಯಾಲಯದ ನ್ಯಾಯಾಧೀಶರು, ಆದೇಶವನ್ನು ಜುಲೈ 9ಕ್ಕೆ ನಿಗದಿಪಡಿಸಿದರು.

chinnaswamy stadium blast case: accused confessed

ಅಂದು ಸರ್ಕಾರ ಹಾಗೂ ಆರೋಪಿಗಳ ಪರ ವಕೀಲರು ವಾದ ಮಂಡಿಸಲಿದ್ದಾರೆ.

ಜಿಹಾದ್ ಹೆಸರಿನಲ್ಲಿ ಬಾಂಬ್ ಸ್ಫೋಟಕ್ಕೆ ಸಹಕರಿಸುವಂತೆ ಕೆಲವರು ತಮ್ಮನ್ನು ಪ್ರಚೋದಿಸಿದರು. ಎಸಗಿರುವ ಅಪರಾಧದ ಬಗ್ಗೆ ಪಶ್ಚಾತ್ತಾಪ ಉಂಟಾಗಿದೆ. ತಪ್ಪೊಪ್ಪಿಗೆ ಹೇಳಿಕೆ ನೀಡುತ್ತಿದ್ದು, ಶಿಕ್ಷೆ ಪ್ರಮಾಣ ಕಡಿಮೆ ಮಾಡಿ ಎಂದು ಆರೋಪಿಗಳು ಮನವಿ ಮಾಡಿದರು.

2010ರ ಆಗಸ್ಟ್ 27ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಸಂಜೆ ಪಂದ್ಯ ನಡೆದಿತ್ತು. ಪಂದ್ಯದ ಆರಂಭಕ್ಕೆ ಕೆಲವೇ ನಿಮಿಷಗಳ ಮೊದಲು ಕ್ರೀಡಾಂಗಣದ ಹೊರಭಾಗದಲ್ಲಿ ಲಘು ಪ್ರಮಾಣದ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಸುಮಾರು 15 ಮಂದಿ ಗಾಯಗೊಂಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಗೌಹರ್ ಅಜೀಜಿ ಕೋಮನಿ, ಕಮಲ್ ಹಸನ್, ಮೊಹಮ್ಮದ್ ಕಫೀಲ್ ಅಖ್ತರ್ ಹಾಗೂ ನವದೆಹಲಿಯ ಮಹಮದ್ ತಾರೀಕ್ ಅಂಜುಮ್ ಎಹ್ಸಾನ್ ಅವರನ್ನು ಬಂಧಿಸಲಾಗಿತ್ತು.

ಶಿಕ್ಷೆಯಲ್ಲಿ ವಿನಾಯಿತಿ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಮಂಗಳವಾರ ತಿರಸ್ಕರಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+